ಹಾವೇರಿ | ಸಾರ್ವಜನಿಕರ ಮನಮುಟ್ಟುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ಲೋಕಾಯುಕ್ತ ಬಿ.ಎಸ್.ಪಾಟೀಲ್ ಸೂಚನೆ

Date:

“ಸಾರ್ವಜನಿಕರ ಮನಮುಟ್ಟುವಂತೆ ಕೆಲಸಮಾಡಬೇಕು. ಸರ್ಕಾರಿ ಅಧಿಕಾರಿ ಹಾಗೂ ಸಿಬ್ಬಂದಿಗಳು, ತಮ್ಮ ಮನೆ ಕೆಲಸಕ್ಕಿಂತ ಸರ್ಕಾರಿ ಕೆಲಸವನ್ನು ಬಹಳ ಶ್ರದ್ದೆಯಿಂದ ಹಾಗೂ ಜವಾಬ್ದಾರಿಯಿಂದ ಮಾಡಬೇಕು” ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಸೂಚನೆ ನೀಡಿದರು.

- Advertisement -

ಹಾವೇರಿ ಪಟ್ಟಣದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅವರು, “ಭ್ರಷ್ಟಾಚಾರ ಮುಕ್ತ ಆಡಳಿತ ನೀಡಬೇಕು. ಲೋಕಾಯುಕ್ತದಿಂದ ಮಾತ್ರ ಭ್ರಷ್ಟಾಚಾರ ನಿರ್ಮೂಲನೆ ಸಾಧ್ಯವಿಲ್ಲ. ಭ್ರಷ್ಟಾಚಾರ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಬೇಕು” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಸರ್ಕಾರ ಉತ್ತಮ ಜೀವನಕ್ಕೆ ಬೇಕಾದ ಸೌಲಭ್ಯ ನೀಡಿದೆ. ಅದರಲ್ಲಿ ತೃಪ್ತಿಕಾಣಬೇಕು. ತಂದೆ-ತಾಯಿ ಮಾಡುವ ತಪ್ಪಿನಿಂದ ಮಕ್ಕಳ ಮನಸ್ಸಿಗೆ ಬಹಳ ನೋವು ಉಂಟಾಗುತ್ತಿದೆ. ಭ್ರಷ್ಟಾಚಾರ ಪ್ರಕರಣಗಳಲ್ಲಿ ವಿವಿಧ ಅಧಿಕಾರಿಗಳ ಮೇಲೆ ಪ್ರಕರಣ ದಾಖಲಾದಾಗ ಅವರ ಕುಟುಂಬದವರ ಮನಸ್ಸಿನ ಮೇಲೆ ಬಹಳ ಆಘಾತವಾಗುತ್ತದೆ. ಕೆಲವು ಮಕ್ಕಳು ನಮಗೆ ಫೋನ್ ಮಾಡಿ ತಮ್ಮ ನೋವನ್ನು ಹೇಳಿಕೊಳ್ಳುತ್ತವೆ. ಆಗ ಕಣ್ಣಿರು ಬರುತ್ತದೆ. ಹಾಗಾಗಿ ಅಧಿಕಾರದಲ್ಲಿರುವ ತಂದೆ -ತಾಯಿಗಳು ತಮ್ಮ ಕುಟುಂಬದ ಹಾಗೂ ಮಕ್ಕಳ ಹಿತದೃಷ್ಟಿಯಿಂದ ಭ್ರಷ್ಟಾಚಾರದಲ್ಲಿ ತೊಡಗಿಕೊಳ್ಳಬಾರದು” ಎಂದು ಹೇಳಿದರು‌.

ಸಭೆಯಲ್ಲಿ ಅಪರ ಪೊಲೀಸ್ ಮಹಾ ನಿರ್ದೇಶಕರಾದ ಮನೀಶ್ ಖರ್ಚಿಕರ್, ಲೋಕಾಯುಕ್ತ ಕಾರ್ಯದರ್ಶಿ ಶ್ರೀನಾಥ್, ದಾವಣಗೆರೆ ಲೋಕಾಯುಕ್ತ ಎಸ್‌ಪಿ ಕೌಲಾಪೂರೆ, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ್ ದಾನಮ್ಮನವರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಲ್ಟಿತ ಕುಮಾರ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶ್ರೀಮತಿ ಯಶೋಧಾ ವಂಟಗೋಡಿ, ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಹಾಗೂ ಜಿ.ಪಂ.ಉಪಕಾರ್ಯದರ್ಶಿ ಡಾ.ಪುನೀತ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...