“ಇಂದಿನ ವಿದ್ಯಾರ್ಥಿಗಳು ಸ್ವಾತಂತ್ರ್ಯ ಚಳುವಳಿಯ ಚರಿತ್ರೆಯನ್ನು ಓದಿ ಅರ್ಥೈಸಿಕೊಂಡು ಸ್ಪೂರ್ತಿ ಪಡೆಯಬೇಕು. ಸ್ವಾತಂತ್ರ್ಯ ಹೋರಾಟದ ಚರಿತ್ರೆ ಅರಿತು ವಿದ್ಯಾರ್ಥಿ ಚಳುವಳಿ ಗಟ್ಟಿಗೊಳಿಸಿ” ಎಂದು ಉಪನ್ಯಾಸಕರು ಮಾರುತಿ ಅಂಬಿಗೇರ ಹೇಳಿದರು.
ಹಾವೇರಿ ಪಟ್ಟಣದ ಪಿ.ಬಿ.ರಸ್ತೆಯಲ್ಲಿರುವ ಭಗತ್ ಸಿಂಗ್ ಅಕಾಡೆಮಿಯಲ್ಲಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಹಾವೇರಿ ತಾಲ್ಲೂಕು ಸಮಿತಿ ವತಿಯಿಂದ ಸರ್ಕಾರಿ ಶಾಲಾ-ಕಾಲೇಜು, ಹಾಸ್ಟೆಲ್ ಬಲವರ್ಧನೆಗಾಗಿ, ತಾಲ್ಲೂಕಿನ ಶೈಕ್ಷಣಿಕ ಹಾಗೂ ಸಮಗ್ರ ಅಭಿವೃದ್ಧಿಗಾಗಿ ಆಯೋಜಿಸಿದ 10ನೇ ವಿದ್ಯಾರ್ಥಿಗಳ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
“ಶಿಕ್ಷಣವು ಸಾಮಾನ್ಯ ವಿದ್ಯಾರ್ಥಿಗಳಿಗೆ ಸಿಗುತ್ತಿಲ್ಲ ಬದಲಾಗಿ ವ್ಯಾಪಾರಿಕರಣವಾಗುತ್ತಿದೆ ಆದರಿಂದ ಶಿಕ್ಷಣದ ಶೈಕ್ಷಣಿಕ ಸಮಗ್ರ ಅಭಿವೃದ್ಧಿಗಾಗಿ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸಂಘಟಿತರಾಗಬೇಕು. ಅಂಬೇಡ್ಕರ ರವರ ರಚಿಸಿರುವ ಸಂವಿಧಾನದ ಆಶಯಗಳನ್ನು ಪಾಲಿಸುವ ಮೂಲಕ ನಾವು ನಮ್ಮ ಕರ್ತವ್ಯಗಳನ್ನು, ಜವಾಬ್ದಾರಿಗಳನ್ನು ವಹಿಸಿಕೊಳ್ಳಬೇಕು” ಎಂದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಮಾತನಾಡಿ, “ಮಾರುಕಟ್ಟೆಯಲ್ಲಿ ಸರಕುಗಳನ್ನು ಮಾರಾಟ ಮಾಡಿದಂತೆ ಶಿಕ್ಷಣವನ್ನು ವ್ಯಾಪಾರ ಮಾಡಲಾಗುತ್ತಿದೆ’ ಎಂದು ಟೀಕಿಸುತ್ತಾ, ಸರ್ಕಾರಗಳು ಎಲ್ಲ ಕ್ಷೇತ್ರಗಳನ್ನು ಖಾಸಗಿಕರಣಗೊಳಿಸುತ್ತಿದ್ದು, ದೇಶದ ಶಿಕ್ಷಣ ವ್ಯವಸ್ಥೆಯನ್ನು ವಿದೇಶಿಯರ ಜವಾಬ್ದಾರಿಗೆ ಒಪ್ಪಿಸುತ್ತಿವೆ. ಸಂಕಷ್ಟದಲ್ಲಿರುವ ಬಡವರನ್ನು ಶಿಕ್ಷಣದಿಂದ ಸಂಪೂರ್ಣವಾಗಿ ವಂಚಿಸಲು ಸರ್ಕಾರಗಳು ತೀರ್ಮಾನ ಕೈಗೊಂಡಿವೆ.” ಎಂದರು.
