ಸವಣೂರು | ರೋಗಿಗಳಿಂದಲೇ ಮಲದ ಗುಂಡಿ ಸ್ವಚ್ಛ: ವೈದ್ಯಾಧಿಕಾರಿ ಡಾ. ಶಂಕರ್ ಹಿರೇಗೌಡ್ರು, ನರ್ಸ್ ವನಿತಾ ಅಮಾನತು

Date:

ಹಾವೇರಿ ಜಿಲ್ಲೆಯ ಸವಣೂರು ತಾಲೂಕು ಆಸ್ಪತ್ರೆಯಲ್ಲಿ ರೋಗಿಗಳಿಂದ ಬರಿಗೈನಿಂದಲೇ ಮಲದ ಗುಂಡಿ ಸ್ವಚ್ಛಗೊಳಿಸಲು ಹೇಳಿದ ಆರೋಪದ ಮೇಲೆ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

- Advertisement -

ಆಗಸ್ಟ್ 28ರಂದು ವರದಿಯಾದ ಘಟನೆಗೆ ಸಂಬಂಧಿಸಿದಂತೆ ವೈದ್ಯಾಧಿಕಾರಿ ಡಾ. ಶಂಕರ್ ಹಿರೇಗೌಡ್ರು ಮತ್ತು ಸಿಬ್ಬಂದಿ ನರ್ಸ್ ವನಿತಾ ಅವರನ್ನು ಅಮಾನತುಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಆಸ್ಪತ್ರೆಗೆ ಬಂದ ರೋಗಿಗಳಿಂದ ಶೌಚಗುಂಡಿಯನ್ನು ಸ್ವಚ್ಛಗೊಳಿಸಲು ಸೂಚಿಸಿದ್ದರೆಂದು ವರದಿಯಾಗಿತ್ತು. ಈ ಆರೋಪದ ಹಿನ್ನೆಲೆಯಲ್ಲಿ ಹಿರಿಯ ನರ್ಸ್‌ ಹಾಗೂ ವೈದ್ಯರರನ್ನು ಅಮಾನತುಗೊಳಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು 2013ರ ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಉದ್ಯೋಗ ನಿಷೇಧ ಮತ್ತು ಅವರ ಪುನರ್ವಸತಿ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸವಣೂರು ತಾಲೂಕು ಆಸ್ಪತ್ರೆಗೆ ಸಂಬಂಧಿಸಿದ ವೈದ್ಯಾಧಿಕಾರಿ ಡಾ. ಶಂಕರ್ ವೈ. ಹಿರೇಗೌಡರ್ ಹಾಗೂ ಹಿರಿಯ ನರ್ಸ್ ವನಿತಾ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ತನಿಖೆ ಪೂರ್ಣಗೊಳ್ಳುವವರೆಗೆ ಅಮಾನತುಗೊಳಿಸಿದೆ. ಜಿಲ್ಲಾಡಳಿತವು ಆರೋಗ್ಯಾಧಿಕಾರಿ ಡಾ. ನಾಗರಾಜ್ ಅವರಿಂದಲೂ ವರದಿ ಕೇಳಿದೆ.

“ಒಂದೆರಡು ದಿನಗಳಿಂದ ಮಲದ ಗುಂಡಿ ಉಕ್ಕಿ ಹರಿಯುತ್ತಿತ್ತು. ಈ ಬಗ್ಗೆ ಡಾ. ಹಿರೇಗೌಡರ್ ಅವರು ಆಗಸ್ಟ್ 27ರಂದು ನಗರಸಭೆ ಅಧಿಕಾರಿಗಳಿಗೆ ಪತ್ರ ಬರೆದಿದ್ದರು. ಆದರೆ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ, ಅವರು ರೋಗಿಗಳನ್ನೇ ಕರೆದು ಕೈಯಿಂದ ಮಲ ತೆರವುಗೊಳಿಸುವ ಕೆಲಸಕ್ಕೆ ಬಳಸಿಕೊಂಡಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರುವುದು ವರದಿಯಾಗಿದೆ.

“ಮಲದ ಗುಂಡಿಯನ್ನು ಸ್ವಚ್ಛಗೊಳಿಸಿದರೆ ಉತ್ತಮ ಚಿಕಿತ್ಸೆ ಹಾಗೂ ಔಷಧಗಳನ್ನು ನೀಡುವುದಾಗಿ ರೋಗಿಗಳಿಗೆ ಭರವಸೆ ನೀಡಲಾಗಿತ್ತು” ಎಂದು ಪೊಲೀಸರು ತಿಳಿಸಿದ್ದಾರೆ.

