ಮಳೆ ಅಬ್ಬರ | ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ 2 ದಿನ ರಜೆ ಘೋಷಣೆ

Date:

Advertisements

ದೇಶಾದ್ಯಂತ ಹಲವು ರಾಜ್ಯಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಕರ್ನಾಟಕದಲ್ಲಿಯೂ ಭಾರೀ ಮಳೆಯಾಗುತ್ತಿದ್ದು, ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟಿಸುತ್ತಿದ್ದು, ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಪರಿಚಲನೆಯಾಗುತ್ತಿರುವ ಕಾರಣ, ಪಶ್ಚಿಮ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೋರು ಮಳೆಯಾಗುತ್ತಿರುವ ಕಾರಣ ಜಿಲ್ಲೆಯ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಎರಡು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿಗಳು, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಮೇ 27 ಮತ್ತು 28ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

Advertisements

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಕಳೆದ 4 ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮಂಗಳೂರಿನ ಪಂಪ್‌ವೆಲ್ ಮೇಲುರಸ್ತೆಯಲ್ಲಿ ಕೆಳಭಾಗ ಸಂಪೂರ್ಣ ಜಲಾವೃತವಾಗಿದೆ. ಕೊಡಿಯಾಲ್ ಬೈಲ್ ಭಗವತಿ ನಗರವು ದ್ವೀಪದಂತೆ ಮಾರ್ಪಟ್ಟಿದೆ. ಜನ ಜೀವನ ಅಸ್ತವ್ಯಸ್ತಗೊಂಡಿದೆ.

ಇನ್ನು, ಮೈಸೂರು ಜಿಲ್ಲೆಯಲ್ಲಿಯೂ ನಿರಂತರವಾಗಿ ಸಣ್ಣ ಪ್ರಮಾಣದ ಮಳೆಯಾಗುತ್ತಿದ್ದು, ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಮಂಗಳವಾರ ರಜೆ ಘೋಷಿಸಿ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಆದೇಶಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ದಾವಣಗೆರೆ | ಶಾಲೆಗೆ ರಸ್ತೆ ಅಭಿವೃದ್ಧಿಪಡಿಸಲು ಆರನೇ ತರಗತಿ ವಿದ್ಯಾರ್ಥಿನಿ ಗ್ರಾ.ಪಂ. ಮುಂದೆ ಧರಣಿ

ಶಾಲೆಗೆ ಹೋಗುವ ರಸ್ತೆ ಸರಿಪಡಿಸಿ ಅಭಿವೃದ್ಧಿಪಡಿಸಲು ಒತ್ತಾಯಿಸಿ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

Download Eedina App Android / iOS

X