ಹಾವೇರಿ ವಿವಿ ಪ್ರಥಮ ಘಟಿಕೋತ್ಸವ; ಆವರಣದಲ್ಲಿಯೇ ನಡೆಸುವಂತೆ ಹೋರಾಟ ಸಮಿತಿ ಮನವಿ

Date:

ಹಾವೇರಿ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವವನ್ನು ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿಯೇ ಆಯೋಜಿಸುವಂತೆ ಒತ್ತಾಯಿಸಿ, ವಿ.ವಿ ಉಪ ಕುಲಪತಿ ಪ್ರೊ. ಸುರೇಶ ಎಚ್‌. ಜಂಗಮಶೆಟ್ಟಿ ಅವರಿಗೆ ವಿ.ವಿ ಉಳಿಸಿ ಹೋರಾಟ ಸಮಿತಿಯಿಂದ ಮನವಿ ಸಲ್ಲಿಸಲಾಯಿತು. 

- Advertisement -

ಹಾವೇರಿ ಪಟ್ಟಣದ ಹೊರವಲಯ ಕೇರಿಮತ್ತಿಹಳ್ಳಿಯಲ್ಲಿರುವ ಹಾವೇರಿ ವಿಶ್ವವಿದ್ಯಾಲಯದಲ್ಲಿ ಉಪಕುಲಪತಿಗಳನ್ನು ಇಂದು ಮಂಗಳವಾರ ವಿ.ವಿ ಉಳಿಸಿ ಹೋರಾಟ ಸಮಿತಿ ನಿಯೋಗವು ಬೇಟಿ ಮಾಡಿ, “ನಮ್ಮ ಜಿಲ್ಲೆಯ ಹೆಮ್ಮೆಯಾಗಿರುವ ಹಾವೇರಿ ವಿಶ್ವವಿದ್ಯಾಲಯದ ಪ್ರಪ್ರಥಮ ಘಟಿಕೋತ್ಸವ ಕಾರ್ಯಕ್ರಮ ನಡೆಯುತ್ತಿರುವುದು ಖುಷಿಯ ಸಂಗತಿ. ಹಲವು ಸೌಕರ್ಯಗಳ ಕೊರತೆ ಹಾಗೂ ಸಮಸ್ಯೆಗಳ ಮಧ್ಯೆಯೂ ಹಲವು ಸಂಸ್ಥೆಗಳೊಂದಿಗೆ ಒಪ್ಪಂದ ಹಾಗೂ ಸಹಕಾರಗಳೊಂದಿಗೆ ವಿಶ್ವ ವಿದ್ಯಾಲಯವು ಯಶಸ್ವಿಯಾಗಿ ಮುನ್ನಡೆಯುತ್ತಿರುವುದು ಕೂಡ ಆಶಾದಾಯಕ ಬೆಳವಣಿಗೆಯಾಗಿದ್ದು, ಹಾವೇರಿ ವಿಶ್ವ ವಿದ್ಯಾಲಯ ಉಳಿಸಿ ಹೋರಾಟ ಸಮಿತಿಯು ಅಭಿನಂದಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಈ ದಿನ ಕವಿತೆ | ಏನೂ ಇಲ್ಲ- ನಾಸೆರ್...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಇರಾನಿನ ಕವಿ ನಾಸೆರ್ ಫಯ್ಜ್ ಅವರ ಕವನವೊಂದನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಹೆಚ್‌ ಭಾಗ್ಯ ಅಳುವ ಮಗವೊಂದನು ಸುಟ್ಟು ಬೂದಿ ಮಾಡಿದರು. ಅವನು ಏನೂ ಇಲ್ಲವೆಂದ. ತನ್ನೆಲ್ಲಾ...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ...

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ ಸಂಚು ನಡೆದಿದೆ. ಕೇಂದ್ರ ಸರ್ಕಾರ (ಮೋದಿ-ಶಾ ಜೋಡಿ) ಮತ್ತು ಚುನಾವಣಾ ಆಯೋಗ (ಗ್ಯಾನೇಶ್‌ ಕುಮಾರ್‌) ಜಂಟಿಯಾಗಿ ಎಸ್‌ಐಆರ್‌ ಹೆಸರಿನಲ್ಲಿ ಅರ್ಹ...

