ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

Date:

“ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ. ಹಾಗಾಗಿ ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ” ಎಂದು ಮುನ್ಸಿಪಲ್ ಹೈಸ್ಕೂಲಿನ ಪ್ರಧಾನ ಗುರುಮಾತೆ ಶೋಭಾ ಜಾಗಟಗೇರಿ ನುಡಿದರು.

- Advertisement -

ಹಾವೇರಿ ಪಟ್ಟಣದ ಶಿವಯೋಗೀಶ್ವರ ನಗರದಲ್ಲಿ ಲೇಖಕ, ಶಿಕ್ಷಕ ಜಿ.ಎಂ.ಓಂಕಾರಣ್ಣನವರ ಅವರ ಮೆನೆಯಲ್ಲಿ ಮನೆಗೊಂದು ಗ್ರಂಥಾಲಯ ಜಿಲ್ಲಾ ಜಾಗೃತಿ ಸಮಿತಿ ವತಿಯಿಂದ ಪುಸ್ತಕ ಪ್ರಾಧಿಕಾರದ ೫೩ನೇ ಗ್ರಂಥಾಲಯವನ್ನು ಉದ್ಘಾಟಿಸಿ ಶ್ರೀಮತಿ ಜಾಗಟಗೇರಿ ಮೇಲಿನಂತೆ ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಪುಸ್ತಕದ ಓದು ಕ್ಷೀಣಿಸುತ್ತಿರುವ ಸಂದಿಗ್ಧ ಸ್ಥಿತಿಯಲ್ಲಿ ಗ್ರಂಥಾಲಯಗಳ ಅವಶ್ಯಕತೆ ಇದೆ.  ಐದು ಸಾವಿರ ಪುಸ್ತಕಗಳು ಒಂದು ಕಾಲದಲ್ಲಿ ಮುನ್ಸಿಪಲ್ ಹೈಸ್ಕೂಲಿನಲ್ಲಿ ಓದಲು ಸಿಗುತ್ತಿದ್ದವು. ಅದಕ್ಕಾಗಿ ಸಾರ್ವಜನಿಕ ಸದಸ್ಯತ್ವವನ್ನೂ ಮಾಡಿದ ಕೀರ್ತಿ ಹೈಸ್ಕೂಲಿಗಿದೆ. ಈ ಪರಂಪರೆಯನ್ನು ಮತ್ತೆ ಕಟ್ಟಬೇಕು” ಎಂದರು.

ಅಧ್ಯಕ್ಷತೆಯನ್ನು ವಹಿಸಿದ್ದ ಕರುನಾಡ ಕನ್ನಡ ಸಾಂಸ್ಕೃತಿಕ ವೇದಿಕೆಯ ರಾಜ್ಯಾಧ್ಯಕ್ಷರಾದ ಎಸ್.ಬಿ. ಮುಡೆಣ್ಣವರ ಮಾತನಾಡಿ, “ಪುಸ್ತಕ ಮರೆಯಾದರೆ ಜ್ಞಾನವೂ ಮರೆಯಾದಂತೆ, ಪುಸ್ತಕಗಳೆಂದರೆ, ಕಾಗದದ ಮುದ್ದೆಗಳಲ್ಲ, ಓದುಗರನ್ನು ಸೃಷ್ಟಿ ಮಾಡುವು ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಮನೆಗೊಂದು ಗ್ರಂಥಾಲಯ ಯೋಜನೆ ಈ ದಿಕ್ಕಿನಲ್ಲಿ ಶ್ರಮಿಸುವಂತಗಲಿ” ಎಂದರು.

ಈ ಸಂದರ್ಭದಲ್ಲಿ ದಯಾನಂದ ಮಲಗುಂದ ಮತ್ತು ನೇಹಾ ಅವರುಗಳನ್ನು ಜಾಗೃತಿ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಜಿಲ್ಲಾ ಸಂಚಾಲಕ ಎಸ್. ಆರ್. ಹಿರೇಮಠ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಕುಮಾರ ಅಭಿನವ ಭಟ್ಟ ಪ್ರಾರ್ಥನೆ ಮಾಡಿದರೆ, ಶಿಕ್ಷಕಿ ರಂಜನಾ ಭಟ್ಟ ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ಜಿ.ಎಂ. ಓಂಕಾರಣ್ಣನವರ ಎಲ್ಲರನ್ನು ವಂದಿಸಿದರು. ಸರ್ವಶ್ರಿ ವಿರೂಪಾಕ್ಷ ಹಾವನೂರ, ಎಂ.ಜಿ.ಓಲೇಕಾರ, ಅಶೋಕ ಉಪಲಿ, ಉಡಚಪ್ಪ ಮಾಳಗಿ, ಶ್ರೀಮತಿ ಎಸ್.ಬಿ. ಬಾರ್ಕಿ, ಅನಿತಾ ಹರನಗಿರಿ, ರೇಣುಕಾ ಗುಡಿಮನಿ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...