ಭಾರೀ ಮಳೆ ಮುನ್ಸೂಚನೆಯಂತೆ ಮಂಗಳೂರು ತಾಲ್ಲೂಕಿನಾದ್ಯಂತ ವ್ಯಾಪಕ ಮಳೆಯಾಗುತ್ತಿರಯವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ತಾಲ್ಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12 ನೇ ತರಗತಿವರೆಗೆ) ಜು.19ರ ಶನಿವಾರ ರಜೆ ಘೋಷಿಸಿ ಮಂಗಳೂರು ತಹಶೀಲ್ದಾರ್ ಆದೇಶಿಸಿದ್ದಾರೆ.
ಮಂಗಳೂರು ತಾಲ್ಲೂಕು ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಳ್ಳಾಲ ನೇತ್ರಾವತಿ ಸೇತುವೆಯಿಂದ ಸುರತ್ಕಲ್ ಮುಕ್ಕ ನಂದಿನಿ ನದಿ ಸೇತುವೆಯವರೆಗೆ ಹಾಗೂ ಪೂರ್ವದಲ್ಲಿ ವಳಚ್ಚಿಲ್, ಅಡ್ಡೂರು ಸೇತುವೆ, ಎಡಪದವು, ಬಜಪೆ ಎಕ್ಕಾರು ವರೆಗೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಮಂಗಳೂರು | ಸಾಲದ ಆಮಿಷವೊಡ್ಡಿ 200 ಕೋಟಿ ರೂ. ವಂಚನೆ ಆರೋಪ: ರೋಹನ್ ಸಲ್ಡಾನಾ ಬಂಧನ
ಜಿಲ್ಲೆಯ ಬಂಟ್ವಾಳ ತಾಲ್ಲೂಕಿನಾದ್ಯಂತ ಮಳೆಯ ಆರ್ಭಟ ಹೆಚ್ಚಾಗಿದ್ದು,ಇದರಿಂದ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.19ರ ಶನಿವಾರ ರಜೆ ಘೋಷಿಸಿ ಬಂಟ್ವಾಳ ತಹಶೀಲ್ದಾರ್ ಆದೇಶಿಸಿದ್ದಾರೆ.
ಉಳ್ಳಾಲ ತಾಲ್ಲೂಕಿನಾದ್ಯಂತ ವ್ಯಾಪಕ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.19ರ ಶನಿವಾರ ರಜೆ ಘೋಷಿಸಿ ಉಳ್ಳಾಲ ತಹಶೀಲ್ದಾರ್ ಆದೇಶಿಸಿದ್ದಾರೆ.
