ಹಾವೇರಿ | ಮಾಲೀಕತ್ವ ಇಲ್ಲದೇ ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕು ಪತ್ರ: ಶಾಸಕ ಶ್ರೀನಿವಾಸ ಮಾನೆ

Date:

ಹಾವೇರಿ ಜಿಲ್ಲೆ ಹಾನಗಲ್‌ ತಾಲೂಕಿನ ಸರ್ಕಾರಿ ಮತ್ತು ಖಾಸಗಿ ಸರ್ವೆ ನಂಬರ್ ಜಮೀನುಗಳಲ್ಲಿ ಮಾಲಿಕತ್ವ ಇಲ್ಲದೇ 30ವರ್ಷಗಳಿಂದ ವಾಸಿಸುತ್ತಿರುವ 13ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ನೀಡುವ ಗುರಿಯಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದ್ದಾರೆ.

- Advertisement -

ಹಾನಗಲ್ ತಾಲೂಕಿನ ಶಾಡಗುಪ್ಪಿ ಸೇರಿದಂತೆ ಹಲವೆಡೆ ಶಾಸಕ ಶ್ರೀನಿವಾಸ ಮಾನೆ ಗುರುವಾರ (ಜ.4) ಗ್ರಾಮ ಸಂಚಾರ ಕೈಗೊಂಡು ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದರು. ಈ ವೇಳೆ ಮಾತನಾಡಿದ ಅವರು, ಸಂಕಲ್ಪ ಮಾಡಿದ್ದು, ಈಗಾಗಲೇ ಹೊಸ ಕಂದಾಯ ಗ್ರಾಮ, ಉಪ ಗ್ರಾಮಗಳನ್ನು ಸೃಷ್ಟಿಸಲಾಗುತ್ತಿದೆ. ವರ್ಷದ ಒಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸುವ ಗುರಿ ಹೊಂದಿದ್ದೇವೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ತಂಡ ರಚಿಸಿ ಸರ್ವೆ ಕೈಗೊಳ್ಳಲಾಗಿದೆ. ರಸ್ತೆ ಇಲ್ಲದೇ, ಅಗತ್ಯ ಸೌಲಭ್ಯಗಳೂ ಇಲ್ಲದೇ ಸರ್ಕಾರಿ ಮತ್ತು ಖಾಸಗಿ ಸರ್ವೆ ನಂಬರ್ ಜಮೀನುಗಳಲ್ಲಿ ಸಾವಿರಾರು ಕುಟುಂಬಗಳು ವಾಸಿಸುತ್ತಿವೆ. ಹಕ್ಕುಪತ್ರ ಇಲ್ಲದೇ ಸರ್ಕಾರದ ಸೌಲಭ್ಯ, ಬ್ಯಾಂಕಿನ ಸಾಲ ಸೇರಿದಂತೆ ಇನ್ನಿತರ ಎಲ್ಲ ರೀತಿಯ ನೆರವಿನಿಂದ ವಂಚಿತವಾಗಿವೆ ಎಂದು ಅವರು ಹೇಳಿದರು.

ತಾಲೂಕಿನ ಪ್ರತಿಯೊಂದು ಗ್ರಾಮಗಳಲ್ಲಿ ಇಂಥ ಕುಟುಂಬಗಳ ಸಂಪೂರ್ಣ ವಿವರ ಸಂಗ್ರಹಿಸಲಾಗಿದೆ. ಹಂತ ಹಂತವಾಗಿ ಪ್ರತಿ ಕುಟುಂಬಗಳಿಗೂ ಹಕ್ಕುಪತ್ರ ವಿತರಿಸುವ ಉದ್ದೇಶ ಹೊಂದಿದ್ದೇವೆ ಎಂದರು.

ತಾಲೂಕಿನಲ್ಲಿ ಹತ್ತಾರು ವರ್ಷಗಳಿಂದ ಬಗೆಹರಿಯದ ಸಾರ್ವಜನಿಕ ಸಮಸ್ಯೆಗಳನ್ನು ಬಗೆಹರಿಸಲು ಗಮನ ನೀಡಲಾಗುತ್ತಿದೆ. ಪ್ರತೀ ಗ್ರಾಮಗಳಿಗೆ ನಿಯಮಿತವಾಗಿ ಭೇಟಿ ನೀಡಿ, ಸಾರ್ವಜನಿಕರೊಂದಿಗೆ ಸಂಪರ್ಕದಲ್ಲಿದ್ದು ಸಮಸ್ಯೆ ಅರಿಯುವ ಪ್ರಯತ್ನ ನಡೆಸಲಾಗುತ್ತಿದೆ ಎಂದರು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣನವರ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೊಟ್ರಪ್ಪ ಕುದರಿಸಿದ್ದನವರ, ಮುಖಂಡರಾದ ಪ್ರಕಾಶ ಓಲೇಕಾರ, ರಾಜಶೇಖರ ಮಲಗುಂದ, ಶ್ರೀಧರ ಮಲಗುಂದ, ಮೂಕಣ್ಣ ತಳವಾರ, ಶಿವರುದ್ರಪ್ಪ ಕಲ್ಲಣ್ಣನವರ, ಗುಡ್ಡಪ್ಪ ಹರಿಜನ, ಇಂದ್ರಪ್ಪ ಮಕರವಳ್ಳಿ, ರಮೇಶ ಸಾವಕ್ಕನವರ, ಮಂಜಪ್ಪ ಓಲೇಕಾರ, ನಾರಾಯಣಪ್ಪ ಜಾಲಗಾರ, ಶಿವಣ್ಣ ಬಾರ್ಕಿ, ಮೂಕಪ್ಪ ಬಾರ್ಕಿ, ಪರಸಪ್ಪ ಕಾಣೇರ ಸೇರಿದಂತೆ ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ವಾರ್ಡ್ ಮಟ್ಟದ ಸಮಿತಿ ರಚನೆ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ವಿಜಯಪುರ ಜಿಲ್ಲೆಯಲ್ಲಿ ಮುಂದುವರಿದಿದ್ದು, ಅರ್ಹ...

ಅ.2ರಂದು ಟಿ. ನರಸೀಪುರದಲ್ಲಿ ಕೋಮು ಸೌಹಾರ್ದತೆಗಾಗಿ ಬೃಹತ್ ಸಮಾವೇಶ

ಟಿ. ನರಸೀಪುರ ಪಟ್ಟಣದಲ್ಲಿ ಇತ್ತೀಚೆಗೆ ಗಣೇಶ ವಿಸರ್ಜನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಉಂಟಾಗಿರುವ...

ವಿಜಯಪುರ | ಸ್ಮಶಾನಕ್ಕೆ ಮೂಲಸೌಕರ್ಯ ಕಲ್ಪಿಸಲು ಆಗ್ರಹ

ವಿಜಯಪುರ ನಗರದ ಬೊಂಬಳ ಆಗಸಿ ಪ್ರದೇಶದಲ್ಲಿರುವ ಚಲವಾದಿ ಸಮಾಜದ ಸ್ಮಶಾನಕ್ಕೆ ಅಗತ್ಯ...

ಕಾರವಾರ | ಫ್ಲೈ ಓವರ್ ಕೆಳಗಿನ ಸರ್ಕಾರಿ ಜಾಗದಲ್ಲಿ ಅನಧಿಕೃತ ನರ್ಸರಿ

ಉತ್ತರ ಕನ್ನಡ ಜಿಲ್ಲೆ ಕಾರವಾರ ನಗರದ ಹೆದ್ದಾರಿ ಫ್ಲೈ ಓವರ್ ಕೆಳಭಾಗದ...