ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಕಾಲೇಜು ಸ್ಥಾಪನೆಯಾಗಿ 10 ವರ್ಷ ಪೂರೈಸಿದ ಹಿನ್ನಲೆಯಲ್ಲಿ ‘ ಅವೆನ್ಸಿಸ್ 2025 ‘ ಎಂಬ ಬೃಹತ್ ಅರೋಗ್ಯ ಪ್ರದರ್ಶನ ಮೇಳ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಶಾಸಕ ಡಾ ಮಂಥರ್ ಗೌಡ ” ಕೊಡಗು ಜಿಲ್ಲಾಸ್ಪತ್ರೆಯಲ್ಲಿ ಶೀಘ್ರವೇ ಹೃದ್ರೋಗ ಚಿಕಿತ್ಸೆ ಲಭ್ಯವಾಗಲಿದೆ. ಅತ್ಯಂತ ಸುಸರ್ಜಿತ ಆಸ್ಪತ್ರೆಯನ್ನಾಗಿ, ಮೇಲ್ದರ್ಜೆಗೆ ಏರಿಸಲು ಕೇಂದ್ರ ಸರ್ಕಾರದ ಒಪ್ಪಿಗೆ ದೊರೆತಿದೆ. ಮೆಡಿಕಲ್ ವಿಧ್ಯಾರ್ಥಿಗಳ ಕಲಿಕೆಗೆ ಆರೋಗ್ಯ ಪ್ರದರ್ಶನ ಮೇಳ ಅತ್ಯಂತ ಅಗತ್ಯ ಕಾರ್ಯಕ್ರಮ, ಸಾರ್ವಜನಿಕರು ಸಹ ಪ್ರಯೋಜನ ಪಡೆದುಕೊಳ್ಳುವಂತೆ ” ಕರೆ ಕೊಟ್ಟರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೆನ್ನಿರ ಮೈನಾ ಮಾತನಾಡಿ ಜನರ ಆರೋಗ್ಯದ ಬಗ್ಗೆ ಕಾಳಜಿ ಮೂಡಿಸುವ ನಿಟ್ಟಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮ ರೂಪಿಸಿದ ಮೆಡಿಕಲ್ ಕಾಲೇಜಿನ ಆಡಳಿತ ವರ್ಗ,ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರನ್ನು ಅಭಿನಂದಿಸಿದರು.ಮೆಡಿಕಲ್ ಕಾಲೇಜ್ ಸ್ಥಾಪನೆಯಾಗಿ ಹತ್ತು ವರ್ಷ ತುಂಬಿದ್ದರೂ ಡಾ ಮಂತರ್ ಗೌಡ ರವರು ಶಾಸಕರಾಗಿ ಆಯ್ಕೆಗೊಂಡ ನಂತರ ಆಸ್ಪತ್ರೆಯಲ್ಲಿ ಅಭಿವೃದ್ಧಿ ತಂದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕೊಡಗು ಮೆಡಿಕಲ್ ಕಾಲೇಜ್ ನಿರ್ದೇಶಕ ಡಾ ಲೋಕೇಶ್ ಮಾತನಾಡಿ ಪ್ರಥಮ ಬಾರಿಗೆ ಜಿಲ್ಲೆಯಲ್ಲಿ ವಿಶೇಷ ಕಾರ್ಯಕ್ರಮ ನೀಡಲಾಗಿದ್ದು. ಮುಂದಿನ ದಿನಗಳಲ್ಲಿ ಮತ್ತಷ್ಟು ಆರೋಗ್ಯಕ್ಕೆ ಸಂಭಂದಿಸಿದ ಉಪಯುಕ್ತ ಕಾರ್ಯಕ್ರಮ ನೀಡಲಾಗುವುದು ಎಂದರು.
ಹೆಚ್ಒಡಿ ಡಾ ಪುರುಷೋತ್ತಮ ಮಾತನಾಡಿ ಮೆಡಿಕಲ್ ಕಾಲೇಜಿನ ವಿಚಾರದಲ್ಲಿ ಶಾಸಕರಾದ ಡಾ ಮಂತರ್ ಗೌಡ ರವರು ಸಂಪೂರ್ಣ ನೆರವು ನೀಡುತ್ತಿದ್ದು ಸಂಸ್ಥೆ ಅಭಾರಿಯಾಗಿದೆ ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಕೊಡಗು | ನಾಲ್ವರ ಬರ್ಬರ ಹತ್ಯೆ; ಆರೋಪಿ ಪರಾರಿ
ಆಸ್ಪತ್ರೆಯ ಮುಖ್ಯಸ್ಥ ಡಾ ವಿಶಾಲ್, ಹೊದ್ದೂರು ಗ್ರಾಮ ಪಂಚಾಯತ್ ಅಧ್ಯಕ್ಷ ಹೆಚ್ ಎ ಹಂಸ,ಡಾ ಸೋಮಶೇಖರ್, ಡಾ ಮಂಜುನಾಥ್,ಕಾರ್ಯನಿರ್ವಾಹಕ ಅಧಿಕಾರಿ ರೋಹಿಣಿ, ಮಾಜಿ ನಗರ ಸಭಾ ಸದಸ್ಯ ಕೆ ಜಿ ಪೀಟರ್, ಪುಲಿಯಂಡ ಜಗದೀಶ್,ಪ್ರಭು ರೈ,ವಿ ಜಿ ಮೋಹನ್, ಚಂದ್ರಶೇಖರ್, ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ವಿಧ್ಯಾರ್ಥಿಗಳು ಇದ್ದರು.