ಕಲಬುರಗಿ | ಅಪ್ರಾಪ್ತ ಬಾಲಕಿಯ ಕತ್ತು ಕೊಯ್ದು ಪರಾರಿಯಾದ ಬಾಲಕರು

Date:

ಸಿನಿಮೀಯ ರೀತಿಯಲ್ಲಿ ಇಬ್ಬರು ಬಾಲಕರು ಅಪ್ರಾಪ್ತ ಬಾಲಕಿಯನ್ನು ಬಸ್ಸಿನಿಂದ ಕೆಳಗಿಳಿಸಿ ಚಾಕುವಿನಿಂದ ಕತ್ತು ಕೊಯ್ದು ಪರಾರಿಯಾಗಿರುವ ಘಟನೆ ಕಲಬುರಗಿ ಹೊರವಲಯದ ಅಟ್ಟೂರ್ ಕ್ರಾಸ್ ಹತ್ತಿರ ನಡೆದಿದೆ. ‌

- Advertisement -

ಬೆಳಮಗಿ ಗ್ರಾಮದಿಂದ ವಿ.ಕೆ. ಸಲಗರ್ ಗ್ರಾಮಗಳ ಮಧ್ಯೆ ಸಂಚರಿಸುತ್ತಿದ್ದ ಬಸ್‌ನಲ್ಲಿ ಈ ಘಟನೆ ನಡೆದಿದ್ದು, ಚನ್ನವೀರ ಮತ್ತು ಆತನ ಸ್ನೇಹಿತ ಇಬ್ಬರು ಸೇರಿ ಕೃತ್ಯ ಎಸಗಿ ಅಲ್ಲಿಂದ ಪರಾರಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಎಸ್‌ಎಸ್‌ಎಲ್‌ಸಿ ತರಗತಿ ಓದುತ್ತಿರುವ ವಿದ್ಯಾರ್ಥಿನಿಗೆ ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿದ್ದು, ಪ್ರೀತಿ ಮಾಡಲು ನಿರಾಕರಿಸಿದ್ದೇ ಕಾರಣ ಎನ್ನಲಾಗುತ್ತಿದೆ.

ಎಂದಿನಂತೆ ಬಾಲಕಿ ಶಾಲೆಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಳು, ಅಟ್ಟೂರ್‌ ಕ್ರಾಸ್‌ ಬಳಿ ಬೈಕ್‌ನಲ್ಲಿ ಹಿಂಬಾಲಿಸಿದ ಬಾಲಕರು ಬಸ್‌ಗೆ ಅಡ್ಡಗಟ್ಟಿ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿಗೆ ಚಾಕು ತೋರಿಸಿ ಕೆಳಗಿಳಿಸಿ, ನಂತರ ಕತ್ತು ಕೊಯ್ದು ಓಡಿ ಹೋಗಿದ್ದಾರೆ ಎಂದು ತಿಳಿದು ಬಂದಿದೆ.
ನರೋಣಾ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಗಂಭೀರವಾಗಿ ಸ್ಥಿತಿಯಲ್ಲಿರುವ ಬಾಲಕಿಯನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಉಚ್ಚಿಲ ದಸರಾ ಶೋಭಾಯಾತ್ರೆ: ಅ. 21ರಂದು ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಉಡುಪಿ-ಉಚ್ಚಿಲ ದಸರಾ 2026ರ ಅಂಗವಾಗಿ...

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರ ಎಲ್ಲರ ಜವಾಬ್ದಾರಿ: ಡಿ.ಕೆ. ಶಿವಕುಮಾರ್

ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಕೇವಲ...