ಹಾವೇರಿ | ಪರಂಪರೆಯ ರಕ್ಷಣೆಯಲ್ಲಿ ಯುವಜನತೆಯ ಪಾತ್ರ ಅತ್ಯಮೂಲ್ಯ: ಪ್ರೊ. ಮಂಜುನಾಥ ಎಂ ಹೊಳ್ಳಿಯವರ

Date:

“ದೇಶವೊಂದರ ಸಂಸ್ಕೃತಿ, ಇತಿಹಾಸ ಮತ್ತು ಪರಂಪರೆ ಆ ದೇಶದ ಜೀವಾಳ. ಆದರೆ ಇಂದಿನ ಆಧುನಿಕತೆ ಹಾಗೂ ಜಾಗತೀಕರಣದ ಅಬ್ಬರದಲ್ಲಿ ನಮ್ಮ ಹೆಮ್ಮೆಯ ಸಾಂಸ್ಕೃತಿಕ ಆಸ್ತಿಗಳು ಮರೆಯಾಗುತ್ತಿರುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ಭವ್ಯ ಪರಂಪರೆಯನ್ನು ಮುಂದಿನ ಪೀಳಿಗೆಗೆ ದಾಟಿಸುವಲ್ಲಿ ಮತ್ತು ಅದರ ರಕ್ಷಣೆಯಲ್ಲಿ ಯುವಜನತೆಯ ಪಾತ್ರ ಅತ್ಯಂತ ಅಮೂಲ್ಯವಾಗಿದೆ” ಎಂದು ಹಾವೇರಿಯ ಕೆ.ಎಲ್.ಇ. ಸಂಸ್ಥೆಯ, ಗುದ್ಲೆಪ್ಪ ಹಳ್ಳಿಕೇರಿ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಮಂಜುನಾಥ ಎಂ ಹೊಳ್ಳಿಯವರ ತಿಳಿಸಿದರು. 

- Advertisement -

ಹಾವೇರಿ ಪಟ್ಟಣದದಲ್ಲಿ ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ, ಹಾವೇರಿ ಉಪ ವಲಯ, ಕರ್ನಾಟಕ ಇತಿಹಾಸ ಅಕಾಡೆಮಿ ಬೆಂಗಳೂರು, ಹಾಗೂ ಹಾವೇರಿಯ ಕೆ.ಎಲ್.ಇ. ಸಂಸ್ಥೆಯ, ಗುದ್ಲೆಪ್ಪ ಹಳ್ಳಿಕೇರಿ ಪದವಿ ಮಹಾವಿದ್ಯಾಲಯದ ಇತಿಹಾಸ ವಿಭಾಗ ಹಾಗೂ ಪರಂಪರೆ ಕೂಟ ಇವುಗಳ ಸಹಯೋಗದಲ್ಲಿ ಒಂದು ದಿನದ ವಿಸ್ತರಣಾ ಚಟುವಟಿಕೆ ಅಂಗವಾಗಿ ಸ್ಮಾರಕಗಳ ಸಂರಕ್ಷಣೆ ಜಾಗೃತಿ ಮತ್ತು ಅರಿವು ಮತ್ತು ಪರಂಪರಾ ನಡಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಸಂಪನ್ಮೂಲ ವ್ಯಕ್ತಿಯಾಗಿ ಡಾ. ಕೃಷ್ಣ ಕಿರೇಸೂರ ಅವರು, “ಹಾವೇರಿ ಪುರಸಿದ್ದೇಶ್ವರ ದೇವಾಲಯದ ವಾಸ್ತು-ಶಿಲ್ಪ-ಶಾಸನಗಳ ಕುರಿತು ಪ್ರತ್ಯಕ್ಷ ವಿವರಿಸುತ್ತಾ, “ಸಾಮಾಜಿಕ ಮಾಧ್ಯಮಗಳ ಮೂಲಕ ನಮ್ಮ ಕಲೆ, ವಾಸ್ತುಶಿಲ್ಪ ಮತ್ತು ಇತಿಹಾಸದ ಬಗ್ಗೆ ಜಾಗೃತಿ ಮೂಡಿಸಬಹುದು. ರೀಲ್ಸ್, ವ್ಲಾಗ್ಸ್ ಮತ್ತು ಬ್ಲಾಗ್ ಮೂಲಕ ಜಗತ್ತಿಗೆ ನಮ್ಮ ಪರಂಪರೆಯನ್ನು ಪರಿಚಯಿಸಬಹುದು” ಎಂದು ಹೇಳಿದರು.

