ದಕ್ಷಿಣ ಕನ್ನಡ | ಬಿಜೆಪಿ ನಾಯಕರ ಪೋಸ್ಟರ್‌ ಹಾಕಿದ್ದವರ ಮೇಲೆ ಪೊಲೀಸರ ದೌರ್ಜನ್ಯ; ಆರೋಪ

Date:

  • ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ ಎಂದು ಪೋಸ್ಟರ್‌ ಹಾಕಲಾಗಿತ್ತು
  • ಪ್ರಕರಣ ಸಂಬಂಧ 9 ಮಂದಿಯನ್ನು ವಶಕ್ಕೆ ಪಡೆದಿರುವ ಪೊಲೀಸರು

ಪುತ್ತೂರು ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರ ಪೋಟೋವುಳ್ಳ ಬ್ಯಾನರ್‌ ಹಾಕಿ, ಭಾವಪೂರ್ಣ ಶ್ರದ್ಧಾಂಜಲಿ ಎಂದು ಬರೆದು ಚಪ್ಪಲಿ ಹಾರ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಬತ್ತು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅವರ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದ್ದು ಎನ್ನಲಾದ ಫೋಟೊ ಮತ್ತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಿಜೆಪಿ ಮುಖಂಡರು ಮತ್ತು ನಗರಸಭೆ ನೀಡಿದ ದೂರಿನ ಅನ್ವಯ ನರಿಮೊಗರು ಗ್ರಾಮದ ನಿವಾಸಿಗಳಾದ ವಿಶ್ವನಾಥ್, ಮಾದವ, ಅಭಿ ಯಾನೆ ಅವಿನಾಶ್, ಶಿವರಾಮ್, ಚೈತ್ರೇಶ್, ಈಶ್ವರ್, ನಿಶಾಂತ್, ದೀಕ್ಷಿತ್, ಗುರುಪ್ರಸಾದ್ ಅವರನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ಎಲ್ಲರಿಗೂ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ತಡರಾತ್ರಿ ಪುತ್ತೂರು ಡಿವೈಎಸ್‌ಪಿ ಕಚೇರಿಯಲ್ಲಿ ನಡೆದಾಡಲು ಕಷ್ಟ ಪಡುವ ರೀತಿ ಹೆಜ್ಜೆ ಹಾಕುತ್ತಿರುವ ವಿಡಿಯೋ ಮತ್ತು ಥಳಿತದಿಂದ ಗಾಯಗೊಂಡ ಯುವಕರ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೋಟೊದಲ್ಲಿ ಬೆನ್ನು ಸೊಂಟದ ಹಿಂಭಾಗದಲ್ಲಿ ಥಳಿಸಿರುವುದು ಕಂಡುಬಂದಿದೆ.

ಬಂಧಿತರು ಹಿಂದೂ ಸಂಘಟನೆಯ ಕಾರ್ಯಕರ್ತರಾಗಿದ್ದಾರೆ. ಅವರಲ್ಲಿ ಕೆಲವರು ಈ ಬಾರಿ ಪಕ್ಷೇತರ ಅಭ್ಯರ್ಥಿಯ ಪರ ಪ್ರಚಾರಕ್ಕೆ ಹೋಗಿದ್ದರು. ಉಳಿದವರು ಬಿಜೆಪಿಯ ಪರವೇ ಪ್ರಚಾರ ನಡೆಸಿದ್ದರು ಎನ್ನಲಾಗಿದೆ.

ಜಿಲ್ಲೆ, ರಾಜ್ಯದ ಕೆಲ ಪ್ರಭಾವಿಗಳ ಒತ್ತಡದಿಂದ ಬಂಧನದ ನೆಪದಲ್ಲಿ ದೌರ್ಜನ್ಯ ನಡೆಸಲಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಈ ಸುದ್ದಿ ಓದಿದ್ದೀರಾ? ಹಿಂದೂ ಕಾರ್ಯಕರ್ತರಿಗೆ ಧಿಕ್ಕಾರ ಕೂಗಿದ ಬಿಜೆಪಿ ಮುಖಂಡ ಸಂಜೀವ ಮಠಂದೂರು!

ಒಂಬತ್ತು ಮಂದಿ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಸಂಬಂಧ ಆಂತರಿಕ ವಿಚಾರಣೆ ಆರಂಭಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅಮಥೆ ವಿಕ್ರಮ್‌ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ.25-26ರಂದು ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ನಡೆಯಲಿದೆ ಕರಾವಳಿಯ ‘ಕಂಬಳ’

ಕಂಬಳ ವೀಕ್ಷಿಸಲು 9 ಲಕ್ಷ ಮಂದಿ ಬರುವ ನಿರೀಕ್ಷೆ ಇದೆ ಎಂದ...

ಕೊಡಗು | ಚಿರತೆ ದಾಳಿಗೆ ಕುರಿ ಬಲಿ; ವಸತಿ ಶಾಲೆಯ ಮಕ್ಕಳಲ್ಲಿ ಆತಂಕ

ಸುಂಟಿಕೊಪ್ಪ ಕೊಡಗು ಜಿಲ್ಲೆಯ ಸುಂಟಿಕೊಪ್ಪದ ಸಮೀಪದ ಗರಂಗದೂರಿನ ಮೊರಾರ್ಜಿ ದೇಸಾಯಿ ವಸತಿ...

ಬೆಂಗಳೂರು | ಕನ್ನಡಿಗರ ಬಗ್ಗೆ ಅವಹೇಳನಕಾರಿ ಬರಹ; ಪಶ್ಚಿಮ ಬಂಗಾಳ ಮೂಲದ ಯುವಕನ ಬಂಧನ

ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್‌ನಲ್ಲಿ ಬೆಂಗಳೂರು ಹಾಗೂ ಕನ್ನಡಿಗರ ಬಗ್ಗೆ ಅವಹೇಳನಕಾರಿ ಬರಹ...

ಮೈಸೂರು | ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಗ್ರಾಮ ವಾಸ್ತವ್ಯ

ನಂಜನಗೂಡು ತಾಲೂಕಿನ ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್‌ ಗ್ರಾಮ ವಾಸ್ತವ್ಯ...