ಯಾವ ಶಾಸಕರೂ ಜೆಡಿಎಸ್ ಬಿಡಲ್ಲ, ಪಕ್ಷ ಸಂಘಟನೆಗೆ ನಾನೂ ತೊಡಗಿಕೊಳ್ಳುವೆ: ಹೆಚ್‌ ಡಿ ದೇವೇಗೌಡ

Date:

  • ‘ನಮ್ಮ ಶಾಸಕರು ಪಕ್ಷ ಬಿಟ್ಟು ಹೋಗಲಿದ್ದಾರೆ ಎಂಬುದು ಊಹಾಪೋಹ‘
  • ‘ಸೆಪ್ಟೆಂಬರ್‌ 10ರಂದು ಸಭೆ, ಎಲ್ಲ ಜಿಲ್ಲೆಗಳ ಕಾರ್ಯಕರ್ತರು ಹಾಜರು‘

ನಮಗೆ ಯಾವ ಪಕ್ಷದ ಮೇಲೂ ದ್ವೇಷ ಇಲ್ಲ. ನಮ್ಮ ಪಕ್ಷ ಸಂಘಟನೆಗೆ ಕೆಲಸ ಮಾಡುತ್ತಿದ್ದೇವೆ. ನಾನು ಕೂಡ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ. ಯಾವ ಶಾಸಕರೂ ಜೆಡಿಎಸ್​​ ಬಿಟ್ಟು ಹೋಗುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಹೆಚ್ ​ಡಿ ದೇವೇಗೌಡ ತಿಳಿಸಿದರು.

- Advertisement -

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ನಮ್ಮ ಶಾಸಕರು ಪಕ್ಷ ಬಿಟ್ಟು ಹೋಗಲಿದ್ದಾರೆ ಎಂಬುದು ಬರೀ ಊಹಾಪೋಹ” ಎಂದು ಪಕ್ಷಾಂತರ ವದಂತಿಗೆ ಸ್ಪಷ್ಟನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಜೆಡಿಎಸ್‌ ಸಂಘಟನೆ ದೃಷ್ಟಿಯಿಂದ ಹಲವು ಕಾರ್ಯಕ್ರಮ ಆಯೋಜನೆ ಮಾಡುತ್ತಿದ್ದೇವೆ. ಬಿಜೆಪಿ, ಕಾಂಗ್ರೆಸ್ ನಡುವೆ ನಮ್ಮ ಪಕ್ಷ ಉಳಿಸುವ ಸಂಕಲ್ಪ ಮಾಡಿದ್ದೇವೆ. ಜಿ ಟಿ ದೇವೇಗೌಡರ ಅಧ್ಯಕ್ಷತೆಯಲ್ಲಿ ಕೋರ್​ ಕಮಿಟಿ ಮಾಡಿ ರಾಜ್ಯಾದ್ಯಂತ ಪ್ರವಾಸ ಆಯೋಜನೆ ಮಾಡಲಾಗುವುದು” ಎಂದರು.

“ಈ ದೇಶದ ರಾಜಕಾರಣ ಹೇಗೆ ನಡೆಯುತ್ತಿದೆ ಎಂಬುದನ್ನು ಬಿಡಿಸಿ ಹೇಳಬೇಕಿಲ್ಲ. ಸೆಪ್ಟೆಂಬರ್‌ 10 ರಂದು ಜೆಡಿಎಸ್ ಸಭೆ ನಡೆಸುತ್ತೇನೆ. ಅದಕ್ಕೆ ಎಲ್ಲ ಜಿಲ್ಲೆಗಳಿಂದ ಕಾರ್ಯಕರ್ತರು ಹಾಜರಾಗಲಿದ್ದಾರೆ. ನನ್ನ ಕೈಬಿಡಬೇಡಿ ಎಂದು ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿಕೊಳ್ಳುವೆ” ಎಂದು ವಿನಂತಿಸಿಕೊಂಡರು.

ಮೆಡಿಕಲ್ ಕಾಲೇಜು ಸ್ಥಳಾಂತರ ಬೇಡ

ರಾಮನಗರದಿಂದ ಕನಕಪುರಕ್ಕೆ ರಾಜೀವ್‌ ಗಾಂಧಿ ಮೆಡಿಕಲ್ ಕಾಲೇಜು ಸ್ಥಳಾಂತರ ವಿಚಾರವಾಗಿ ಪ್ರತಿಕ್ರಿಯಿಸಿ, “ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಮೆಡಿಕಲ್ ಕಾಲೇಜು ಮಂಜೂರಾಗಿತ್ತು. ಕನಕಪುರ ಮನೆ ಇದ್ದ ಹಾಗೆ, ಆದರೆ ರಾಮನಗರ ಸೆಂಟರ್. ಮೆಡಿಕಲ್​ ಕಾಲೇಜಿನ ವಿಚಾರದಲ್ಲೂ ರಾಜಕೀಯ ಮಾಡಬಾರದು. ಅವರದ್ದೇ ಸರ್ಕಾರವಿದೆ, ಕನಕಪುರಕ್ಕೆ ಇನ್ನೊಂದು ಕಾಲೇಜು ಮಾಡಿಕೊಳ್ಳಲಿ” ಎಂದರು.

ಈ ಸುದ್ದಿ ಓದಿದ್ದೀರಾ? ನೂರು ದಿನದಲ್ಲಿ ಸರ್ಕಾರ ಎಡವಿದ್ದೇ ಹೆಚ್ಚು, ಗ್ಯಾರಂಟಿ ನೆಪದಲ್ಲಿ ಅಭಿವೃದ್ಧಿ ನಿಂತು ಹೋಗಿದೆ: ಮಾಜಿ ಸಿಎಂ ಬೊಮ್ಮಾಯಿ ಟೀಕೆ

ಕುಮಾರಸ್ವಾಮಿ ಬಗ್ಗೆ ಲಘು ಮಾತು ಬೇಡ

“ಸರ್ಕಾರದ ಮೇಲೆ ಹೆಚ್ ​ಡಿ ಕುಮಾರಸ್ವಾಮಿ ಯಾವುದೇ ದ್ವೇಷದಿಂದ ಮಾತನಾಡುತ್ತಿಲ್ಲ. ಮನೆಯಲ್ಲಿ ಕುಳಿತುಕೊಂಡು ಎಲ್ಲವನ್ನೂ ನೋಡುತ್ತಿದ್ದೇನೆ. ಕುಮಾರಸ್ವಾಮಿ ಪೆನ್ ಡ್ರೈವ್ ವಾದ ವಿವಾದ ನೋಡಿದ್ದೇನೆ. ಅವರು ಅಷ್ಟು ಸುಲಭವಾಗಿ ಮಾತಾಡಲ್ಲ. ಅದ್ದರಿಂದ ಅವರ ಬಗ್ಗೆ ಲಘುವಾಗಿ ಮಾತನಾಡಬೇಡಿ” ಎಂದು ಹೇಳಿದರು.

ಚಂದ್ರಯಾಣ-3 ಸಾಧನೆಗೆ ಪ್ರಶಂಸೆ

“ಚಂದ್ರಯಾನ-3 ರ ಯಶಸ್ಸಿಗಾಗಿ ಇಸ್ರೋ ವಿಜ್ಞಾನಿಗಳ ಸಾಧನೆಗೆ ದೇವೇಗೌಡರು ಪ್ರಶಂಸೆ ವ್ಯಕ್ತಪಡಿಸಿ, “ವಿಜ್ಞಾನಿಗಳು ಚಂದ್ರಯಾನ 3 ಯಶಸ್ವಿಗೊಳಿಸಿ ಇಡೀ ವಿಶ್ವ ಭಾತರದ ಕಡೆ ನೋಡುವಂತೆ ಮಾಡಿದ್ದಾರೆ. ದೇಶದ ಘನತೆ ಮತ್ತು ಗೌರವ ಹೆಚ್ಚಿಸಿದ್ದಾರೆ. ವಿಜ್ಞಾನಿಗಳ ಈ ಸಾಧನೆಗೆ ಅಭಿನಂದನೆ ಸಲ್ಲಿಸುತ್ತೇನೆ”ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...