ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬೀದರ್ ನಗರದಲ್ಲಿ ಬುಧವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ನಡೆದಿದೆ.
ಮೂಲತಃ ರಾಯಚೂರು ತಾಲೂಕಿನ ತಲಮಾರಿ ಗ್ರಾಮದ ಚಂದ್ರಶೇಖರ್ (28) ಮೃತ ಪೇದೆ ಎಂದು ಗುರುತಿಸಲಾಗಿದೆ.
ಚಂದ್ರಶೇಖರ್ 2018ರ ಬ್ಯಾಚ್‌ನಲ್ಲಿ ಪೊಲೀಸ್ ಇಲಾಖೆಗೆ ನೇಮಕವಾಗಿದ್ದರು. ಕಳೆದ 5 ವರ್ಷಗಳಿಂದ ಬೀದರ್ ನಗರದ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಇದನ್ನು ಓದಿದ್ದೀರಾ? ರಾಯಚೂರು | ಕೆರೆಗಳಿಗೆ ರಾಸಾಯನಿಕ ಮಿಶ್ರಣ ಶಂಕೆ; ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ
ಗಾಂಧಿ ಜಯಂತಿಯ ಹಿನ್ನೆಲೆಯಲ್ಲಿ ಕರ್ತವ್ಯದಲ್ಲಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿರುವುದಾಗಿ ತಿಳಿದುಬಂದಿದೆ. ಕೂಡಲೇ ಅವರನ್ನು ನಗರದ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಪೇದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.