“ನಮ್ಮ ಹಾವೇರಿ ವಿಶ್ವವಿದ್ಯಾಲಯ ಪ್ರಥಮ ವರ್ಷದ ಘಟಿಕೋತ್ಸವ ಕಾರ್ಯಕ್ರಮವನ್ನು ಸಭಾಂಗಣ ಹಾಗೂ ಭದ್ರತೆಯ ಕಾರಣದಿಂದ ವಿಶ್ವವಿದ್ಯಾಲಯದ ಆವರಣದಲ್ಲಿ ಮಾಡುವುದರ ಬದಲಾಗಿ ಬೇರೆ ಕಡೆ ಮಾಡುತ್ತಿರುವುದು ಬೇಸರದ ಸಂಗತಿ” ಎಂದು ಸಮಿತಿ ತಿಳಿಸಿದೆ.

“ನಮ್ಮ ಹಾವೇರಿ ವಿಶ್ವವಿದ್ಯಾಲಯಕ್ಕೆ ಅಗತ್ಯ ಅನುದಾನ, ಖಾಯಂ ಸಿಬ್ಬಂದಿ ನೇಮಕ, ಅಧ್ಯಯನ ಪೀಠಗಳು, ಸಭಾಂಗಣ, ಕಟ್ಟಡಗಳು, ಹಾಸ್ಟೇಲ್ ಗಳು, ಕ್ಯಾಂಟೀನ್, ಸಮರ್ಪಕ ರಸ್ತೆ ಸೇರಿದಂತೆ ಇನ್ನೂ ಹಲವು ಮೂಲಭೂತ ಸೌಲಭ್ಯಗಳ ಅಗತ್ಯವಿದೆ. ಇಂತಹ ಸಂದರ್ಭದಲ್ಲಿ ಘಟಿಕೋತ್ಸವ ಕಾರ್ಯಕ್ರಮವು ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿಯೇ ನಡೆದರೆ ಕಾರ್ಯಕ್ರಮಕ್ಕೆ ಆಗಮಿಸುವ ಸಚಿವರಿಗೆ, ಗಣ್ಯರಿಗೆ ವಸ್ತುಸ್ಥಿತಿಯು ಗಮನಕ್ಕೆ ಬರುತ್ತದೆ ಅಲ್ಲದೇ ಅನುದಾನ ಒದಗಿಸುವಂತೆ  ಮನವೊಲಿಸಲು ಸಾಧ್ಯವಿದೆ” ಎಂದು ಕುಲಪತಿ ಅವರಿಗೆ ಮನವರಿಕೆ ಮಾಡಿದರು.

ಈಗಾಗಲೇ ಕಳೆದ ಬಜೆಟ್ ಪೂರ್ವದಲ್ಲಿ ನಮ್ಮ ಹೋರಾಟ ಸಮಿತಿಯಿಂದ ನಮ್ಮ ವಿ.ವಿ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡುವಂತೆ ಧ್ವನಿ ಎತ್ತಲಾಗಿದೆ; ಇನ್ನು ಮುಂದೆಯೂ ಕೂಡ ಅನುದಾನ ಒದಗಿಸಲು ಹಾಗೂ ವಿಶ್ವ ವಿದ್ಯಾಲಯದ ಅಭಿವೃದ್ಧಿಗಾಗಿ ಹಾವೇರಿ ವಿ.ವಿ ಉಳಿಸಿ ಹೋರಾಟ ಸಮಿತಿಯು ಕೆಲಸ ಮಾಡುತ್ತದೆ.

ಇನ್ನು ಸರಕಾರದ ಗೃಹ ಇಲಾಖೆಯು ಭದ್ರತೆಯನ್ನು ಒದಗಿಸಲು ಸಮರ್ಥವಾಗಿದೆ. ಮಳೆ, ಗಾಳಿಗಳಿಂದ ರಕ್ಷಿಸುವಂತಹ ಅತ್ಯಾಧುನಿಕ‌ ಜರ್ಮನ್ ಟೆಂಟ್ ಸೌಲಭ್ಯಗಳಿವೆ. ಆದ್ದರಿಂದ ಈಗಲೂ ಸಹ ಕಾಲ ಮಿಂಚಿರುವುದಿಲ್ಲ. ಇಂತಹ ಸೌಕರ್ಯಗಳನ್ನು ಬಳಸಿಕೊಂಡು ನಮ್ಮ ಹಾವೇರಿ ವಿ.ವಿಯ ಪ್ರಥಮ ಘಟಿಕೋತ್ಸವ ಕಾರ್ಯಕ್ರಮವನ್ನು ಸೂಕ್ತ ತಯಾರಿಯೊಂದಿಗೆ ವಿಶ್ವ ವಿದ್ಯಾಲಯದ ಕ್ಯಾಂಪಸ್ ನಲ್ಲಿಯೇ ನಡೆಸಬೇಕು” ಎಂದು ವಿ.ವಿ ಉಳಿಸಿ ಹೋರಾಟ ಸಮಿತಿ ಒತ್ತಾಯಿಸಿತು.

ಮನವಿ ಸ್ವೀಕರಿಸಿದ ಉಪಕುಲಪತಿಗಳು, ಹೋರಾಟ ಸಮಿತಿಯ ಸದಾಶಯವೇ ನಮ್ಮದು ಆಗಿದೆ. ನಾವು ಕೂಡ ಕ್ಯಾಂಪಸ್ ನಲ್ಲಿಯೇ ಘಟಿಕೋತ್ಸವ ಮಾಡಬೇಕೆಂದುಕೊಂಡಿದ್ದೇವು, ಆದರೆ ವಿಶ್ವವಿದ್ಯಾಲಯದ ಆವರಣದಲ್ಲಿ ಘಟಿಕೋತ್ಸವ ನಡೆಸಲು ಅಗತ್ಯವಿರುವ ಬಿಲ್ಡಿಂಗ್ ಹಾಗೂ ಸಭಾಂಗಣವಿಲ್ಲ; ಜರ್ಮನ್ ಟೆಂಟ್ ಹಾಕಿ ಕಾರ್ಯಕ್ರಮ ನಡೆಸಲು ಲಕ್ಷಾಂತರ ರೂಪಾಯಿ ಹಣಕಾಸು ಬೇಕಾಗುತ್ತದೆ. ಅಷ್ಟು ಹಣ ವಿ.ವಿ ಯಲ್ಲಿ ಇಲ್ಲ. ಅಷ್ಟೆಯಲ್ಲದೇ ಆವರಣದಲ್ಲಿ ವಿದ್ಯುತ್ ತಂತಿಗಳು ಬಹಳಷ್ಟು ಇದ್ದಿರುವ ಕಾರಣ ಹೊರಾಂಗಣದಲ್ಲಿ ಜರ್ಮನ್ ಪೆಂಡಾಲ್ ಹಾಕಿ ಕಾರ್ಯಕ್ರಮ ನಡೆಸುವುದು ಅಸಾಧ್ಯವಾದ ಕಾರಣ. ನಮ್ಮ ವಿಶ್ವ ವಿದ್ಯಾಲಯದ ಸಂಯೋಜಿತವಾಗಿರುವ ಜಿ.ಎಚ್ ಕಾಲೇಜ್ ಆವರಣದಲ್ಲಿ  ಘಟಿಕೋತ್ಸವ ಮಾಡಲಾಗುತ್ತಿದೆ. ಆದರೂ ಮಾನ್ಯ ರಾಜ್ಯಪಾಲರು ವಿಶ್ವ ವಿದ್ಯಾಲಯಕ್ಕೆ ಬಂದು ಭೇಟಿ ಮಾಡುವಂತೆ ವಿನಂತಿಸಿದ್ದೇವೆ. ರಾಜ್ಯಪಾಲರು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಲಿದ್ದಾರೆ” ಎಂದು ಹೇಳಿದರು.

ರಾಜ್ಯಪಾಲರು ಹಾಗೂ ಉನ್ನತ ಶಿಕ್ಷಣ ಸಚಿವರಿಗೆ ಮನವಿ: ಹಾವೇರಿ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ ಕಾರ್ಯಕ್ರಮವನ್ನು ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿಯೇ ನಡೆಸುವಂತೆ ಕ್ರಮ ಕೈಗೊಂಡು, ಉಪಕುಲಪತಿಗಳಿಗೆ ನಿರ್ದೇಶನ ನೀಡುವಂತೆ ಒತ್ತಾಯಿಸಿ ಮಾನ್ಯ ಕರ್ನಾಟಕ ರಾಜ್ಯಪಾಲರಾದ ಶ್ರೀಯುತ ಥಾವರಚಂದ ಗೆಹ್ಲೊಥ್ ಹಾಗೂ ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯ ಸಚಿವರಾದ ಡಾ. ಎಂ.ಸಿ ಸುಧಾಕರ್ ಅವರಿಗೆ ಮಾನ್ಯ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯ್ತು.