ಆಗಸ್ಟ್ 28ರಂದು ಆಸ್ಪತ್ರೆ ಆವರಣದಲ್ಲಿದ್ದ ಮಲದ ಗುಂಡಿಯಿಂದ ಉಕ್ಕಿ ಹರಿದ ಮಾನವ ತ್ಯಾಜ್ಯವನ್ನು ರೋಗಿಗಳು ಬಕೆಟ್‌ಗಳಲ್ಲಿ ಹೊತ್ತೊಯ್ಯುತ್ತಿದ್ದ ದೃಶ್ಯಗಳನ್ನು ಸ್ಥಳೀಯ ನಿವಾಸಿಗಳು ಫೋಟೋ ಮತ್ತು ವಿಡಿಯೋಗಳಲ್ಲಿ ಸೆರೆಹಿಡಿದಿದ್ದರು. ಈ ವಿಡಿಯೋಗಳು ಹಾಗೂ ಫೋಟೋಗಳು ವೈರಲ್ ಆದ ಬಳಿಕ ಮಾಧ್ಯಮಗಳಲ್ಲಿ ವರದಿಯಾಗಿದ್ದವು.

ರೋಗಿಗಳನ್ನು ಗಮನಿಸಿದ ಸ್ಥಳೀಯ ನಿವಾಸಿಗಳು ಆಸ್ಪತ್ರೆ ಸಿಬ್ಬಂದಿಯನ್ನು ಪ್ರಶ್ನಿಸಿದಾಗ, ಹಿರೇಗೌಡರ್ ಅವರು ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿ, ಗುಂಡಿಯನ್ನು ಸ್ವಚ್ಛಗೊಳಿಸಲು ನಗರಸಭೆಯ ವಾಹನ ಕಳುಹಿಸುವಂತೆ ನಿವಾಸಿಗಳಿಗೆ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೋಲಾರ | ಚೋಳಘಟ್ಟ ಗಡಿ ಗ್ರಾಮದಲ್ಲಿ ಮಂಜೂರಾದ ಜಮೀನಿಗೆ ಅತಿಕ್ರಮಣ ಆರೋಪ

ಆಗಸ್ಟ್ 30ರಂದು ತಹಶೀಲ್ದಾರ್ ರವಿಕುಮಾರ್ ನಾಗಪ್ಪ ಕೊರವಾರ್ ನೀಡಿದ ದೂರಿನ ಪ್ರಕಾರ, “ಶಿಗ್ಗಾಂವಿ ತಾಲೂಕಿನ ಇಬ್ಬರು ಗ್ರಾಮಸ್ಥರು ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿ ವನಿತಾ ಅವರನ್ನು ಸಂಪರ್ಕಿಸಿದ್ದರು. ಅವರು ಉಕ್ಕಿ ಹರಿಯುತ್ತಿದ್ದ ಶೌಚಾಲಯವನ್ನು ಪರಿಶೀಲಿಸಿ, ಸಮಸ್ಯೆಯ ಕಾರಣ ಪತ್ತೆಹಚ್ಚಿ ಸ್ವಚ್ಛಗೊಳಿಸುವಂತೆ ಅವರಿಗೆ ಸೂಚಿಸಿದ್ದರು” ಎನ್ನಲಾಗಿದೆ.

“ಆ ಬಳಿಕ ಆ ಇಬ್ಬರು ವ್ಯಕ್ತಿಗಳು ಮಲದ ಗುಂಡಿಯನ್ನು ತೆರೆದು ನೋಡಿದಾಗ ಅದು ಕೊಳಚೆಯಿಂದ ತುಂಬಿರುವುದು ಕಂಡುಬಂದಿದೆ. ಆಸ್ಪತ್ರೆಯೇ ಒದಗಿಸಿದ್ದ ಬಕೆಟ್‌ಗಳನ್ನು ಬಳಸಿ ಅವರು ತ್ಯಾಜ್ಯವನ್ನು ಹೊರತೆಗೆಯಲು ಆರಂಭಿಸಿದ್ದರು” ಎಂದು ದೂರಿನಲ್ಲಿ ತಿಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ ಜಿಲ್ಲೆಯಲ್ಲಿ 8 ಅನಧಿಕೃತ ಕ್ಲಿನಿಕ್‌ಗಳು ಬಂದ್, ಪ್ರಕರಣ ದಾಖಲು

ವೈದ್ಯಕೀಯ ಪದವಿ ಪಡೆಯದೆ ಹಾಗೂ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆಪಿಎಂಇ)...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ: ಸಾಕ್ಷ್ಯ ಸಂಗ್ರಹಕ್ಕೆ ಸುಪ್ರೀಂ ಕೋರ್ಟ್ ಸಮಿತಿಯಿಂದ ವಿಶೇಷ ಪೋರ್ಟಲ್

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈ ತಿಂಗಳಲ್ಲಿ ನಡೆದ ಪ್ರತಿಭಟನೆ ವೇಳೆ ಪೆಲೆಟ್...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...