ಹಾವೇರಿ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ ಏಪ್ರಿಲ್ 6ಕ್ಕೆ ಬೆಳಿಗ್ಗೆ 11 ಗಂಟೆಗೆ ಹಾವೇರಿ ನಗರದ ಜಿ.ಎಚ್.ಕಾಲೇಜು ಸಭಾಂಗಣದಲ್ಲಿ ಜರುಗಲಿದೆ.
ಗೌರವಾನ್ವಿತ ರಾಜ್ಯಪಾಲರು ಹಾಗೂ ಹಾವೇರಿ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್ಚಂದ್ ಗೆಹೋಟ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವರು ಹಾಗೂ ಹಾವೇರಿ ವಿಶ್ವವಿದ್ಯಾಲಯದ ಸಮಕುಲಾಧಿಪತಿಗಳಾದ ಡಾ.ಎಂ.ಸಿ.ಸುಧಾಕರ್ ಅವರು ಉಪಸ್ಥಿತರಿರುವರು.
ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷರು ಜಸ್ಟಿಸ್ ಡಾ.ಅಶೋಕ ಹಿಂಚಿಗೇರಿ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ



