ರಾಜ್ಯದ ಹಲವೆಡೆ ಭಾರೀ ಮಳೆ: ಬೆಳೆಹಾನಿಯಿಂದ ಕಂಗಾಲಾದ ರೈತರು

Date:

ರಾಜ್ಯದ ಹಲವೆಡೆ ಭಾನುವಾರ ರಾತ್ರಿಯಿಂದಲೂ ಭಾರೀ ಮಳೆ ಸುರಿಯುತ್ತಿದ್ದು, ಬೆಳೆಹಾನಿಯಾಗಿದೆ. ಫಸಲಿನ ನಿರೀಕ್ಷೆಯಲ್ಲಿದ್ದ ರೈತರು ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿರುವುದರಿಂದ ಕಂಗಾಲಾಗಿದ್ದಾರೆ.

- Advertisement -

ಕಳೆದ ಕೆಲ ದಿನಗಳಿಂದ ತುಮಕೂರು ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಕೃಷಿ ಕೆಲಸಗಳು ಬಿರುಸು ಪಡೆದಿದ್ದು, ಪೂರ್ವ ಮುಂಗಾರಿನಲ್ಲಿ ಹೆಸರು, ಅಲಸಂದೆ ಸೇರಿದಂತೆ ಇತರೆ ಬೆಳೆಗಳ ಬಿತ್ತನೆ ಕಾರ್ಯ ಚುರುಕು ಪಡೆದಿತ್ತು. ಭಾನುವಾರ ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದ ಭೂಮಿಯೆಲ್ಲಾ ಕೆಸರುಮಯವಾದಂತಾಗಿದ್ದು, ಬಿತ್ತನೆ ಕಾರ್ಯಕ್ಕೆ ತೊಡಕುಂಟಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನಲ್ಲಿ ತೋಟಗಳಿಗೆ ಮಳೆ ನೀರು ನುಗ್ಗಿದೆ. ಪರಿಣಾಮ ಫಸಲಿಗೆ ಬಂದ ಹೂವು, ತರಕಾರಿ ಸೇರಿ ಇತರೆ ಬೆಳೆಗಳಿಗೆ ಹಾನಿಯಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನಲ್ಲಿ ಒಂದು ಕುರಿ, ಬಾಗೇಪಲ್ಲಿ ತಾಲೂಕಿನಲ್ಲಿ 10 ಕುರಿಗಳು ಮೃತಪಟ್ಟಿವೆ. ಚಿಂತಾಮಣಿ ತಾಲೂಕಿನಲ್ಲಿ 8.5 ಎಕರೆ ಮಾವಿನ ತೋಟ ಹಾಗೂ ಅರ್ಧ ಎಕರೆ ಚಂಡು ಹೂವು ತೋಟ ಹಾನಿಯಾಗಿದೆ.

ಕೊಪ್ಪಳ ಸೇರಿದಂತೆ ಜಿಲ್ಲೆಯ ಕುಷ್ಟಗಿ, ಕನಕಗಿರಿ, ಕುಕನೂರು ತಾಲೂಕು ವ್ಯಾಪ್ತಿಯಲ್ಲಿ ಮಳೆಯಾಗಿದೆ. ಭಾನುವಾರ ತಡರಾತ್ರಿಯಿಂದ ಸುರಿದ ಭಾರೀ ಮಳೆಗೆ ಗಂಗಾವತಿ ತಾಲೂಕು ವ್ಯಾಪ್ತಿಯಲ್ಲಿ ನಾಟಿಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ಭತ್ತದ ಸಸಿಗಳಿಗೆ ಹಾನಿಯಾಗಿವೆ. ಎರಡು ತಿಂಗಳಲ್ಲಿ ಭತ್ತದ ನಾಟಿ ಮಾಡಲಿದ್ದು, ಅದಕ್ಕೆ ಸಸಿಗಳನ್ನು ಬೆಳೆಸಿಕೊಳ್ಳುವ ಕಾರ್ಯ ನಡೆದಿತ್ತು.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ಹೊನ್ನಾವರದಲ್ಲಿ ಬಿರುಸಿನ ಮಳೆ ಮತ್ತು ಕುಮಟಾ, ಶಿರಸಿಯಲ್ಲಿ ತುಂತುರು ಮಳೆಯಾಗಿದೆ. ‘ಮೇ 23ರವರೆಗೆ ಕರಾವಳಿ ಭಾಗದಲ್ಲಿ ಪ್ರತಿ ಗಂಟೆಗೆ 35 ರಿಂದ 45 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಈ ವೇಳೆ ಮೀನುಗಾರಿಕೆ ನಡೆಸಬಾರದು’ ಎಂದು ಕೇಂದ್ರ ಹವಾಮಾನ ಇಲಾಖೆ ಮೀನುಗಾರರಿಗೆ ಸೂಚಿಸಿದೆ.

