ಮಧ್ಯಾಹ್ನದ ನಂತರ ಬೆಂಗಳೂರಿನಲ್ಲಿ ಭಾರೀ ಮಳೆ; ನಿಧಾನಗತಿ ಸಂಚಾರ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಮಧ್ಯಾಹ್ನ ಭಾರೀ ಮಳೆಯಾಗಿದ್ದು, ನಗರದಲ್ಲಿ ತಂಪು ವಾತಾವರಣವಿದೆ. ಇನ್ನು ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಹಿಂಗಾರು ಮಳೆ ಚುರುಕುಗೊಂಡಿದೆ. ಹಾಗಾಗಿ, ಬೆಂಗಳೂರಿನಲ್ಲಿ ಮಧ್ಯಾಹ್ನವೇ ಭಾರೀ ಮಳೆಯಾಗುತ್ತಿದೆ. ಬುಧವಾರ ರಾತ್ರಿ ನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಲಾಲ್‌ಬಾಗ್, ಜಯನಗರ, ಕೋರಮಂಗಲ, ಜೆಪಿ ನಗರ, ಎಚ್‌ಎಸ್‌ಆರ್, ಬನಶಂಕರಿ, ಮಲ್ಲೇಶ್ವರ, ಮೈಸೂರು ರಸ್ತೆ, ಕಬ್ಬನ್ ಪಾರ್ಕ್, ಎಂಜಿ ರಸ್ತೆ, ಶಿವಾಜಿನಗರ, ಬಿಟಿಎಂ, ವಿಜಯನಗರ, ಗೋವಿಂದರಾಜನಗರ, ಮಲ್ಲೇಶ್ವರಂ, ರೇಸ್ ಕೋರ್ಸ್, ಮಂತ್ರಿಮಾಲ್, ಶಿವಾನಂದ ಸರ್ಕಲ್, ಕೆ.ಆರ್.ಸರ್ಕಲ್, ಹಡ್ಸನ್ ಸರ್ಕಲ್, ಕಾರ್ಪೊರೇಷನ್, ಲಾಲ್‍ಬಾಗ್, ಚಾಮರಾಜಪೇಟೆ ಸೇರಿದಂತೆ ನಗರದ ಹಲವೆಡೆ ಜೋರು ಮಳೆ ಸುರಿದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಏಕಾಏಕಿ ಮಳೆ ಆರಂಭವಾದ ಕಾರಣ ವಾಹನ ಸವಾರರು ದಾರಿಹೋಕರು ಮೆಟ್ರೋ, ಬಸ್‌ ನಿಲ್ಧಾಣ, ಅಂಗಡಿ-ಮುಂಗಟ್ಟು ಹಾಗೂ ಅಂಡರ್‌ಪಾಸ್‌ಗಳಲ್ಲಿ ಆಶ್ರಯ ಪಡೆದರು. ಜೋರು ಮಳೆಯ ಕಾರಣ ನಗರದ ಬಹುತೇಕ ರಸ್ತೆಗಳು ಜಲಾವೃತವಾಗಿವೆ. ಸಂಚಾರ ದಟ್ಟಣೆ ಉಂಟಾಗಿದೆ.

ನಗರದ ‘ಪಣತ್ತೂರು ರೈಲ್ವೇ ಅಂಡರ್‌ಪಾಸ್’ನಲ್ಲಿ ರಸ್ತೆ ಹದಗೆಟ್ಟಿದೆ. ಜತೆಗೆ ಭಾರೀ ಮಳೆ ಸುರಿಯುತ್ತಿರುವುದರಿಂದ ನೀರು ನಿಂತಿದ್ದು, ನಿಧಾನಗತಿಯ ಸಂಚಾರವಿದೆ. ವರ್ತೂರಿನಲ್ಲಿಯೂ ನಿಧಾನಗತಿಯ ಸಂಚಾರವಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 1 ಕೆ.ಜಿ 262 ಗ್ರಾಂ ಚಿನ್ನದ ಆಭರಣ ಕದ್ದಿದ್ದ ಸೇಲ್ಸ್‌ ಮ್ಯಾನ್; ಬಂಧನ

“ರಿಂಗ್ ರಸ್ತೆಯ ಕಸ್ತೂರಿ ನಗರ ಬ್ರಿಡ್ಜ್ ಬಳಿ ಇರುವ ಗ್ರ್ಯಾಂಡ್ ಸೀಸನ್ ಹೋಟೆಲ್ ಮುಂಭಾಗ(ಹೆಬ್ಬಾಳ ಹೋಗುವ ಕಡೆಗೆ) ವಾಟರ್ ಲಾಗಿಂಗ್ ಆಗಿದೆ. ಚನಸಂದ್ರ ಮತ್ತು ಹುಣಸೆಮರದ ರಸ್ತೆಯಲ್ಲಿ ಮಳೆ ನೀರು ನಿಂತಿರುವ ಕಾರಣ ಜೆಸಿಬಿ ಸಹಾಯದ ಮೂಲಕ ನೀರನ್ನು ತೆರುವುಗೊಳಿಸಲಾಗುತ್ತಿದೆ. ರೈನ್‌ಬೋ ಆಸ್ಪತ್ರೆ ಬಳಿಯ ಸೇಲಂ ಸೇತುವೆಯಲ್ಲಿ ನೀರು ನಿಂತಿದ್ದರಿಂದ ನಿಧಾನಗತಿಯ ಸಂಚಾರವಿದೆ” ಎಂದು ಹೇಳಿದೆ.

 

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಚಾಮರಾಜನಗರ, ಕೊಡಗು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಿಗೆ ಬುಧವಾರ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಪೆನ್‌ಡ್ರೈವ್‌ | ಬ್ಲಾಕ್‌ಮೇಲ್‌ಗಾಗಿ ವಿಡಿಯೋ ಮಾಡಿಕೊಂಡಿದ್ರಾ?; ನ್ಯಾಯಾಂಗ ತನಿಖೆಗೆ ಆಗ್ರಹ

ಹಾಸನ ಪೆನ್‌ಡ್ರೈವ್ ವಿಚಾರದಲ್ಲಿ ಸುಮೊಟೊ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಂಗ ತನಿಖೆ ನಡೆಸಬೇಕು....

ಶಿವಮೊಗ್ಗ | ಮುಂದಿನ ದಿನದಲ್ಲಿ ಕ್ಷೇತ್ರದ ರಕ್ಷಣೆ ನನ್ನದು: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ರಾಜಕಾರಣಿಗಳ ಬಳಿ ಅಧಿಕಾರವಿದ್ದು, ಪರಿಹರಿಸಬಹುದಾದ ಸಮಸ್ಯೆಗಳು ಸಾಕಷ್ಟಿವೆ. ಆದರೂ,...

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...

ಚಾಮರಾಜನಗರ | ದೇಶದ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಣೆಗೆ ಕಾಂಗ್ರೆಸ್‌ ಬೆಂಬಲಿಸಿ: ಮಾನವ ಬಂಧುತ್ವ ವೇದಿಕೆ

ದೇಶದ ಪ್ರಜಾಪ್ರಭುತ್ವ, ಸಂವಿಧಾನದ ರಕ್ಷಣೆಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಜನರು...