ಶೃಂಗೇರಿ ವಿಧಾನಸಭೆ ಚುನಾವಣೆ | ಪೋಸ್ಟಲ್ ಬ್ಯಾಲೆಟ್ ಮತಗಳ ಮರು ಪರಿಶೀಲಿಸಲು ಹೈಕೋರ್ಟ್ ಆದೇಶ

Date:

ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ ಡಿ ರಾಜೇಗೌಡ ಅವರ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ 279 ಅಂಚೆ ಮತಪತ್ರಗಳ ಮರು ಪರಿಶೀಲನೆಗೆ ಆದೇಶಿಸಿದೆ.

- Advertisement -

ಶೃಂಗೇರಿ ಕ್ಷೇತ್ರದಿಂದ ಗೆದ್ದಿರುವ ಟಿ. ಡಿ. ರಾಜೇಗೌಡ ಅವರ ಆಯ್ಕೆ ಅಸಿಂಧು ಎಂದು ಘೋಷಿಸುವಂತೆ ಕೋರಿ ಪರಾಭವಗೊಂಡಿರುವ ಅಭ್ಯರ್ಥಿ ಡಿ. ಎನ್. ಜೀವರಾಜ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಆರ್. ನಟರಾಜ್ ಅವರಿದ್ದ ನ್ಯಾಯಪೀಠ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನು ಓದಿದ್ದೀರಾ? ಉರಿ-ನಂಜೇಗೌಡ ವಿವಾದ | ನಿರ್ಮಲಾನಂದನಾಥ ಸ್ವಾಮಿಗೆ ಸೆಡ್ಡು ಹೊಡೆದ ಸಿ ಟಿ ರವಿ

ಸೋಮವಾರ ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ಮರು ಪರಿಶೀಲನೆಯನ್ನು ಎರಡು ವಾರಗಳಲ್ಲಿ ಪೂರ್ಣಗೊಳಿಸುವಂತೆ ಆದೇಶಿಸಿದೆ. ಈ ಹಿಂದೆ ತಿರಸ್ಕರಿಸಲಾಗಿರುವ 279 ಅಂಚೆ ಮತಪತ್ರಗಳನ್ನು ಇದೀಗ ನಿರ್ಣಾಯಕವಾಗಿದೆ. ಅಂತಿಮ ಫಲಿತಾಂಶದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರಬಹುದು. ಈ ಮತಗಳಲ್ಲಿ ಗಣನೀಯ ಸಂಖ್ಯೆಯ ಮತಗಳು ಜೀವರಾಜ್ ಪರವಾಗಿ ಪರವಾಗಿ ಇರುವ ಸಾಧ್ಯತೆಯಿದೆ. ಇದರಿಂದಾಗಿ ಫಲಿತಾಂಶವೇ ಬದಲಾಗುವ ಸಾಧ್ಯತೆಯಿದೆ.

ರಾಜೇಗೌಡರು 2023ರ ವಿಧಾನಸಭೆ ಚುನಾವಣೆಯಲ್ಲಿ ಸುಮಾರು 200 ಮತಗಳ ಕಡಿಮೆ ಅಂತರದಿಂದ ಗೆದ್ದಿದ್ದಾರೆ. ಅಂಚೆ ಮತಪತ್ರಗಳ ಎಣಿಕೆಯಲ್ಲಿ ಅಕ್ರಮಗಳು ನಡೆದಿವೆ. ಚುನಾವಣೆಯ ಸಮಯದಲ್ಲಿ ವಿಜೇತ ಅಭ್ಯರ್ಥಿ 120 ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ. ತಮ್ಮ ಬಳಿ ಸಾಂದರ್ಭಿಕ ಸಾಕ್ಷ್ಯಗಳಿವೆ ಎಂದು ಜೀವರಾಜ್ ಆರೋಪಿಸಿದರು.

ಇನ್ನು ರಾಜೇಗೌಡರ ಪರ ವಕೀಲರು ಹೈಕೋರ್ಟ್‌ ಆದೇಶಕ್ಕೆ ತಡೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ. ಆದರೆ ಜೀವರಾಜ್ ಪರ ವಕೀಲರು ಇದಕ್ಕೆ ವಿರೋಧ ಸಲ್ಲಿಸಿದರು. ಎರಡೂ ಕಡೆಯ ವಾದ ವಿವಾದ ಆಲಿಸಿ ಹೈಕೋರ್ಟ್, ರಾಜೇಗೌಡರ ಪರ ವಕೀಲರು ಮೇಲ್ಮನವಿ ಸಲ್ಲಿಸಲು ಅನುಮತಿ ನೀಡಿದರು. ಎರಡು ವಾರಗಳ ಅವಧಿಗೆ ತನ್ನ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದರು.

ಇದನ್ನು ಓದಿದ್ದೀರಾ? ಕಾಂಗ್ರೆಸ್‌ನ ಕೆ ವೈ ನಂಜೇಗೌಡ ಶಾಸಕ ಸ್ಥಾನ ಅಸಿಂಧು, ಮತಗಳ ಮರು ಎಣಿಕೆಗೆ ಹೈಕೋರ್ಟ್‌ ಸೂಚನೆ

ಎರಡು ವಾರಗಳ ಮಧ್ಯಂತರ ತಡೆಯಾಜ್ಞೆ ಜಾರಿಯಲ್ಲಿರುವ ಕಾರಣ, ಪ್ರಕರಣದ ಮುಂದಿನ ಕ್ರಮವು ಸುಪ್ರೀಂ ಕೋರ್ಟ್‌ನಲ್ಲಿ ಪ್ರಸ್ತಾವಿತ ಮೇಲ್ಮನವಿಯ ವಿಚಾರಣೆಯ ಮೇಲೆ ಅವಲಂಬಿಸಿದೆ.

ಶೃಂಗೇರಿ ಕ್ಷೇತ್ರದ 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ, ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ 59,171 ಮತಗಳನ್ನು ಗಳಿಸಿದರೆ, ಬಿಜೆಪಿಯ ಡಿ.ಎನ್. ಜೀವರಾಜ್ 58,970 ಮತಗಳನ್ನು ಗಳಿಸಿದರು. ರಾಜೇಗೌಡ ಅವರು ಕೇವಲ 201 ಮತಗಳ ಅಲ್ಪ ಅಂತರದಿಂದ ಗೆಲುವು ಸಾಧಿಸಿದ್ದರು.

ನಂಜೇಗೌಡ ಮತ್ತು ಕೆ.ಎಸ್. ಮಂಜುನಾಥ ಗೌಡ ಪ್ರಕರಣ

ಈ ಹಿಂದೆ ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ಕೆ.ವೈ. ನಂಜೇಗೌಡ ಅವರ ಚುನಾವಣೆಯನ್ನು ಆರಂಭದಲ್ಲಿ ರದ್ದುಗೊಳಿಸಿ, ಮರು ಎಣಿಕೆಗೆ ಆದೇಶಿಸಲಾಗಿತ್ತು. ಸುಪ್ರೀಂ ಕೋರ್ಟ್ ಅಂತಿಮವಾಗಿ ಅವರ ಶಾಸಕ ಸ್ಥಾನವನ್ನು ಎತ್ತಿಹಿಡಿದಿದೆ.

2023ರ ಚುನಾವಣೆಯಲ್ಲಿ ನಂಜೇಗೌಡರು ಕೇವಲ 248 ಮತಗಳ ಅಂತರದಿಂದ ಗೆದ್ದಿದ್ದರು. ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಅಭ್ಯರ್ಥಿ ಕೆ.ಎಸ್. ಮಂಜುನಾಥ ಗೌಡ ಅವರು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ನಂಜೇಗೌಡರ ಆಯ್ಕೆಯನ್ನು ಅಸಿಂಧುಗೊಳಿಸಿ, ನಾಲ್ಕು ವಾರಗಳಲ್ಲಿ ಮರು ಮತ ಎಣಿಕೆ ನಡೆಸುವಂತೆ ಆದೇಶಿಸಿತ್ತು.

ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ನಂಜೇಗೌಡರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಸುಪ್ರೀಂ ಕೋರ್ಟ್ ಹೈಕೋರ್ಟ್‌ನ ‘ಆಯ್ಕೆ ರದ್ಧತಿ’ ಆದೇಶಕ್ಕೆ ತಡೆಯಾಜ್ಞೆ ನೀಡಿತ್ತು. ಆದರೆ ಮರು ಮತ ಎಣಿಕೆ ಪ್ರಕ್ರಿಯೆಯನ್ನು ಮುಂದುವರಿಸಲು ಸೂಚಿಸಿ, ಅದರ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ತನಗೆ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು.

ಮರು ಎಣಿಕೆಯ ವರದಿಯನ್ನು ಪರಿಶೀಲಿಸಿದ ಸುಪ್ರೀಂ ಕೋರ್ಟ್, ಮರು ಎಣಿಕೆಯಲ್ಲೂ ನಂಜೇಗೌಡರು ತಮ್ಮ ಪ್ರತಿಸ್ಪರ್ಧಿಗಿಂತ 250 ಮತಗಳ ಮುನ್ನಡೆ ಸಾಧಿಸಿರುವುದು ಘೋಷಿಸಿದೆ. ಈ ಹಿನ್ನೆಲೆಯಲ್ಲಿ, ಫೆಬ್ರವರಿ 5 ರಂದು ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶವನ್ನು ರದ್ದುಪಡಿಸಿ, ಕೆ.ವೈ. ನಂಜೇಗೌಡ ಅವರ ಆಯ್ಕೆಯನ್ನು ಎತ್ತಿಹಿಡಿದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಸಾಮಾಜಿಕ ಜಾಲತಾಣ; ಶಾಸಕ ಟಿ.ಡಿ ರಾಜೇಗೌಡರಿಗೆ ಅವಹೇಳನ, ಬೆದರಿಕೆ; ಪ್ರಕರಣ ದಾಖಲು 

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರದ ಶಾಸಕ ಸನ್ಮಾನ್ಯ ಶ್ರೀ ಟಿ. ಡಿ...

ಬೀದರ್‌ | ಅ.24, 25ರಂದು ʼಕಲ್ಯಾಣ ಪರ್ವʼ ರಜತ ಮಹೋತ್ಸವ

ಬಸವ ಧರ್ಮ ಪೀಠದ ಸ್ವಾಭಿಮಾನಿ ಹಾಗೂ ತತ್ವನಿಷ್ಠ ಶರಣರಿಂದ ಅಕ್ಟೋಬರ್ 24...

ಕಲಬುರಗಿ | ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ; ಕಾರಾಗೃಹ ಡಿಐಜಿ ಬಂಧನ

ಬೆಂಗಳೂರು ಸುಪ್ರೀಂ ಕೋರ್ಟ್‌ ಆದೇಶದ ಮಾದರಿಯನ್ನು ಅನುಕರಿಸಿ ನಕಲಿ ಆದೇಶವೊಂದನ್ನು ಸಿದ್ಧಪಡಿಸಿ...

ಬೀದರ್‌ | ಒತ್ತಡ ನಿವಾರಣೆಗೆ ಸಾಂಸ್ಕೃತಿಕ ಚಟುವಟಿಕೆ ಅಗತ್ಯ: ಡಿಸಿ ಶಿಲ್ಪಾ ಶರ್ಮಾ

ಯುವಜನರಲ್ಲಿರುವ ಪ್ರತಿಭೆಯನ್ನು ಹೊರತರುವುದರ ಜೊತೆಗೆ, ದೈನಂದಿನ ಜೀವನದ ಮಾನಸಿಕ ಒತ್ತಡ ನಿವಾರಿಸಿ...