ಬಳ್ಳಾರಿ ಜಿಲ್ಲೆಯ ಸಿರುಗುಪ್ಪದ ಜೋಳ ಖರೀದಿ ಕೇಂದ್ರದಲ್ಲಿ ರೈತರಿಂದ ಖರೀದಿಸಿದ್ದ ಜೋಳ ಮಳೆಯಲ್ಲಿ ನೆನೆದು ಚೀಲದಲ್ಲೇ ಮೊಳಕೆಯೊಡೆದಿದೆ. ನಾಲ್ಕೈದು ದಿನ ನಿರಂತರವಾಗಿ ಸುರಿದ ಮಳೆಯಿಂದ ಸುಮಾರು 250ಕ್ಕೂ ಹೆಚ್ಚು ಚೀಲದಲ್ಲಿನ ಜೋಳ ಮೊಳಕೆಯೊಡೆದಿದೆ. ಕನಿಷ್ಠ 12 ಟನ್‌ ಜೋಳ ಹಾನಿಯಾದ ಸಾಧ್ಯತೆಯಿದೆ.

ಚೀಲದಲ್ಲಿಯೇ ಮೊಳಕೆಯೊಡೆದ ಜೋಳ
ಚೀಲದಲ್ಲಿಯೇ ಮೊಳಕೆಯೊಡೆದ ಜೋಳ

ರಾಯಚೂರು ಜಿಲ್ಲೆಯ ಸಿರವಾರದಲ್ಲಿ ಸುಮಾರು ಎರಡು ಗಂಟೆ ಕಾಲ ಭಾರೀ ಮಳೆಯಾಗಿದೆ. ಲಿಂಗಸುಗೂರು ತಾಲೂಕಿನ ಜಾಂತಾಪೂರ ಗ್ರಾಮದಲ್ಲಿ ಭಾನುವಾರ ರಾತ್ರಿ ಸಿಡಿಲು ಬಡಿದು ಎತ್ತು ಮೃತಪಟ್ಟಿದೆ. ತಾಲೂಕಿನ ಹಲವಡೆ ಮಂಗಳವಾರ ಸಂಜೆ ಸುರಿದ ಅಕಾಲಿಕ ಮಳೆಯಿಂದ ಭತ್ತದ ರಾಶಿಗೆ ನೀರು ನುಗ್ಗಿ ಲಕ್ಷಾಂತರ ರೂಪಾಯಿಯ ಬೆಳೆ ಹಾನಿಯಾಗಿದೆ.

ಸಿಂಧನೂರು ತಾಲೂಕಿನ ಸುಲ್ತಾನಪುರ ಗ್ರಾಮದ ಹೊರವಲಯದಲ್ಲಿ ಕಟಾವಾಗಿರುವ ಸುಮಾರು 700ಕ್ಕೂ ಹೆಚ್ಚು ಕ್ವಿಂಟಾಲ್‌ ಭತ್ತದ ರಾಶಿಗೆ ನೀರು ನುಗ್ಗಿದ್ದು, ಸಂಪೂರ್ಣ ಹಾಳಾಗಿದೆ. ಸುಮಾರು 10 ಲಕ್ಷ ರೂ. ಮೌಲ್ಯದ ಹಾನಿ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ.‌

ರಾಜ್ಯ ರೈತ ಸಂಘದ ಮುಖಂಡ ಚಾಮರಸ ಮಾಲಿ ಪಾಟೀಲ್‌ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಈ ಮೊದಲು ಕಟಾವಾಗಿರುವ ಭತ್ತವನ್ನು ರೈತರು ಕಡಿಮೆ ಬೆಲೆಗೆ ಮಾರಾಟ ಮಾಡಿಕೊಂಡಿದ್ದಾರೆ. ಮೊದಲು ಸುರಿದ ಮಳೆಯಿಂದ ಕಟಾವಾಗಬೇಕಿದ್ದ ಬೆಳೆಯೇ ನೀರು ಪಾಲಾಯಿತು. ಇದರಿಂದ ಸುಮಾರು 10 ಲಕ್ಷ ರೂಪಾಯಿವರೆಗೂ ಅಪಾರ ಹಾನಿಯಾಗಿದೆ” ಎಂದು ಹೇಳಿದರು.

