ಹಾವೇರಿ ವಿವಿ ಘಟಿಕೋತ್ಸವದಲ್ಲಿ ಕ್ಯಾಂಪಸ್ ವಿದ್ಯಾರ್ಥಿಗಳಿಗೂ ಅವಕಾಶ, ಕಲ್ಪಿಸುವಂತೆ ವಿದ್ಯಾರ್ಥಿಗಳ ಮನವಿ

Date:

“ಹಾವೇರಿ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವವನ್ನು ವಿರೋಧ, ಪ್ರತಿರೋಧಗಳ ಮಧ್ಯೆಯು ಖಾಸಗಿ ಕಾಲೇಜಿನಲ್ಲಿ ನಡೆಸುತ್ತಿರುವ ಘಟಿಕೋತ್ಸವದಲ್ಲಿ ವಿವಿ ಕ್ಯಾಂಪಸ್ ವಿದ್ಯಾರ್ಥಿಗಳಿಗೆ, ಉಪನ್ಯಾಸಕರಿಗೆ, ಸಿಬ್ಬಂದಿಗಳಿಗೆ ಅವಕಾಶಕ್ಕಾಗಿ ಆಗ್ರಹಿಸಿ ಕೆರಿಮತ್ತಿಹಳ್ಳಿಯಲ್ಲಿರುವ ಹಾವೇರಿ ವಿವಿ ಎದುರು ಎಲ್ಲಾ ವಿಭಾಗದ ಕ್ಯಾಂಪಸ್ ವಿದ್ಯಾರ್ಥಿಗಳು ವಿವಿ ಕುಲಸಚಿವ ಎಸ್.ಟಿ. ಬಾಗಲಕೋಟೆ ಅವರಿಗೆ ಮನವಿ ಪತ್ರ ಸಲ್ಲಿಸಿದರು.

- Advertisement -

ಹಾವೇರಿ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವವನ್ನು ಭಾರಿ ವಿರೋಧ, ಪ್ರತಿರೋಧ ಮಧ್ಯೆಯು ತುರಾತುರಿಯಲ್ಲಿ ನಗರದ ಖಾಸಗಿ ಕಾಲೇಜಿನಲ್ಲಿ ಎಪ್ರಿಲ್-6 ರಂದು ನಡೆಸುತ್ತಿರುವುದು ಬೇಸರದ ಸಂಗತಿಯಾಗಿದೆ. ಜಿಲ್ಲೆಯ ಹೆಮ್ಮೆಯ ಕ್ಷಣವಾದ ಮೊದಲ ಘಟಿಕೋತ್ಸವವು ವಿಶ್ವವಿದ್ಯಾಲಯದ ಅಭಿವೃದ್ಧಿ ಕನ್ನೊಟದಿಂದ ಕ್ಯಾಂಪಸ್ ನಲ್ಲಿಯೇ ನಡೆಸಬೇಕೆಂದು ವಿದ್ಯಾರ್ಥಿ ಸಂಘಟನೆ ಸೇರಿದಂತೆ ಪ್ರಗತಿಪರರು, ಶಿಕ್ಷಣ ಪ್ರೇಮಿಗಳು, ಶಿಕ್ಷಣ ತಜ್ಞರು, ಚಿಂತಕರು, ವಿದ್ಯಾರ್ಥಿಗಳು, ಉಪನ್ಯಾಸಕರು, ಅನೇಕ ಸಂಘಟನೆಗಳು ಕುಲಪತಿಗಳಿಗೆ, ಜಿಲ್ಲಾಧಿಕಾರಿಗಳಿಗೆ, ಉನ್ನತ ಶಿಕ್ಷಣ ಸಚಿವರಿಗೆ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇಷ್ಟು ಪ್ರತಿರೋಧದ ನಡುವೆಯೂ ಖಾಸಗಿ ಕಾಲೇಜಿನಲ್ಲಿ ನಡೆಸುತ್ತಿರುವ ಘಟಿಕೋತ್ಸವಕ್ಕೆ ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಎಲ್ಲಾ ವಿಭಾಗದ ವಿದ್ಯಾರ್ಥಿಗಳಿಗೆ ಅವಕಾಶ ಇಲ್ಲದಿರುವುದು ಎಲ್ಲಾ ವಿದ್ಯಾರ್ಥಿಗಳಿಗೆ ಬೇಸರ ಮೂಡಿದೆ. ವಿವಿ ಮೊದಲ ಘಟಿಕೋತ್ಸವವನ್ನು ಕಣ್ಣುತುಂಬಿಗೊಳಲು ಕಾಯುತ್ತಿರುವ ವಿದ್ಯಾರ್ಥಿಗಳಿಗೆ ನಿರಾಸೆ ಉಂಟಾಗಿದೆ. 

