ಹಾವೇರಿ | ಹೊಸ ಪಕ್ಷ ಕಟ್ಟಲು ಜಿಲ್ಲೆಗಳ ಪ್ರವಾಸ ಮಾಡಲಾಗುವುದು: ನಟ ಚೇತನ್ ಅಹಿಂಸಾ

Date:

“ಮುಂದಿನ ದಿನಮಾನಗಳಲ್ಲಿ ಹೊಸ ಪಕ್ಷ ಕಟ್ಟಲು ರಾಜ್ಯದ ಎಲ್ಲಾ ಜಿಲ್ಲೆ-ತಾಲ್ಲೂಕುಗಳಿಗೂ ಪ್ರವಾಸ ಮಾಡಿ ಜನರ ನಾಡಿಮಿಡಿತ ಅರ್ಥಮಾಡಿಕೊಂಡು ಸಲಹೆ ಸೂಚನೆಯ ಮೂಲಕ ಮುಂದಿನ ತೀರ್ಮಾನ ಮಾಡಲಾಗುವುದು. ” ನಟ ಚೇತನ್ ಅಹಿಂಸಾ ಹೇಳಿದರು‌.

- Advertisement -

ಹಾವೇರಿ ಪಟ್ಟಣದ ಪ್ರವಾಸ ಮಂದಿರಕ್ಕೆ ಆಗಮಿಸಿದ ಅವರರನ್ನು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ,ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ(ರಿ)ಯ ರಾಜ್ಯಾಧ್ಯಕ್ಷರು ಉಡಚಪ್ಪ ಮಾಳಗಿ ಅವರ ನೇತೃತ್ವದಲ್ಲಿ ಸ್ವಾಗತಿಸಿ, ಗೌರವಿಸಿ ಸನ್ಮಾನಿಸಿದ ನಂತರ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳುವ ಮೂಲಕ ಸಂವಿಧಾನ ಆಶಯಗಳನ್ನು ತಿಳಿಸುವ ಕೆಲಸ ಮಾಡಬೇಕಾಗಿದೆ. ನಮ್ಮನ್ನು ಆಳುವ ಸರ್ಕಾರಗಳು ಬಡವರ ಹಾಗೂ ಹಿಂದುಳಿದವರ ಪರವಾಗಿ ಕೆಲಸ ಮಾಡದೇ ಬಂಡವಾಳ ಶಾಹಿತ್ವದಡಿ ಆಡಳಿತ ಮಾಡುವಂತಾಗಿದೆ. ಸಾಮಾಜಿಕ ನ್ಯಾಯದ ಪರವಾಗಿ ಇದ್ದೇವೆಂದು ಮಾತಿನಲ್ಲಿ ಮಾತ್ರ ಹೇಳುವಂತಾಗಿದೆ. ಧ್ವನಿ ಇಲ್ಲದವರ ಪರವಾಗಿ ಸರ್ವ ಜನಾಂಗದ ಶಾಂತಿಯ ತೋಟವಾದ ಈ ನಾಡಿನಲ್ಲಿ ಜನಪರ ಸರ್ಕಾರ ರಚನೆ ಮಾಡಲು ನಾಡಿನಲ್ಲಿ ಜಾಗೃತಿ ಮಾಡುತ್ತಿದ್ದೇನೆ. ಹಾವೇರಿಯ ಜನತೆ ನನಗೆ ತುಂಬಾ ಪ್ರೀತಿ ನೀಡುತ್ತಾರೆ. ಎಲ್ಲರಿಗೂ ಧನ್ಯವಾದಗಳನ್ನು ಹೇಳುತ್ತೇನೆ” ಎಂದರು.

ಕಲ್ಯಾಣ ಸಮಿತಿ(ರಿ)ಯ ರಾಜ್ಯಾಧ್ಯಕ್ಷರು ಉಡಚಪ್ಪ ಮಾಳಗಿ ಮಾತನಾಡಿ, “ನಟ ಚೇತನ್ ಅಹಿಂಸಾ ಅವರು ಬಡವರ,ಶೋಷಿತರ ಹಾಗೂ ಧ್ವನಿ ಇಲ್ಲದವರ ಪರವಾಗಿ ಸಾಮಾಜಿಕ ಕಾಳಜಿ ಹೋರಾಟ ಮಾಡುತ್ತಾ ಬರುತ್ತಿದ್ದು, ಅವರ ಉತ್ತಮ ಸಾಮಾಜಿಕ ಕೆಲಸಗಳಿಗೆ ಸಹಕಾರ ನೀಡೋಣ” ಎಂದರು.

ಈ ಸಂದರ್ಭದಲ್ಲಿ ಕಲ್ಯಾಣ ಸಮಿತಿಯ ಜಿಲ್ಲಾಧ್ಯಕ್ಷರು ಮಂಜಪ್ಪ ಮರೋಳ ಮುಖಂಡರು ಸುಭಾಷ ಚವ್ಹಾಣ, ಶೆಟ್ಟಿ ವಿಭೂತಿ, ಹೊನ್ನಪ್ಪ ಮಾಳಗಿ, ಗುಡ್ಡಪ್ಪ ಮಾಳಗಿ, ಮಲ್ಲೇಶಪ್ಪ ಹಂಚಿನಮನಿ, ಶಾರದಾ ದೊಡ್ಡಮನಿ, ಜಗದೀಶ ಹರಿಜನ, ಮಂಜುಳಾ ಅಕ್ಕಿ, ಗುಡ್ಡಪ್ಪ ಬಣಕಾರ, ಸುರೇಶ ಅಳ್ಳಳ್ಳಿ, ಅಜ್ಜಪ್ಪ ಹರಿಜನ, ದುರಗಪ್ಪ ಮಾದರ, ಸುನೀಲ ದೊಡ್ಡಮನಿ ಸೇರಿದಂತೆ ಅನೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...