ಇದೀಗ ಕಟಾವು ಮಾಡಿರುವ ಭತ್ತಕ್ಕೆ ಬೆಂಬಲ ಬೆಲೆ ಇಲ್ಲದ ಕಾರಣ ರೈತರು ತಮ್ಮ ಜಮೀನು ಅಥವಾ ಬಯಲು ಪ್ರದೇಶಗಳಲ್ಲಿ ರಾಶಿ ಹಾಕಿಕೊಂಡಿದ್ದರು. ಭಾರೀ ಮಳೆ ಸುರಿಯುತ್ತಿರುವುದರಿಂದ ಭತ್ತದ ರಾಶಿಗೆ ನೀರು ನುಗ್ಗಿ ಸಂಪೂರ್ಣ ಹಾಳಾಗಿದೆ. ರಾಶಿ ಮಾಡಿದ್ದ ಭತ್ತ ಮಳೆಯಿಂದಾಗಿ ಕಣದ ಸುತ್ತಮುತ್ತ ಹೆಚ್ಚಿನ ಪ್ರಮಾಣದ ನೀರು ಸಂಗ್ರಹವಾದ ಕಾರಣ ಭತ್ತ ರಕ್ಷಿಸಲು ಸಾಧ್ಯವಾಗಿಲ್ಲ. ಇದರಿಂದ ಸುಮಾರು 10 ಲಕ್ಷ ರೂಪಾಯಿವರೆಗೂ ಅಪಾರ ಹಾನಿಯಾಗಿರುವುದು ಕಂಡುಬಂದಿದೆ.

ಇದನ್ನೂ ಓದಿದ್ದೀರಾ? ಚನ್ನರಾಯಪಟ್ಟಣ | 15ನೇ ಹಣಕಾಸು ಅನುದಾನ ಬಿಡುಗಡೆ; ಆನೆಕೆರೆ ಗ್ರಾ.ಪಂ. ಪಿಡಿಒ ಶೇ.10ರಷ್ಟು ಲಂಚಕ್ಕೆ ಬೇಡಿಕೆ

ರೈತರಿಗೆ ಕೆಲ ಕಡೆ ಸೂಕ್ತ ದಾಸ್ತಾನು ಸಂಗ್ರಹ ಗೋದಾಮು ಇಲ್ಲದ ಕಾರಣ ತಮ್ಮ ಹೊಲ ಅಥವಾ ಬಯಲು ಪ್ರದೇಶದಲ್ಲಿ ಭತ್ತದ ರಾಶಿ ಹಾಕಿದ್ದರು. ಭತ್ತವನ್ನು ರಾಶಿ ಹಾಕಿದ್ದ ಕಣದ ಸುತ್ತಮುತ್ತ ಹೆಚ್ಚಿನ ಪ್ರಮಾಣದ ನೀರು ಸಂಗ್ರಹವಾದ ಕಾರಣ ಭತ್ತವನ್ನು ರಕ್ಷಿಸಿಕೊಳ್ಳಲು ಸಾಧ್ಯವಾಗಿಲ್ಲ. ಅಕಾಲಿಕ ಮಳೆ ಸುರಿದಿರುವ ಕಾರಣ ಕ್ಷಣಾರ್ಧದಲ್ಲಿ ಭತ್ತದ ರಾಶಿ ನಾಶವಾಗಿದ್ದು, ವರ್ಷದ ಕೂಳಿಗೆ ಕುತ್ತು ಬಂದಿದೆ.

ರೈತರು ರಾತ್ರಿ, ಹಗಲೆನ್ನದೆ ಬೇಸಿಗೆಯ ದಿನಗಳಲ್ಲಿಯೂ ಭತ್ತದ ಗದ್ದೆಗಳಿಗೆ ನೀರು ಕಟ್ಟಿಕೊಂಡು ಬೆಳೆ ಬೆಳೆದಿರುತ್ತಾರೆ. ಬೆಳೆ ಕೈಗೆ ಸಿಗುವಷ್ಟರಲ್ಲಿ ಅಕಾಲಿಕ ಮಳೆ ಸುರಿದು ಒಂದೆಡೆ ಹಾಳಾಗುತ್ತಿದ್ದರೆ, ದಾಸ್ತಾನು ಸಂಗ್ರಹ ಗೋದಾಮು ಇಲ್ಲದ ಕಾರಣ ಇಡೀ ಬೆಳೆ ಹಾನಿಯಾಗುತ್ತಿದ್ದು, ರೈತರು ಕಂಗಾಲಾಗುವಂತಾಗಿದೆ.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...