ಹಾವೇರಿ | ವಿದ್ಯುತ್ ವಿತರಣೆಯ ಅರ್ಜಿ ಹಿಂಪಡೆದ ಟಾಟಾ ಪವರ್; ಐಕ್ಯ ಹೋರಾಟಕ್ಕೆ ಸಂದ ಗೆಲುವು: ಡಿವೈಎಫ್ಐ

Date:

ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ಟಾಟಾ ಪವರ್ ಕಂಪನಿ ಸಲ್ಲಿಸಿದ್ದ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದ ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ (Parallel Licence) ಅರ್ಜಿಯನ್ನು ಶುಕ್ರವಾರ ಹಿಂಪಡೆದಿದೆ. ಇದು ರಾಜ್ಯದ ಜನರ ಐಕ್ಯ ಹೋರಾಟಕ್ಕೆ ಸಂದ ಜಯವಾಗಿದ್ದು, ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ ಕರ್ನಾಟಕ ರಾಜ್ಯ ಸಮಿತಿಯು ಸ್ವಾಗತಿಸುತ್ತದೆ” ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ತಿಳಿಸಿದ್ದಾರೆ. 

- Advertisement -

ಹಾವೇರಿ ಪಟ್ಟಣದಲ್ಲಿ ಅವರು ಶುಕ್ರವಾರ ನೀಡಿದ ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿ, “ಕೆಇಬಿ ಎಂಜಿನಿಯರ್ಸ್ ಅಸೋಸಿಯೇಷನ್ ಹಾಗೂ ವಿದ್ಯುತ್ ಇಲಾಖೆಯ ಖಾಯಂ & ಖಾಯಮೇತರರ ಸಂಘ, ಸಿಐಟಿಯು, ಕೆಪಿಆರ್.ಎಸ್ ಸೇರಿದಂತೆ ರಾಜ್ಯದ ರೈತ-ಕಾರ್ಮಿಕ ಹಾಗೂ ಜನಪರ ಸಂಘಟನೆಗಳ ನೇತೃತ್ವದಲ್ಲಿ ಟಾಟಾ ಕಂಪನಿಗೆ ವಿದ್ಯುತ್‌ ವಿತರಣಾ ಪರವಾನಗಿ ನೀಡದಂತೆ ಒತ್ತಾಯಿಸಿ ರಾಜ್ಯವ್ಯಾಪಿ ಜನತೆ ನಡೆಸಿದ ಒಗ್ಗಟ್ಟಿನ ಚಳುವಳಿಗೆ ದೊರೆತ ಮಹತ್ವದ ಜಯ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

“ಕೆಇಆರ್.ಸಿ ನೇತೃತ್ವದಲ್ಲಿಂದು ನಡೆದ ಕಲಾಪದಲ್ಲಿ ಟಾಟಾ ಪವರ್ ಕಂಪನಿಯು, ಕರ್ನಾಟಕದ ಎಲ್ಲಾ 19 ಕಂದಾಯ ಜಿಲ್ಲೆಗಳಲ್ಲಿ ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ ಪಡೆಯಲು ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯುವ ಮನವಿ ಸಲ್ಲಿಸಿತು. ವಿಚಾರಣೆ ವೇಳೆ ಅರ್ಜಿಯಲ್ಲಿ ಕೆಲವು ಲೋಪಗಳು (lacunae) ಇರುವುದನ್ನು ಕೆಇಆರ್‌ಸಿ ಅಧ್ಯಕ್ಷರು ಗಮನಿಸಿ, ಬಳಿಕ ಅರ್ಜಿ ಹಿಂಪಡೆಯಲು ಸಲ್ಲಿಸಿದ್ದ ಮನವಿಯನ್ನು ಅಂಗೀಕರಿಸಿರುವುದು ಸ್ವಾಗತಾರ್ಹವಾದುದು” ಎಂದು ಹೇಳಿದ್ದಾರೆ.

“ಟಾಟಾ ಪವರ್ ಕಂಪೆನಿಯು ವಿದ್ಯುತ್ ವಿತರಣೆಯ ಅರ್ಜಿ ಹಿಂಪಡೆದಿರುವುದು ನವ ಉದಾರವಾದಿ ನೀತಿಗಳ ವಿರುದ್ಧದ ಮಹತ್ವದ ಜಯವಾಗಿದೆ. ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣಕ್ಕೆ ಮತ್ತಷ್ಟು ಅವಕಾಶ ಕಲ್ಪಿಸಬಹುದಾದ ಆತಂಕಕಾರಿ ಅಂಶಗಳಿರುವ ವಿದ್ಯುತ್ ತಿದ್ದುಪಡಿ ಕಾಯ್ದೆ-2025 ಅನ್ನು ಕೇಂದ್ರ ಬಿಜೆಪಿ ಸರ್ಕಾರ ಸಂಸತ್ತಿನಿಂದ ಹಿಂಪಡೆಯಬೇಕು” ಎಂದು ಆಗ್ರಹಿಸಿದ್ದಾರೆ. 

