ಆರೋಗ್ಯ ಇಲಾಖೆಯಿಂದ ಮಹತ್ವದ ಕಾರ್ಯ: ದುರ್ಗಮ ಪ್ರದೇಶಗಳಿಗೆ ಸಂಚಾರಿ ಆರೋಗ್ಯ ವಾಹನ ಸೇವೆಗೆ ಚಾಲನೆ

Date:

ದುರ್ಗಮ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಮನೆಬಾಗಿಲಲ್ಲೇ ಅರೋಗ್ಯ ಸೇವೆಗಳನ್ನು ನೀಡುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಸಂಚಾರಿ ಆರೋಗ್ಯ ಘಟಕಗಳಿಗೆ ಆರೋಗ್ಯ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಚಾಲನೆ ನೀಡಿದರು.

- Advertisement -

ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರು, ದಕ್ಷಿಣ ಕನ್ನಡ ಜಿಲ್ಲೆಯ 5 ಹಾಗೂ ಉಡುಪಿ ಜಿಲ್ಲೆಯ 4 ಸಂಚಾರಿ ಆರೋಗ್ಯ ಘಟಕ ವಾಹನಗಳಿಗೆ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಒಟ್ಟು 81 ಸಂಚಾರಿ ಅರೋಗ್ಯ ಘಟಕಗಳಿಗೆ ಚಾಲನೆ ನೀಡಲಾಗಿದೆ. ಇದು ಸರಕಾರದ ಜನಪರ ಯೋಜನೆಗಳ ಭಾಗವಾಗಿದೆ. ಸಂಪರ್ಕ ರಹಿತ ಮತ್ತು ಗುಡ್ಡ ಗಾಡು ಪ್ರದೇಶಗಳಿಗೆ ಈ ಅರೋಗ್ಯ ಸೇತು ವಾಹನಗಳು ತೆರಳಿ ಆರೋಗ್ಯ ಸೇವೆ ನೀಡಲಿದೆ ಎಂದು ಹೇಳಿದರು.

ಈ ವಾಹನದಲ್ಲಿ ಒಬ್ಬ ವೈದ್ಯರು, ಒಬ್ಬರು ನರ್ಸ್ ಮತ್ತು ಒಬ್ಬ ಲ್ಯಾಬ್ ಟೆಕ್ನೀಷಿಯನ್ ಇರಲಿದ್ದಾರೆ. ಅಗತ್ಯವಿರುವ ಔಷಧಿಗಳು, ಸಲಕರಣೆಗಳು, ತುರ್ತು ಆರೋಗ್ಯ ಪರಿಸ್ಥಿತಿಯ ನಿರ್ವಹಣೆಗೆ ಜೀವನಾವಶ್ಯಕ ಔಷಧಿಗಳೊಂಧಿಗೆ ಈ ಆರೋಗ್ಯ ಸೇತು ವಾಹನವನ್ನು ಸಜ್ಜುಗೊಳಿಸಲಾಗಿದೆ ಎಂದು ಸಚಿವ ಗುಂಡೂರಾವ್ ತಿಳಿಸಿದರು.

1293450

ಸ್ಥಳೀಯರಿಗೆ ಮುಂಗಡವಾಗಿ ತಿಳಿಸಿ ಸಂಚಾರಿ ಆರೋಗ್ಯ ಸೇವೆಗಳನ್ನು ನೀಡಲಾಗುವುದು ಎಂದು ಇದೇ ವೇಳೆ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್ ವಿ, ಜಿಲ್ಲಾ ಪಂಚಾಯತ್ ಸಿ ಇ ಓ ವಿನಾಯಕ್ ನರ್ವಡೆ, ಜಿಲ್ಲಾ ಆರೋಗ್ಯಧಿಕಾರಿ ಡಾ ತಿಮ್ಮಯ್ಯ, ವೆನ್ ಲಾಕ್ ಅಧೀಕ್ಷಕ ಡಾ ಶಿವಪ್ರಕಾಶ್, ಲೇಡಿಗೋಷನ್ ಅಧೀಕ್ಷಕ ಡಾ ದುರ್ಗಾ ಪ್ರಸಾದ್ ಮತ್ತಿತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

2028ಕ್ಕೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆ ಖಚಿತ: ಎಚ್.ಡಿ. ಕುಮಾರಸ್ವಾಮಿ

2028ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರುವುದು...

ಬೀದರ್‌ | ಪಶು ವೈದ್ಯಕೀಯ ವಿವಿ ಪ್ರಭಾರ ಕುಲಪತಿಯಾಗಿ ಎ.ಟಿ.ರಾಮಚಂದ್ರ ನಾಯ್ಕ ಅಧಿಕಾರ ಸ್ವೀಕಾರ

ಬೀದರ್‌ ಹೊರವಲಯದ ನಂದಿನಗರದಲ್ಲಿರುವ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ...