ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುಂಜಾಗ್ರತೆ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ವರುಣನ ಆರ್ಭಟ: ಐದು ತಾಲೂಕಿನ ಶಿಶುಪಾಲನ ಕೇಂದ್ರ, ಅಂಗನವಾಡಿಗೆ ರಜೆ ಘೋಷಣೆ
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಿನ ವ್ಯಾಪ್ತಿಗಳಾದ ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ತಾಲ್ಲೂಕು ಹಾಗೂ ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು, ವಸ್ತಾರೆ ಹೋಬಳಿಗಳಿಗೆ ರಜೆ ಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.