ರಾಜ್ಯದಲ್ಲಿ 40 ವರ್ಷಗಳ ಕಾಲ ನಿರಂತರ ಹೋರಾಟ, ಸಾಮಾಜಿಕ ಸೇವೆ ಹಾಗೂ ಜನರ ಪರವಾಗಿ ಕೆಲಸ-ಕಾರ್ಯಗಳನ್ನು ಗುರುತಿಸಿ ನನ್ನನ್ನು ರಾಷ್ಟ್ರೀಯ ಅಹಿಂದ ಸಂಘಟನೆ(ರಿ)ಯ ರಾಜ್ಯ ಹೋರಾಟ ಸಮಿತಿಯ ರಾಜ್ಯ ಅಧ್ಯಕ್ಷರನ್ನನ್ನಾಗಿ ನೇಮಕ ಮಾಡಿದ ಅಹಿಂದ ಸಂಘಟನೆಯ ಎಲ್ಲಾ ಪದಾಧಿಕಾರಿಗಳಿಗೂ ಸಹಕಾರ ನೀಡಿ ಸರ್ವರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ರಾಜ್ಯ ಹೋರಾಟ ಸಮಿತಿಯ ನೂತನ ರಾಜ್ಯ ಅಧ್ಯಕ್ಷ ಉಡಚಪ್ಪ ಮಾಳಗಿ ಹೇಳಿದರು.
ಸಾಮಾಜಿಕ ನ್ಯಾಯಕ್ಕಾಗಿ ಅಹಿಂದ ಜನ ಜಾಗೃತಿ ಸಂಕಲ್ಪ ವೇದಿಕೆಯಡಿ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ರಾಜ್ಯ ಹೋರಾಟ ಸಮಿತಿಯ ರಾಜ್ಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದಲ್ಲಿ ರಾಜ್ಯಾಧ್ಯಕ್ಷರಾದ ಮುತ್ತಣ್ಣ ಶಿವಳ್ಳಿ,ಮಾಜಿ ಕೇಂದ್ರ ಸಚಿವ ಸಿ.ಎಂ ಇಬ್ರಾಹಿಂ,ರಾಜ್ಯ ಕಾರ್ಯಾಧ್ಯಕ್ಷರಾದ ಗುರುನಗೌಡ ಪಾಟೀಲ,ರಾಜ್ಯ ಪ್ರಧಾನ ಕಾರ್ಯದರ್ಶಿ ಬೀರಲಿಂಗೇಶ್ವರ ಪೂಜಾರಿ ಅವರಿಂದ ಪ್ರಮಾಣ ಪತ್ರವನ್ನು ಸ್ವೀಕರಿಸಿ ಅವರು ಹಾವೇರಿ ಹಾಗೂ ರಾಜ್ಯದ ಜನತೆಗೆ ಧನ್ಯತೆಯನ್ನು ಪ್ರಕಟಣೆಯ ಮೂಲಕ ತಿಳಿಸಿದರು.
ಸಂವಿಧಾನಾತ್ಮಕವಾಗಿ ನಮ್ಮ ಹಕ್ಕುಗಳನ್ನು ಹಾಗೂ ಸೌಲಭ್ಯಗಳನ್ನು ಪಡೆಯಲು ಪ್ರಜಾಪ್ರಭುತ್ವದಲ್ಲಿ ಹೋರಾಟ ನಿರಂತರವಾಗಿ ಮಾಡಬೇಕಾಗುತ್ತದೆ.ಎಲ್ಲಾ ವರ್ಗದ ಜನರನ್ನು ಬದುಕಿನ ಮುಖ್ಯವಾಹಿನಿಗೆ ತರಲು ಸರ್ಕಾರಗಳ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಅಹಿಂದ ಸಂಘಟನೆ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬ ಧ್ಯೇಯದೊಂದಿಗೆ ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸುವ ಕೆಲಸವನ್ನು ಮಾಡುತ್ತಿದೆ. ಇದರ ಜವಾಬ್ದಾರಿಯನ್ನು ನನಗೆ ನೀಡಿದ್ದು ಇನ್ನೂ ಹೆಚ್ಚು ಕೆಲಸ ಮಾಡುವ ಅವಕಾಶ ಸಿಕ್ಕಂತಾಗಿದೆ. ಜನರ ಧ್ವನಿಯಾಗಿ ಕೆಲಸ ಮಾಡೋಣ ಎಂದು ನೂತನ ರಾಜ್ಯ ಅಧ್ಯಕ್ಷರಾದ ಉಡಚಪ್ಪ ಮಾಳಗಿ ಹೇಳಿದರು.
ಕಾರ್ಯಕ್ರಮದಲ್ಲಿ ಅಹಿಂದ ಚಿಂತಕರಾದ ಸಮೃದ್ಧ ಸೂರಜ್ ಹೆಗಡೆ,ಲೋಹಿತ್ ನಾಯಕ,ಕನ್ನಡ ಚಿತ್ರರಂಗದ ನಿರ್ಮಾಪಕರಾದ ಡಾ.ಮದನ್ ಪಟೇಲ,ಮುಖಂಡರಾದ ಗಣೇಶ ಪೂಜಾರ, ಜಿಲ್ಲಾಧ್ಯಕ್ಷ ಪರಮೇಶಪ್ಪ ಯತ್ನಳ್ಳಿ,ಮಾಲತೇಶ ಹಟ್ಟಿ,ಬಸವರಾಜ ಕಾಳೆ ಸೇರಿದಂತೆ ರಾಜ್ಯ ಪದಾಧಿಕಾರಿಗಳು ಹಾಗೂ ಮುಖಂಡರು ಪಾಲ್ಗೊಂಡಿದ್ದರು.