ಈ ಸಂದರ್ಭದಲ್ಲಿ ಹಾವೇರಿ ವಿಶ್ವ ವಿದ್ಯಾಲಯ ಉಳಿಸಿ ಹೋರಾಟ ಸಮಿತಿ ಸಂಚಾಲಕರಾದ ಬಸವರಾಜ ಪೂಜಾರ, ಪದವಿಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಉಪನಿರ್ದೇಶಕರಾದ ಎಂ. ಆಂಜನೇಯ, ಎಸ್ಎಫ್ಐ ಜಿಲ್ಲಾಧ್ಯಕ್ಷರಾದ ಬಸವರಾಜ ಎಸ್, ಕರ್ನಾಟಕ ರಾಜ್ಯ ರೈತ ಸಂಘದ ಶಹರ ಘಟಕದ ಅಧ್ಯಕ್ಷರಾದ ಸುರೇಶ ಛಲವಾದಿ, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷರಾದ ಮಂಜುಳಾ ಎಸ್. ಅಕ್ಕಿ, ಬಿಎಸ್ಪಿ ಜಿಲ್ಲಾಧ್ಯಕ್ಷರಾದ ಮಕಬುಲ್ ಎಂ.ಕೆ, ಸಹಮತ ಸಂಸ್ಥೆಯ ಸಹಕಾರ್ಯದರ್ಶಿಗಳಾದ ಲಕ್ಷ್ಮೀಪ್ರಭ ಎಸ್. ಹುಲ್ಲೂರು, ಡಿವೈಎಫ್ಐ ಜಿಲ್ಲಾ ಮುಖಂಡರಾದ ಖಲಂದರ್ ಅಲ್ಲಿಗೌಡ್ರ,ಎಸ್ಎಫ್ಐ ಜಿಲ್ಲಾ ಉಪಾಧ್ಯಕ್ಷರಾದ ಅರುಣ ನಾಗಾವತ್, ಚೈತ್ರಾ ಕೊರವರ, ಬಾಲ ಸಂಘಂ ಮುಖಂಡರಾದ ಧನುಷ್ ದೊಡ್ಮನಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ʻಮೀಶೋ ಲಕ್ಕಿ ಡ್ರಾʼ ಆಮಿಷವೊಡ್ಡಿ ಮಹಿಳೆಗೆ ರೂ.23 ಲಕ್ಷ ವಂಚನೆ

ಆನ್‌ಲೈನ್ ಶಾಪಿಂಗ್ ವೇದಿಕೆ ಮೀಶೋ ಹೆಸರಿನಲ್ಲಿ ಲಕ್ಕಿ ಡ್ರಾ ಆಮಿಷವೊಡ್ಡಿ ಸಾಗರದ...

ಶಿವಮೊಗ್ಗ | ಶರಾವತಿ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಶೀಘ್ರವೇ ಕೇಂದ್ರಕ್ಕೆ ಪ್ರಸ್ತಾವನೆ: ಮಧು ಬಂಗಾರಪ್ಪ

ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡಲು ಕೇಂದ್ರ ಸರ್ಕಾರದ...

ಶಿವಮೊಗ್ಗ | ಗನ್, ಡ್ರ್ಯಾಗರ್ ಹಿಡಿದು ರೀಲ್ಸ್‌! ಯುವಕನ ವಿರುದ್ಧ ಸುವೋ ಮೊಟೋ ಕೇಸ್‌

ಯುವಕನೊಬ್ಬ ಗನ್ ಮತ್ತು ಡ್ರ್ಯಾಗರ್ ಹಿಡಿದುಕೊಂಡು ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಪೋಸ್ಟ್ ಮಾಡಿ...

ಶಿವಮೊಗ್ಗ | ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆ ಆತ್ಮಹತ್ಯೆಗೆ ಶರಣು

ಧೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ಶಿವಮೊಗ್ಗ...