ಹಾವೇರಿ | ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ಶೈಕ್ಷಣಿಕ ವ್ಯವಸ್ಥೆ ವಿರೋಧಿಸಿ ಶೈಕ್ಷಣಿಕ ಹೋರಾಟ ಸಮಿತಿ ಉವಾಸ ಸತ್ಯಾಗ್ರಹ 

Date:

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಶೈಕ್ಷಣಿಕ ವ್ಯವಸ್ಥೆ ವಿರೋಧಿಸಿ ತಾಲೂಕಾ ಶೈಕ್ಷಣಿಕ ಹೋರಾಟ ಸಮಿತಿ ವತಿಯಿಂದ ಹಾವೇರಿ‌ ಜಿಲ್ಲೆಯ ಹಾನಗಲ್ ಪಟ್ಟಣದ ಮಹಾತ್ಮ ಗಾಂಧಿ ವೃತ್ತದಲ್ಲಿ ಉಪವಾಸ ಸತ್ಯಾಗ್ರಹದಲ್ಲಿ ಶಾಸಕ ಶ್ರೀನಿವಾಸ ಮಾನೆ ಬೆಂಬಲ ವ್ಯಕ್ತಪಡಿಸಿದರು.

- Advertisement -

“ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರತಿಭಾವಂತ ಬಡಮಕ್ಕಳ ಅವಕಾಶ ಕಸಿದುಕೊಳ್ಳು ಹುನ್ನಾರ, 21 ವಿದ್ಯಾರ್ಥಿಗಳು ಆತ್ಮಹತ್ಯೆಗೊಳಗಾಗಿದ್ದು ಕೇಂದ್ರ ಸರ್ಕಾರದ ವೈಫಲ್ಯದ ದುಷ್ಪಲ, ಪ್ರತಿಭಟನಾಕಾರರ ಮೇಲೆ ಪೊಲೀಸ ಕ್ರಮ ಖಂಡನೀಯ” ಎಂದು ಈ ಸಂದರ್ಭದಲ್ಲಿ ಹಾನಗಲ್ಲ ತಾಲೂಕಾ ಶೈಕ್ಷಣಿಕ ಹೋರಾಟ ಸಮಿತಿಯ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

“ಈ ಪ್ರಶ್ನೆ ಪತ್ರಿಕೆ ಸೋರಿಕೆ ಇಡೀ ದೇಶವೇ ತಲೆತಗ್ಗಿಸುವಂತಹ ಆಘಾತಕಾರಿ ಘಟನೆಯಾಗಿದೆ. ಇಷ್ಟೆಲ್ಲ ಘಟನೆಗಳು ಸಂಭವಿಸಿದರೂ ಕೂಡ ಕೇಂದ್ರ ಶಿಕ್ಷಣ ಸಚಿವರು ರಾಜಿನಾಮೆ ನೀಡಿಲ್ಲ. ಇದರ ಸಮಗ್ರ ತನಿಖೆಗೆ ಮುಂದಾಗದಿರುವುದು ಖಂಡನೀಯ. ನವದೆಹಲಿಯಲ್ಲಿ ವಿದ್ಯಾರ್ಥಿಗಳ ಹಿತರಕ್ಷಣೆಗಾಗಿ 25 ದಿನಗಳಿಂದ ಅಹಿಂಸಾತ್ಮಕ ಹೋರಾಟ ಅಮರಣ ಉಪವಾಸ ಸತ್ಯಾಗ್ರಹ ನಡೆಸುತ್ತಿರುವವರ ಮೇಲೆ ಪೊಲೀಸ್ ಬಲಪ್ರಯೋಗ ದೌರ್ಜನ್ಯ ನಡೆದಿರುವುದು ಪ್ರಜಾಪ್ರಭುತ್ವದ ಆಶಯಗಳಿಗೆ ಧಕ್ಕೆ ತರುವಂತಹದ್ದಾಗಿದೆ” ಎಂದು ಪ್ರತಿಭಟನಾಕಾರರು ಆರೋಪಿಸಿದರು.

