ಬೆಂಗಳೂರಿನಲ್ಲಿ ಧಾರಕಾರ ಮಳೆ | ಸುರಂಗ ಮಾರ್ಗದಡಿ ಸಿಲುಕಿದ್ದ ಮಹಿಳೆ ದುರ್ಮರಣ

Date:

ಸೋಮವಾರ ದಿಢೀರನೆ ಸುರಿದ ಆಲಿಕಲ್ಲು ಮಳೆಯಿಂದಾಗಿ ಕೆ ಆರ್ ವೃತ್ತದ ಸುರಂಗ ಮಾರ್ಗದಲ್ಲಿ ಸಿಲುಕಿದ್ದ ಯುವತಿಯೊಬ್ಬರು ಮೃತಪಟ್ಟಿದ್ದಾರೆ.

ಮೃತ ಭಾನುರೇಖಾ ಸೇರಿದಂತೆ ಆರು ಮಂದಿ ಕೆ ಆರ್ ವೃತ್ತದ ಬಳಿಯ ಅಂಡರ್‍‌ ಪಾಸ್‌ನಲ್ಲಿ ಕಾರಿನಲ್ಲಿ ಸಿಲುಕಿದ್ದರು. ಇವರನ್ನು ಸ್ಥಳೀಯರು ಹಾಗೂ ಪೊಲೀಸರು ರಕ್ಷಿಸಿದ್ದರು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಭಾನುರೇಖಾ ಜೀವನ್ಮರಣ ಹೋರಾಟ ನಡೆಸಿ, ಕೊನೆಯುಸಿರೆಳೆದಿದ್ದಾರೆ.

ವಿಜಯವಾಡದಿಂದ ಬೆಂಗಳೂರಿಗೆ ಈ ಕುಟುಂಬ ಕಾರಿನಲ್ಲಿ ಬಂದಿತ್ತು. ದಟ್ಟವಾಗಿ ಮೋಡ ಕವಿದು ಕಗ್ಗತ್ತಲು ಇದ್ದ ಕಾರಣ ಸುರಂಗ ಮಾರ್ಗದಲ್ಲಿ ನೀರಿನಮಟ್ಟ ಚಾಲಕನ ಅರಿವಿಗೆ ಬಂದಿರಲಿಲ್ಲ. ಕಾರು ಸುರಂಗ ಮಾರ್ಗದಲ್ಲಿ ದಾಟಬಹುದೆಂದು ಮುಂದಕ್ಕೆ ಸಾಗಿದ್ದರು. ಆಟೊ ಚಾಲಕರೊಬ್ಬರು ಕಾರು ಸುರಂಗ ಮಾರ್ಗದ ಮಧ್ಯದಲ್ಲಿ ಸಿಲುಕಿರುವುದನ್ನು ಗಮನಿಸಿ ಸ್ಥಳೀಯರಿಗೆ ಮಾಹಿತಿ ನೀಡಿದ್ದರು.

ಕಾರಿನಲ್ಲಿ ಸಿಲುಕಿಕೊಂಡವರನ್ನು ಸೀರೆ ಮತ್ತು ಏಣಿ ಸಹಾಯದಿಂದ ರಕ್ಷಣೆ ಮಾಡಲಾಗಿದೆ. ಅದಾದ ನಂತರ ಅಸ್ವಸ್ಥಗೊಂಡಿದ್ದ ಭಾನು ರೇಖಾರನ್ನು ಸೇಂಟ್ ಮಾರ್ಥಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಆಸ್ಪತ್ರೆಯ ಸಿಬ್ಬಂದಿ ಅರ್ಧಗಂಟೆ ಆದರೂ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಿಳೆ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

ಮೃತ ಯುವತಿಗೆ 5ಲಕ್ಷ ಪರಿಹಾರ ಘೋಷಣೆ

ಘಟನೆಯ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಇಂತಹ ದುರ್ಘಟನೆ ನಡೆಯಬಾರದಿತ್ತು. ಮೃತ ಯುವತಿ ಕುಟುಂಬಕ್ಕೆ ಐದು ಲಕ್ಷ ಪರಿಹಾರ ನೀಡುತ್ತೇವೆ. ಹಾಗೆಯೇ ಕುಟುಂಬಸ್ಥರಿಗೆ ಚಿಕಿತ್ಸೆ ಅವಶ್ಯಕತೆ ಇದ್ದರೆ, ಅದರ ವೆಚ್ಚ ಸರ್ಕಾರವೇ ಭರಿಸಲಿದೆ” ಎಂದರು.

ಮುಂದುವರೆದು, ಮಾತನಾಡಿದ ಅವರು, ಭಾನುರೇಖಾ ಬೆಂಗಳೂರಿನ ಇನ್ಫೋಸಿಸ್ ಉದ್ಯಮಿಯಾಗಿದ್ದರು. ಬೇಸಿಗೆ ರಜೆಯಿದ್ದ ಕಾರಣ ವಿಜಯವಾಡದಿಂದ ಅವರ ಕುಟುಂಬಸ್ಥರು ನಗರ ಸಂಚಾರಕ್ಕೆ ಬಂದಿದ್ದರು. ಈ ವೇಳೆ ಈ ಪ್ರಕರಣ ನಡೆದಿದೆ.

ಈ ಸುದ್ದಿ ಓದಿದ್ದೀರಾ?: ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ; ಸೋಮವಾರವೂ ಮಳೆಯಾಗುವ ಸಾಧ್ಯತೆ

ಮಳೆ ಬಂದ ವೇಳೆ ಅಂಡರ್‍‌ಪಾಸ್‌ನಲ್ಲಿ ಯಾರು ಪ್ರಯಾಣಿಸದಂತೆ ಬ್ಯಾರಿಕೇಡ್ ಹಾಕಿದ್ದರು. ಆದರೂ, ವಾಹನ ಚಾಲಕ ಸುರಂಗ ಮಾರ್ಗದಲ್ಲಿ ಕಾರು ಚಲಾಯಿಸಿದ ಕಾರಣ ಕಾರು ನೀರಿನಲ್ಲಿ ಮುಳುಗುವಂತಾಯಿತು. ಘಟನಾ ಸ್ಥಳದಲ್ಲೇ ಭಾನುರೇಖಾ ಹೆಚ್ಚಿನ ಕೊಳಚೆ ನೀರನ್ನು ಕುಡಿದು, ಅಸ್ವಸ್ಥರಾಗಿದ್ದರು. ಆಸ್ಪತ್ರೆಗೆ ಬರುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ ಎಂದರು.

ಒಂದು ವೇಳೆ ಆಸ್ಪತ್ರೆಯ ಸಿಬ್ಬಂದಿ ಚಿಕಿತ್ಸೆ ನೀಡುವಲ್ಲಿ ವಿಳಂಬ ಮಾಡಿದ್ದರೆ, ಆ ಬಗ್ಗೆ ವಿಚಾರಣೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ಉಳಿದಂತೆ ಮಳೆ ಸಮಸ್ಯೆ ಪರಿಹಾರಕ್ಕೆ ರಾಜಕಾಲುವೆ ತೆರವು, ಚರಂಡಿಗಳ ಹೂಳು ತೆಗೆಯುವಿಕೆ ವಿಚಾರವಾಗಿ, ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದುವರೆಯುವುದಾಗಿ” ಹೇಳಿದರು.

ಉಳಿದಂತೆ, ಮಳೆಯ ಬಗ್ಗೆ ಮಾಹಿತಿ ಪಡೆದಿರುವ ಸಿಎಂ ಸಿದ್ದರಾಮಯ್ಯ , ಪರಿಸ್ಥಿತಿ ನಿಭಾಯಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಸಚಿವರು | ಆರ್‌ ಬಿ ತಿಮ್ಮಾಪೂರ್‌ ಮಂತ್ರಿಯಾದರೂ ಮುಧೋಳ ಕ್ಷೇತ್ರದ ಜನರಿಗೆ ನೀಗದ ಬವಣೆ  

ಬಾಗಲಕೋಟೆ ಜಿಲ್ಲೆಯ ಏಕೈಕ ಎಸ್ಸಿ ಮೀಸಲು ಕ್ಷೇತ್ರದಲ್ಲಿ ಮಾಜಿ ಉಪ ಮುಖ್ಯಮಂತ್ರಿ,...

ಮಂಡ್ಯ | ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ : ಸಚಿವ ಎನ್ ಚೆಲುವರಾಯಸ್ವಾಮಿ

ಮಂಡ್ಯ ಜಿಲ್ಲೆಯಲ್ಲಿ ಹಲವು ಸಮಸ್ಯೆಗಳಿದ್ದು, ಅವುಗಳನ್ನು ಹಂತ ಹಂತವಾಗಿ ಪರಿಹರಿಸಿ, ಜಿಲ್ಲೆಯ...

ರಾಮನಗರ | ಕಾಡಾನೆ ದಾಳಿಗೆ ಸಾವು; ಕುಟುಂಬಕ್ಕೆ ಸಚಿವರಿಂದ ಪರಿಹಾರದ ಚೆಕ್‌ ವಿತರಣೆ

ರಾಮನಗರ ಜಿಲ್ಲೆ ಕನಕಪುರ ಬಳಿಯ ಮುತ್ತುರಾಯನ ದೊಡ್ಡಿ ಗ್ರಾಮಕ್ಕೆ ಅರಣ್ಯ ಜೀವಿಶಾಸ್ತ್ರ...

ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿರುವ 1500 ಪ್ರಯಾಣಿಕರಿಗೆ ಅಗತ್ಯ ನೆರವು

1500 ಕಾರ್ಮಿಕರಿಗೆ ಬಿಬಿಎಂಪಿ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳಿಂದ ನೆರವು ಕಾರ್ಮಿಕರ ನೆರವಿಗೆ...