ಹಾವೇರಿ | ಕಾಲಿಯಾಗುತ್ತಿದೆ ತುಂಗಭದ್ರಾ ನದಿ, ಆತಂಕದಲ್ಲಿ ರೈತರು

Date:

ಬೇಸಿಗೆಗೂ ಮುನ್ನವೇ ತುಂಗಭದ್ರಾ ನದಿಯ ನೀರು ಖಾಲಿಯಾಗುತ್ತಿದ್ದು ಶಿವಮೊಗ್ಗ, ದಾವಣಗೆರೆ, ಹಾವೇರಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ರೈತರಲ್ಲಿ ಆತಂಕ ಮನೆಮಾಡಿದೆ.

- Advertisement -

ಡಿಸೆಂಬರ್‌ನಿಂದ ಫೆಬ್ರುವರಿ ತಿಂಗಳಷ್ಟರಲ್ಲಿ ರೈತರು ಕಬ್ಬು, ಭತ್ತ ನಾಟಿ ಮಾಡುತ್ತಾರೆ. ಎಲ್ಲೆಡೆಯಲ್ಲೂ ನಾಟಿ ಕಾರ್ಯ ಭರದಿಂದ ಸಾಗಿದೆ. ಗೋವಿನಜೋಳ, ಶೇಂಗಾ, ಬಾಳೆ, ಅಡಿಕೆ, ಹೈಬ್ರಿಡ್ ಜೋಳ, ಈಗಾಗಲೆ ಬಿತ್ತನೆ ಮಾಡಿದ್ದಾರೆ. ಆದರೆ, ತುಂಗಭದ್ರಾ ನದಿಯಲ್ಲಿ ನೀರು ಖಾಲಿಯಾಗುತ್ತಿರುವುದು ಕಂಡು ರೈತರು ಚಿಂತೆಗೀಡಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಬೀಕರ ಬರಗಾಲದಿಂದ ರೈತರು ತತ್ತರಿಸಿದ್ದಾರೆ. ಸಾವಿರಾರು ಎಕರೆ ಪ್ರದೇಶದಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೀಜ ಗೊಬ್ಬರಗಳನ್ನು ಹಾಕಿ ಬೆಳೆ ಬೆಳೆಯುತ್ತಿದ್ದಾರೆ. ಆದರೆ, ತುಂಗಭದ್ರಾ ನದಿಯಲ್ಲಿ ನೀರು ಖಾಲಿಯಾಗುತ್ತಿರುವುದು ರೈತರನ್ನು ನಿದ್ದೆಗೆಡಿಸಿದೆ. ಸರ್ಕಾರ ತುಂಗಭದ್ರಾ ನದಿಗೆ ನೀರು ಹರಿಸುವುದಕ್ಕೆ ವ್ಯವಸ್ಥೆ ಮಾಡಬೇಕು ಎಂದು ರೈತರು ಆಗ್ರಹಿಸುತ್ತಿದ್ದಾರೆ.

ಹಾವನೂರ, ಮೈಲಾರ ಹಾಗೂ ಕುರವತ್ತಿ ಗ್ರಾಮಗಳ ದೊಡ್ಡ ಜಾತ್ರೆಗಳು ಫೆಬ್ರುವರಿಯಿಂದ ನಡೆಯುತ್ತಿವೆ. ಈ ಜಾತ್ರೆಗಳಿಗೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಭಕ್ತರಿಗೆ ಕುಡಿಯುವ ನೀರಿನ ಅನುಕೂಲಕ್ಕೆ ಕೂಡಲೇ ತುಂಗಭದ್ರಾ ನದಿಗೆ ನೀರು ಬಿಡಬೇಕೆಂಬುದು ಜನರ ಬೇಡಿಕೆ.

ತುಂಗಭದ್ರಾ ನದಿ ಖಾಲಿ ಆಗುತ್ತಿರುವುದರಿಂದ ಗುತ್ತಲ ಪಟ್ಟಣಕ್ಕೆ ತುಂಗಭದ್ರಾ ನದಿಯ ನೀರನ್ನು 20ರಿಂದ 25ದಿನಗಳಿಗೆ ಪೊರೈಕೆ ಮಾಡಲಾಗುತ್ತಿತ್ತು. ಆದರೆ, ಈಗ ನದಿ ನೀರು ಖಾಲಿ ಆಗಿರುವುದರಿಂದ ಪಟ್ಟಣಕ್ಕೆ ಕುಡಿಯುವ ನೀರು ಸ್ಥಗಿತಗೊಳಿಸಲಾಗಿದೆ ಎಂದು ಪಟ್ಟಣ ಪಂಚಾಯಿತಿ ಸದಸ್ಯ ಸಂಜಯ ಬಡ್ಡಿವಡ್ಡರ ಮಾಹಿತಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.2ರಂದು ಟಿ. ನರಸೀಪುರದಲ್ಲಿ ಕೋಮು ಸೌಹಾರ್ದತೆಗಾಗಿ ಬೃಹತ್ ಸಮಾವೇಶ

ಟಿ. ನರಸೀಪುರ ಪಟ್ಟಣದಲ್ಲಿ ಇತ್ತೀಚೆಗೆ ಗಣೇಶ ವಿಸರ್ಜನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಉಂಟಾಗಿರುವ...

ವಿಜಯಪುರ | ಸ್ಮಶಾನಕ್ಕೆ ಮೂಲಸೌಕರ್ಯ ಕಲ್ಪಿಸಲು ಆಗ್ರಹ

ವಿಜಯಪುರ ನಗರದ ಬೊಂಬಳ ಆಗಸಿ ಪ್ರದೇಶದಲ್ಲಿರುವ ಚಲವಾದಿ ಸಮಾಜದ ಸ್ಮಶಾನಕ್ಕೆ ಅಗತ್ಯ...

ಕಾರವಾರ | ಫ್ಲೈ ಓವರ್ ಕೆಳಗಿನ ಸರ್ಕಾರಿ ಜಾಗದಲ್ಲಿ ಅನಧಿಕೃತ ನರ್ಸರಿ

ಉತ್ತರ ಕನ್ನಡ ಜಿಲ್ಲೆ ಕಾರವಾರ ನಗರದ ಹೆದ್ದಾರಿ ಫ್ಲೈ ಓವರ್ ಕೆಳಭಾಗದ...

ಕೋಲಾರ | ಜಿಲ್ಲೆಗೆ ₹600 ಕೋಟಿ‌ ಬರ ಪರಿಹಾರ ನೀಡಲು ಜೆಡಿಎಸ್ ಆಗ್ರಹ

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದರೂ ರೈತರಿಗೆ ಸಮರ್ಪಕ ಬರ ಪರಿಹಾರ...