ಕಲಬುರಗಿ | ನಿರಗುಡಿಯ ಹವಾ ಮಲ್ಲಿನಾಥ ಮುತ್ಯಾಗೆ ನ್ಯಾಯಾಂಗ ಬಂಧನ

Date:

ಮಹಿಳೆಗೆ ಜಾತಿ ನಿಂದನೆ ಮಾಡಿ, ಜೀವ ಬೆದರಿಕೆ ಹಾಕಿದ ಆರೋಪದ ಪ್ರಕರಣದಲ್ಲಿ ಕೋರ್ಟ್‌ನಿಂದ ವಾರೆಂಟ್ ಜಾರಿಯಾದರೂ ಸಹ ನ್ಯಾಯಾಲಯಕ್ಕೆ ಹಾಜರಾಗದ ಜೈ ಭಾರತ್ ಮಾತಾ ಸೇವಾ ಸಮಿತಿಯಸಂಸ್ಥಾಪಕ ಅಧ್ಯಕ್ಷ, ನಿರಗುಡಿಯ ಹವಾ ಮಲ್ಲಿನಾಥ್ ಮಹಾರಾಜ ಮುತ್ಯಾ ಅವರನ್ನು ಕಲಬುರಗಿಯ ಎಂ.ಬಿ ನಗರ ಪೊಲೀಸರು ಬಂಧಿಸಿದ್ದಾರೆ.

2017ರ ಅಟ್ರಾಸಿಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಕಲಬುರಗಿಯ ಎರಡನೇ ಹೆಚ್ಚುವರಿ ನ್ಯಾಯಲಯದಿಂದ ವಾರೆಂಟ್ ಜಾರಿಗೊಳಿಸಿತ್ತು. ನೋಟಿಸ್ ಜಾರಿಯಾದರೂ ಸಹ ನ್ಯಾಯಾಲಯಕ್ಕೆ ಹಾಜರಾಗದ ಹವಾ ಮಲ್ಲಿನಾಥ್ ಮುತ್ಯಾನನ್ನು ಸೋಮವಾರ ಕೋರ್ಟ್‌ಗೆ ಹಾಜರಾದ ಸಂದರ್ಭದಲ್ಲಿ ಬಂಧಿಸಲಾಗಿದೆ.

ಕಲಬುರಗಿಯ ಜೈ ಭಾರತ ಮಾತಾ ಸೇವಾ ಸಮಿತಿ ಅಧ್ಯಕ್ಷ ಹವಾ ಮಲ್ಲಿನಾಥ ಮಹಾರಾಜ ಮುತ್ಯಾಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕಲಬುರಗಿ 2ನೇ ಜಿಲ್ಲಾ ಸತ್ರ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ದಲಿತ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ ಸಹಕರಿಸಿದ ಆರೋಪ ಮಲ್ಲಿನಾಥ ಮುತ್ಯಾ ಮೇಲೆ ಇದೆ. ಹವಾ ಮಲ್ಲಿನಾಥ ಮುತ್ಯಾ ಅವರ ಸಂಬಂಧಿ ಪ್ರಕಾಶ್ ಮೇಲೆ ಜಾತಿ ನಿಂದನೆ ಮತ್ತು ಅತ್ಯಾಚಾರ ಪ್ರಕರಣವಿದ್ದು, ಹವಾ ಮಲ್ಲಿನಾಥ ಮುತ್ಯಾ ಎರಡನೇ ಆರೋಪಿಯಾಗಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮತ ಎಣಿಕೆ; ಜೂ. 4ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

ಲೋಕಸಭಾ ಚುನಾವಣೆಯ ಮತ ಎಣಿಕೆ ಹಿನ್ನೆಲೆ, ಜೂನ್ 4ರಂದು ಬೆಂಗಳೂರು ಪೊಲೀಸ್...

ಜೂನ್‌ನಲ್ಲಿ ದೇಶಾದ್ಯಂತ ಬ್ಯಾಂಕುಗಳಿಗೆ ಒಟ್ಟು 13 ದಿನ ರಜೆ

ಈ ವರ್ಷದ ಆರಂಭದಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಬ್ಯಾಂಕ್ ರಜಾದಿನಗಳ...

ಬೆಂಗಳೂರು | ಗಗನಕ್ಕೇರಿದ ತರಕಾರಿ ಬೆಲೆ; ಬೀನ್ಸ್‌ ಕೆಜಿಗೆ ₹220

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತರಕಾರಿ ಬೆಲೆ ಏರಿಕೆಯಾಗುತ್ತಿದ್ದು, ಜನರು...

ಬೇಸಿಗೆ ವಿಶೇಷ | ಬೆಂಗಳೂರು-ಕಲಬುರಗಿ ಎಕ್ಸ್ ಪ್ರೆಸ್ ರೈಲು ರದ್ದು

ಮಧ್ಯ ರೈಲ್ವೆ ವ್ಯಾಪ್ತಿಯಲ್ಲಿನ ಕಾರ್ಯಾಚರಣೆ ನಿರ್ಬಂಧಗಳ ಕಾರಣದಿಂದಾಗಿ ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ...