ಬೀದರ್ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಮಂಗಳವಾರ ಸಂಜೆ ಗುಡುಗು ಸಹಿತ ಬಿರುಸಿನ ಮಳೆಯಾಗಿದೆ.
ಸೋಮವಾರ ರಾತ್ರಿ ಜಿಲ್ಲೆಯ ಕೆಲವೆಡೆ ಮಳೆಯಾಗಿದೆ. ಮಂಗಳವಾರ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು. ಬಳಿಕ ಸಂಜೆವರೆಗೆ ಪ್ರಖರವಾದ ಬಿಸಿಲು ಇತ್ತು. ಸಂಜೆ 6 ಗಂಟೆ ಸುಮಾರಿಗೆ ದಟ್ಟ ಕಾರ್ಮೋಡ ಕವಿದು ಗುಡುಗು ಸಹಿತ ಬಿರುಸಿನ ಮಳೆಯಾಗಿದೆ.
ಜೋರು ಮಳೆಗೆ ನಗರದ ವಿವಿಧೆಡೆ ರಸ್ತೆ ಮೇಲೆ ಅಪಾರ ಪ್ರಮಾಣದಲ್ಲಿ ನೀರು ಸಂಗ್ರಹವಾದ ಕಾರಣ ವಾಹನ ಸಂಚಾರಕ್ಕೆ ತೊಡಕಾಯಿತು. ಜನಜೀವನ ಅಸ್ತವ್ಯಸ್ತಗೊಂಡಿತ್ತು.
ಅರ್ಧಗಂಟೆಗೂ ಹೆಚ್ಚು ಸಮಯ ಸುರಿದ ಜೋರು ಮಳೆಗೆ ವಾತಾವರಣ ಸಂಪೂರ್ಣ ತಂಪಾಗಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನ ನೆಮ್ಮದಿಯ ನಿಟ್ಟುಸಿರು ಬಿಟ್ಟರು.
ಇದನ್ನೂ ಓದಿ : ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯೂ, ಸಂಘಿಗಳ ಎನ್ಐಎ ತನಿಖೆ ನಾಟಕವೂ!