ಏಪ್ರಿಲ್ 10ರವರೆಗೆ ರಾಜ್ಯದಲ್ಲಿ ಜೋರು ಮಳೆ ಸಾಧ್ಯತೆ : ಹವಾಮಾನ ಇಲಾಖೆ

Date:

  • ರಾಜ್ಯದಲ್ಲಿ ಏಪ್ರಿಲ್ 8ರಂದು ಗುಡುಗು ಸಹಿತ ಅಧಿಕ ಮಳೆ : ಹವಾಮಾನ ಇಲಾಖೆ
  • ರಾಯಚೂರು ಮತ್ತು ಕಲಬುರಗಿಯಲ್ಲಿ 39.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು

ಕಳೆದ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ಇದು ಏಪ್ರಿಲ್ 10 ವರೆಗೂ ಮುಂದುವರೆಯುವ ಸಾಧ್ಯತೆಯಿದೆ ಹಾಗೂ ಇದೇ ಸಮಯದಲ್ಲಿ ಒಂದು ಅಧಿಕ ಮಳೆ ಸುರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬುಧವಾರದಿಂದ ಮುಂದಿನ ಐದು ದಿನ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ನಾನಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಜೋರು ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಏ.8ರವೆಗೆ ಧಾರಾಕಾರ ಮಳೆಯಾಗಲಿದೆ.

ಏ. 8ರಂದು ಅಧಿಕ ಮಳೆ ಸಾಧ್ಯತೆ

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ, ಉತ್ತರ ಒಳನಾಡಿನ ಜಿಲ್ಲೆಗಳಾದ ವಿಜಯಪುರ, ಕಲಬುರಗಿ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಧಾರವಾಡ, ಬೀದರ್ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಕೋಲಾರ, ಮೈಸೂರು, ರಾಮನಗರ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಏಪ್ರಿಲ್ 8ರಂದು ಗುಡುಗು ಸಹಿತ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬುಧವಾರದವರೆಗೂ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 5 ಮಿ.ಮೀ, ಎಚ್‌ಎಎಲ್‌ನಲ್ಲಿ 4 ಮಿ.ಮೀ ಮಳೆ ದಾಖಲಾಗಿದೆ.

ಕರ್ನಾಟಕದಲ್ಲಿ ರಾಯಚೂರು ಮತ್ತು ಕಲಬುರಗಿಯಲ್ಲಿ 39.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಬಾಗಲಕೋಟೆ 36 ಡಿಗ್ರಿ ಸೆಲ್ಸಿಯಸ್, ಬಳ್ಳಾರಿ 37 ಡಿಗ್ರಿ ಸೆಲ್ಸಿಯಸ್, ಗದಗ 37 ಡಿಗ್ರಿ ಸೆಲ್ಸಿಯಸ್, ವಿಜಯಪುರ 37 ಡಿಗ್ರಿ ಸೆಲ್ಸಿಯಸ್ ಹಾಗೂ ಕೊಪ್ಪಳ್ಳದಲ್ಲಿ 36 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ರಾಜ್ಯದ ಕನಿಷ್ಠ ಉಷ್ಣಾಂಶ ಚಿಕ್ಕಮಗಳೂರಲ್ಲಿ 12.8 ಡಿಗ್ರಿ ಸೆಲ್ಸಿಯಸ್ ಕಂಡು ಬಂದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಆರ್‌.ವಿ ರಸ್ತೆ-ಬೊಮ್ಮಸಂದ್ರಕ್ಕೆ ಶೀಘ್ರದಲ್ಲೇ ಹಳದಿ ಮಾರ್ಗ ಮೆಟ್ರೋ

ಬೆಂಗಳೂರಿನಲ್ಲಿ ಮೂರು ದಿನ ಮಳೆ

ಬೆಂಗಳೂರಿನಲ್ಲಿ ಮುಂದಿನ ಎರಡರಿಂದ ಮೂರು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ನಗರದಲ್ಲಿ ಏಪ್ರಿಲ್ 7ರವರೆಗೆ ಇದೇ ರೀತಿಯ ವಾತಾವರಣ ಮುಂದುವರಿಯಲಿದೆ. ಈ ವೇಳೆ, ನಗರದಲ್ಲಿ ಉಷ್ಣಾಂಶ ಗರಿಷ್ಠ 34ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಕಂಡು ಬರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಕರ್ನಾಟಕ’ ನಾಮಕರಣಕ್ಕೆ 50ರ ಸಂಭ್ರಮ | ವರ್ಷವಿಡಿ ವಿಶೇಷ ಕಾರ್ಯಕ್ರಮ: ಸಚಿವ ಶಿವರಾಜ್ ತಂಗಡಗಿ

'ರಾಜ್ಯ 'ಕರ್ನಾಟಕ' ಎಂದು ನಾಮಕರಣಗೊಂಡು 50 ವರ್ಷ ಪೂರೈಸುತ್ತಿದೆ' ವರ್ಷವಿಡಿ ಕಾರ್ಯಕ್ರಮ ಆಯೋಜಿಸಲು...

ಚಿತ್ರದುರ್ಗ | ಮನೆ ಬಾಗಿಲಿಗೆ ಇ-ಸ್ವತ್ತು ‘ಜನಸ್ನೇಹಿ ಕಾರ್ಯಕ್ರಮ’ಕ್ಕೆ ಮತ್ತೆ ಚಾಲನೆ ನೀಡಿದ ಸಿಇಒ ದಿವಾಕರ್

ಗ್ರಾಮ ಪಂಚಾಯತಿ ವ್ಯಾಪ್ತಿಯ ದಾಖಲೆಗಳನ್ನು ಸರ್ಕಾರವು ಡಿಜಿಟಲೀಕರಣಗೊಳಿಸಿದ್ದು, ಮನೆಯ ಖಾಯಂ ಹಕ್ಕು...

ಶಾಸಕ ಪ್ರದೀಪ್ ಈಶ್ವರ್ ಸಹಾಯ ಅರಸಿ ಬಂದ ವೃದ್ಧೆ; ಬರಿಗೈನಲ್ಲೇ ವಾಪಸ್

ಸದ್ಯ ರಾಜ್ಯ ರಾಜಕಾರಣದಲ್ಲಿ ತೆಲುಗು-ಕನ್ನಡ ಮಿಶ್ರಿತ ಡೈಲಾಗ್‌ಗಳಿಂದ ಅಬ್ಬರಿಸಿ ಬೊಬ್ಬಿರಿಯುತ್ತಿರುವವರು ಶಾಸಕ...

ಭ್ರಷ್ಟ ಪಿಡಿಒಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಪಿಡಿಒಗಳ ಮೇಲಿನ ತನಿಖೆಯನ್ನು ಚುರುಕುಗೊಳಿಸಿ ಅಂತಹವರ ವಿರುದ್ಧ...