ಘಟಿಕೋತ್ಸವ ಕಾರ್ಯಕ್ರಮವನ್ನು ನೋಡಬೇಕು. ಅದರಲ್ಲಿ ಭಾಗವಹಿಸಿ ನಮ್ಮ ಹೆಮ್ಮೆಯ ವಿವಿಯ ವಿದ್ಯಾರ್ಥಿಗಳು ಚಿನ್ನದ ಪದಕ ಸ್ವೀಕರಿಸುವ ಕ್ಷಣವನ್ನು ನಾವು ಕಣ್ತುಂಬಿಕೊಂಡು ಸ್ಪೂರ್ತಿಯಾಗಿ ತೆಗೆದುಕೊಂಡು ಮುಂದಿನ ವರ್ಷದಲ್ಲಿ ನಾವು ಚೆನ್ನಾಗಿ ವಿದ್ಯಾಭ್ಯಾಸಮಾಡಿ ಚಿನ್ನದ ಪದಕ ಪಡೆಯಬೇಕು ಎಂಬ ಆಸೆಗೆ ತಣ್ಣಿರು ಎರಚಲಾಗಿದೆ ಎಂದು ಎಂದು ಕ್ಯಾಂಪಸ್ ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದರು.

ಸರ್ಕಾರವು ನಯಪೈಸೆ ಅನುದಾನ ನೀಡಿಲ್ಲ, ವಿವಿಯಲ್ಲಿ ಹಣವಿಲ್ಲ ದಿನನಿತ್ಯದ ಚಟುವಟಿಕೆಗಳು ಹಾಗೂ ಕಾರ್ಯಕ್ರಮಗಳು ಪ್ರಮುಖವಾಗಿ  ಘಟಿಕೋತ್ಸವವು ವಿದ್ಯಾರ್ಥಿಗಳು ನೀಡಿರುವ ಶುಲ್ಕ (ಫೀ) ದಲ್ಲಿ ಖರ್ಚು ವೆಚ್ಚ ಬಳಕೆ ಮಾಡುವುದಾದರೆ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಅವಕಾಶ ಯಾಕಿಲ್ಲ? ಎಂದು ವಿದ್ಯಾರ್ಥಿಗಳು ದೂರಿದರು. 

ಮನವಿ ಪತ್ರ ಸ್ವೀಕರಿಸಿದ ಕುಲಸಚಿವ ಎಸ್.ಟಿ. ಬಾಗಲಕೋಟೆ ಮಾತನಾಡಿ, “ನಿಮ್ಮ ಮನವಿಯನ್ನು ಕುಲಪತಿಗಳ ಜೊತೆಗೆ ಚರ್ಚೆ ನೆಡೆಸುತ್ತೇವೆ. ರಾಜ್ಯಪಾಲರ ಬಿಗಿ ಭದ್ರತೆ ಇರುವುದರಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಅವಕಾಶ ಕೊಡಲು ಕಷ್ಟವಾಗುತ್ತದೆ. ಆದರೂ ನಿಮ್ಮ ಮನವಿಯ ಕುರಿತು ಉನ್ನತ ಅಧಿಕಾರಿಗಳ ಜೊತೆಗೆ ಚರ್ಚಿಸುತ್ತೇವೆ” ಎಂದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಾದ ರಕ್ಷಿತಾ ಎಸ್ ಬಿ, ಐಶ್ವರ್ಯ ಬಿ ಎಮ್, ಮಂಗಳಾ ಜೆ ಎಮ್, ಶಂಭುಲಿಂಗ ಸವದತ್ತಿ, ಬಸವರಾಜ ಎಸ್, ಪೂಜಾ ಬಾರ್ಕಿ, ವಿ ಎಸ್ ಲಿಂಗಯ್ಯ, ಸಂದೀಪ್, ಪರಶುರಾಮ, ಕವಿತಾ ಪಿ ವಿ, ಈಶ್ವರಿ ಎಮ್ ಬಿ, ನಿಂಗರಾಜ ಕೆ ಟಿ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

ಕಲಬುರಗಿ | ಪಡಿತರ ಅಕ್ಕಿ ವಾಹನ ಬಿಡುಗಡೆ ಆರೋಪ: ಆಳಂದ ಪಿಐ ಸೇರಿ ನಾಲ್ವರು ಅಮಾನತು

ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ಜಪ್ತಿ ಮಾಡಿದ ಬಳಿಕ ಪ್ರಕರಣ...

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...