ದೇಶದ ಶಿಕ್ಷಣ ಸಚಿವ ಧಮೇರ್ಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು, ಸೋನಂ ವಾಗ್ವುಕ್ ಅವರು ಹೇಳಿದ ಎಲ್ಲ ಬೇಡಿಕೆಗಳು ಈಡೇರಬೇಕು. ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಆತ್ಮಹತ್ಯೆ ಮಾಡಿಕೊಂಡ ಎಲ್ಲ ವಿದ್ಯಾರ್ಥಿಗಳಿಗೆ ತಲಾ ಒಂದು ಕೋಟಿ ರೂ. ಪರಿಹಾರ ನೀಡಬೇಕು ಎಂದು ತಾಲೂಕಾ ತಹಶೀಲ್ದಾರ್ ಮೂಲಕ ಪ್ರತಿಭಟನಾಕಾರರು ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಸತ್ಯಾಗ್ರಹದಲ್ಲಿ‌ ಪ್ರೊ.ಸಿ.ಮಂಜುನಾಥ, ಫೈರೋಜ್ ಶಿರಬಡಗಿ, ವಿಜಯಕುಮಾರ ದೊಡ್ಡಮನಿ, ಪ್ರಶಾಂತ ಮುಚ್ಚಂಡಿ, ಮಂಜುನಾಥ ಕರ್ಜಗಿ, ಮಾರುತಿ ಹಂಜಗಿ, ಟಾಕನಗೌಡ ಪಾಟೀಲ, ಆದರ್ಶ ಶೆಟ್ಟಿ, ಸಿಕಂದರ್ ವಾಲಿಕಾರ, ಗುರುರಾಜ್ ನಿಂಗೋಜಿ, ವಿನಾಯಕ ಬಂಕನಾಳ, ಲಿಂಗರಾಜ ಮಡಿವಾಳರ, ಅಣ್ಣಪ್ಪ ಚಿಕ್ಕಣ್ಣನವರ, ಜಿಲಾನಿಖಾನ್, ಮುಕ್ತಾನಂದ ಹಿರೇಮನಿ, ಆ‌ರ್.ಎಸ್. ತಿರುಮಲೆ, ಅಶೋಕ ದಾಸರ, ಎಂ.ಎಂ.ಮುಲ್ಲಾ, ಶಿವು ಭದ್ರಾವತಿ, ಶಿವು ತಳವಾರ, ಫಕ್ಕೀರೇಶ ಗೌಡಳ್ಳಿ, ಜಮೀರ್ ಶೇಖ್, ಸುರೇಶ ನಾಗಣ್ಣನವರ, ವಿರುಪಾಕ್ಷಪ್ಪ ಕಡಬಗೇರಿ, ರಾಜಕುಮಾರ ಶಿರಪಂಥಿ, ಪರಶುರಾಮ ಖಂಡೂನವರ, ಕೆ.ಎಸ್.ನಾಯ್ಕರ್, ಪಿ.ಎಂ.ಶಿವಕುಮಾರ, ಲೋಹಿತ್ ಕಾಟೆಣ್ಣನವರ, ಬೀರಪ್ಪ ಶಿರಸಿ, ದಾನಗೊಂಡರ, ಮಂಜು ಗಾಳಿ, ರಾಮಚಂದ್ರ ಕಲ್ಲೇರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಲಬಾರ್ ಗೋಲ್ಡ್‌ನಲ್ಲಿ ‘ಆರ್ಟಿಸ್ಟ್ರಿ’ ಆಭರಣ ಪ್ರದರ್ಶನಕ್ಕೆ ಚಾಲನೆ

ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ ಉಡುಪಿ ಶಾಖೆಯಲ್ಲಿ ಆಯೋಜಿಸಲಾಗಿರುವ ‘ಆರ್ಟಿಸ್ಟ್ರಿ’ ಕಲಾತ್ಮಕ...

ಗದಗ | ಪಶ್ಚಿಮ ಪದವೀಧರರ  ಚುನಾವಣೆ; ಜಿಲ್ಲೆಯಲ್ಲಿ ಶೇ. 77.66  ರಷ್ಟು ಮತದಾನ ದಾಖಲು

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯ ಮತದಾನವು ಅಕ್ಟೋಬರ್ 23...

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...