“ಶಿಕ್ಷಣಕ್ಕಾಗಿ ಬೇರೆ ದೇಶಗಳಿಂದ ಸಾಲ ತರುವ ಭಾರತ ಸರ್ಕಾರದ ಕ್ರಮ ಶಿಕ್ಷಣ ವಿರೋಧಿಯಾಗಿದೆ, ಇದರ ವಿರುದ್ಧ ಧ್ವನಿ ಎತ್ತಲು ವಿದ್ಯಾರ್ಥಿ-ಯುವಜನರ ಮುಂದಾಗಬೇಕು’ ಶಿಕ್ಷಣ ಮತ್ತು ಉದ್ಯೋಗ ಮೂಲಭೂತ ಹಕ್ಕಾಗಬೇಕು ಆ ನಿಟ್ಟಿನಲ್ಲಿ ಬಲಿಷ್ಠ ಚಳುವಳಿ ರೂಪಿಸಿ” ಎಂದು ವಿದ್ಯಾರ್ಥಿಗಳ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದರು.
ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಮಾತನಾಡಿ, “ಶಿಕ್ಷಣದ ಉಳಿವಿಗಾಗಿ ಹಾಗೂ ವಿದ್ಯಾರ್ಥಿಗಳ ಪ್ರಜಾಸತ್ತಾತ್ಮಕ ಹಕ್ಕುಗಳಿಗಾಗಿ, ಎಲ್ಲ ಶಿಕ್ಷಣ ಪ್ರೇಮಿಗಳು ಮುಂದಾಗಬೇಕಾಗಿದೆ. ಜೊತೆಗೆ ವಿಚ್ಚಿದ್ರಕಾರಿ ಶಕ್ತಿಗಳನ್ನು ಮಟ್ಟ ಹಾಕುವುದರ ಮೂಲಕ ನಾಡಿನ ಸಾಮರಸ್ಯ, ಸೌಹಾರ್ದತೆಯನ್ನು ಗಟ್ಟಿಗೊಳಿಸಬೇಕಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ಸದಾ ಜಾಗೃತಿ ಮೂಡಿಸುತ್ತಿರುವ ಎಸ್‌ಎಫ್‌ಐ ಜಿಲ್ಲಾದ್ಯಂತ ವಿದ್ಯಾರ್ಥಿ ಸಮುದಾಯ ಎದುರಿಸುತ್ತಿರುವ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಐಕ್ಯೆ ಹೋರಾಟ ರೂಪಿಸೋಣ” ಎಂದರು.
ಪ್ರಾಸ್ತಾವಿಕವಾಗಿ ಅರುಣ್ ಕುಮಾರ್ ನಗವತ ಮಾತನಾಡಿದರು. ಸಾವಿತ್ರಿ ವಾಲ್ಮೀಕಿ ಸ್ವಾಗತಿಸಿದರು, ಚೈತ್ರಾ ಕೊರವರ ನಿರೂಪಿಸಿದರು.
ಈ ಸಂದರ್ಭದಲ್ಲಿ ವೀರನಗೌಡ ಎನ್, ವಿಠಲ ಗೌಳಿ, ಶೋಭಾ ದೇವರಮನಿ, ದ್ಯಾಮಣ್ಣ ಆರೇರ್, ನಂಜುಂಡ ಬಳಿಗಾರ್, ಗೌತಮ್ ಮಾಳಾಪುರ, ರಿಹಾನ್ ನದಾಫ್, ಲಲಿತಾ ಮೆಕ್ಕಿ, ಶಿವರಾಜ್ ಸಾವಕ್ಕನವರ, ಉದಯಕುಮಾರ್ ಆರ್, ಪ್ರದೀಪ ಪೂಜಾರ, ಮಂಜುನಾಥ್ ಡಿ, ಧನುಷ್ ದೊಡ್ಡಮನಿ, ನಾಗವೇಣಿ ಹೊಸೂರು, ಕೀರ್ತಿ ಇಟಗಿ, ಕವಿತಾ ಹೆಚ್, ನವೀನ್ ಎಕಳ್ಳಿಮನಿ, ರುಕ್ಮಿಣಿ ಎನ್ ಸೇರ ಅನೇಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.




