ಹಾವೇರಿ | ತಂಗಳು ಆಹಾರ ನೀಡುತ್ತಿದ್ದಾರೆ; ವಸತಿ ಶಾಲೆ ವಿದ್ಯಾರ್ಥಿಗಳ ಆರೋಪ

Date:

ವಸತಿ ಶಾಲೆಯಲ್ಲಿ ಬಿಸಿಯೂಟ ನೀಡುತ್ತಿಲ್ಲ. ತಂಗಳು ಆಹಾರ ನೀಡುತ್ತಾರೆ. ಬೇಡವೆಂದರೂ ಬಲವಂತವಾಗಿ ತಿನ್ನಲು ಕೊಡುತ್ತಾರೆ ಎಂದು ವಸತಿ ಶಾಲೆಯ ಮಕ್ಕಳು ಆರೋಪಿಸಿದ್ದಾರೆ.

- Advertisement -

ಹಾವೇರಿಯ ಕರ್ಜಗಿ-ಗಂಜೀಗಟ್ಟೆ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ಜಿ.ರಾಮತ್ನಾಳ ಅವರು ಶುಕ್ರವಾರ ಭೇಟಿ ನೀಡಿದ್ದರು. ಈ ವೇಳೆ, ವಿದ್ಯಾರ್ಥಿಗಳು ಶಾಲೆಯ ಸಿಬ್ಬಂದಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ವಸತಿ ಶಾಲೆಯ ಅವ್ಯವಸ್ಥೆಯನ್ನು ಗಮನಿಸಿದ ಶೇಖರಗೌಡ ಶಾಲೆಯ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶೇಖರಗೌಡ ಅವರ ಎದುರು ತಮ್ಮ ಅಳಲು ತೋಡಿಕೊಂಡಿರುವ ವಿದ್ಯಾರ್ಥಿಗಳು, “ರಾತ್ರಿ ಉಳಿದ ಆಹಾರವನ್ನು ಬೆಳಿಗ್ಗೆ ಉಪಹಾರಕ್ಕೆ ಮತ್ತು ಬೆಳಗಿನ ಆಹಾರವಮ್ಮಿ ಮಧ್ಯಾಹ್ನದ ಊಟಕ್ಕೆ ಕೊಡುತ್ತಾರೆ. ಕೊಟ್ಟೆ ತುಂಬಾ ಕೂಡ ಊಟ ಕೊಡುತ್ತಿಲ್ಲ. ತಂಗಳು ಆಹಾರವನ್ನೇ ಬಲವಂತವಾಗಿ ತಿನ್ನಲು ಕೊಡುತ್ತಾರೆ” ಎಂದು ಆರೋಪಿಸಿದ್ದಾರೆ.

ಅಲ್ಲದೆ, ಈ ವರ್ಷ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸರ್ಕಾರ ಒದಗಿಸಿರುವ ನೋಟ್ ಪುಸ್ತಕ ಮತ್ತು ಪೆನ್‌ಗಳನ್ಣೂ ಕೂಡ ವಿತರಿಸಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಮಕ್ಕಳ ಆರೋಪಗಳನ್ನು ಗಣನೆಗೆ ತೆಗೆದುಕೊಂಡಿರುವ ಸೇಖರಗೌಡ, ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ. ಶಾಲೆಯ ಪ್ರಾಚಾರ್ಯ ಮತ್ತು ವಾರ್ಡನ್‌ಗಳಿಗೆ ಸಮನ್ಸ್‌ ಜಾರಿ ಮಾಡುವುದಾಗಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...