ಪ್ರಾಸ್ತಾವಿಕ ಭಾಷಣ ಮಾಡಿದ ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಎಸ್.ಆರ್. ಕೋರಿಶೆಟ್ಟರ ಮಾತನಾಡಿ, “ಪ್ರಾಚೀನ ಸ್ಮಾರಕಗಳು ನಮ್ಮ ಪ್ರಾಚೀನ ಸಂಸ್ಕೃತಿಯ ಪ್ರತಿಬಿಂಬಗಳು. ನಮ್ಮ ಪ್ರಾಚೀನ ಪರಂಪರೆ ಭವ್ಯವಾಗಿದೆ. ಆಧುನಿಕತೆಯ ಪ್ರಭಾವದಿಂದ ಇವುಗಳು ಇಂದು ವಿನಾಶದ ಅಂಚಿನಲ್ಲಿದ್ದು, ಇವುಗಳನ್ನು ರಕ್ಷಿಸಿಕೊಳ್ಳಬೇಕಾಗಿದೆ” ಎಂದು ಹೇಳಿದರು.

ಪರಂಪರೆ ಕೂಟದ ಸಂಚಾಲಕ ಡಾ. ಶರಣಪ್ಪ ಜಗ್ಗಲ ಅವರು ಮಾತನಾಡಿ, “ಪರಂಪರೆ ಎಂಬುದು ಕೇವಲ ಗತಕಾಲದ ನೆನಪಲ್ಲ, ಅದು ನಮ್ಮ ಅಸ್ತಿತ್ವದ ಗುರುತು. ಯುವಜನತೆ ಕೇವಲ ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರು ಹೋಗದೆ, ತಮ್ಮ ಬೇರುಗಳನ್ನು ಗಟ್ಟಿಯಾಗಿ ಹಿಡಿದಿಟ್ಟುಕೊಂಡಾಗ ಮಾತ್ರ ದೇಶದ ಹೆಮ್ಮೆಯ ಪರಂಪರೆ ಸೌರಕ್ಷಿಸಲು ಸಾಧ್ಯ. ನಮ್ಮ ಪರಂಪರೆ ನಮ್ಮ ಹೆಮ್ಮೆ ಎಂಬ ಭಾವನೆ ಪ್ರತಿಯೊಬ್ಬ ಯುವಮನಸ್ಸಿನಲ್ಲಿ ಮೂಡಬೇಕಿದೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ 125ಕ್ಕೂ ಅಧಿಕ ವಿದ್ಯಾರ್ಥಿಗಳು ಪರಂಪರಾ ನಡಿಗೆಯಲ್ಲಿ ಹಾವೇರಿ ನಗರದ ಜನಸಾಮನ್ಯರಿಗೆ ಪ್ರಾಚೀನ ಸ್ಮಾರಕಗಳ ಸಂರಕ್ಷಣೆಯ ಅರಿವು ಮತ್ತು ಜಾಗೃತಿ ಮೂಡಿಸುವ ಕಾರ್ಯ ಮಾಡಿದರು.

ಕಾರ್ಯಕ್ರಮಬಿ.ಎ ಅಂತಿಮ ವರ್ಷದ ವಿದ್ಯಾರ್ಥಿನಿ ನೇತ್ರಾ ಗುಳೇದ ಕಾರ್ಯಕ್ರಮವನ್ನು ನಿರೂಪಿಸಿದರು. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ, ಹಾವೇರಿ ಉಪ ವಲಯ, ಹಾವೇರಿಯ ಸಿಬ್ಬಂಧಿ ವರ್ಗದವರು, ಇಂಗ್ಲೀಷ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸೌಭಾಗ್ಯ ಕೋಳಿವಾಡ, ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಗುರುರಾಜ ಬಾರ್ಕಿ, ಹಳೆಯ ವಿದ್ಯಾರ್ಥಿ ಮಿತ್ರ ಗುರುನಂಜಪ್ಪ ಕುಂಬಾರಿ, ನಗರದ ಹಿರಿಯ ನಾಗರಿಕರು ಇದರಲ್ಲಿ ಪಾಲ್ಗೊಂಡರು. ವಿದ್ಯಾರ್ಥಿನಿ ನಾಜ್ರೀನ ಭಾನು ಸೇತಸನದಿ  ಪ್ರಾರ್ಥಿಸಿದರು. ಬಿ.ಎ ಅಂತಿಮ ವರ್ಷದ ವಿದ್ಯಾರ್ಥಿ ಮಣಿಕಂಠ ಗೋದಮನಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...