“ಕೇಂದ್ರ ಸರಕಾರ ಈ ಜನವಿರೋಧಿ ಅಪಾಯಕಾರಿ ಕಾಯ್ದೆಯನ್ನು ಹಿಂಪಡೆಯದಿದ್ದರೆ ತೀವ್ರವಾದ ಹೋರಾಟವನ್ನು ನಡೆಸಬೇಕಾಗುತ್ತದೆ” ಎಂದು ಎಚ್ಚರಿಸಿದ್ದಾರೆ.

“ಇದೀಗ ಟಾಟಾ ಪವರ್ ಕಂಪೆನಿಯು ಜನರ ಐಕ್ಯ ಚಳುವಳಿಗೆ ಮಣಿದು ತನ್ನ ಅರ್ಜಿ ಹಿಂಪಡೆದಿರುವುದೇನೊ ಸರಿ. ಆದರೆ ರಾಜ್ಯ ಕಾಂಗ್ರೇಸ್ ಸರಕಾರ ಹಾಗೂ ಕೇಂದ್ರ ಬಿಜೆಪಿ ಸರಕಾರ ವಿದ್ಯುತ್ ವಿತರಣೆಗೆ ಖಾಸಗಿ ಕಂಪೆನಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿರುವುದೇ ಜನದ್ರೋಹ ನೀತಿಯಾಗಿದೆ. ಕೇಂದ್ರದ ಬಿಜೆಪಿ ಸರಕಾರ ಮತ್ತು ರಾಜ್ಯದ ಕಾಂಗ್ರೇಸ್ ಸರಕಾರ ಭವಿಷ್ಯದಲ್ಲಿ ಜನತೆಯ ಹಿತದೃಷ್ಟಿಯಿಂದ ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿಯವರಿಗೆ ಅವಕಾಶ ಕಲ್ಪಿಸುವ ಯಾವ ಅವಕಾಶವನ್ನೂ ಒದಗಿಸದೇ ತಮ್ಮ ಜನಹಿತ ಕುರಿತ ಬದ್ದತೆ ಹಾಗೂ ಇಚ್ಛಾಶಕ್ತಿಯನ್ನು ಮೆರೆಯಬೇಕು” ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮರಗಳೇ ಇಲ್ಲದ ಜಾಗಕ್ಕೆ ಅರಣ್ಯ ಇಲಾಖೆಯ ಆಕ್ಷೇಪ; ಸಾರ್ವಜನಿಕರ ಆಕ್ರೋಶ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದ ಕೇನೆಕುಂಜದ ಸರಕಾರಿ ಜಮೀನಿನಲ್ಲಿ...

ರಾಯಚೂರು | ಬರ ಪರಿಹಾರ ಸಮೀಕ್ಷೆ: ಪಾಟ್ನಾದ ಭತ್ತದ ಅಧಿಕಾರಿ ಭೇಟಿ

ಪಾಟ್ನಾದ ಭತ್ತ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಮಾನಸಿಂಗ್ ಅವರ ನೇತೃತ್ವದ ಅಧಿಕಾರಿಗಳ...

161 ಕಾಮಗಾರಿಗಳಿಗೆ ಶಂಕುಸ್ಥಾಪನೆ-ಉದ್ಘಾಟನೆ; ಜನಕಲ್ಯಾಣವೇ ಸರ್ಕಾರದ ಸಂಕಲ್ಪ: ಸಿದ್ದರಾಮಯ್ಯ

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡಲಾಗಿದ್ದು, ದಾಸನೂರು...

ಸಾಗರ | ತಾಲೂಕು ಮಟ್ಟದ ಪ್ರಜಾಸೇವೆ ಸಭೆ; 500ಕ್ಕೂ ಹೆಚ್ಚು ಅರ್ಜಿಗಳ ಸ್ವೀಕಾರ

ಸಾಗರ ತಾಲೂಕಿನಲ್ಲಿ ಮನೆ ಬಾಗಿಲಿಗೆ ಬಂತು ಸರ್ಕಾರ–ಸೇವೆಗೆ ಇರಲಿದೆ ಸಹಕಾರ ಎಂಬ...