ಜಿಲ್ಲೆಯಾದ್ಯಂತ ಹೆಚ್ಚಿನ ಮಳೆ ಆಗುತ್ತಿರುವ ಹಿನ್ನೆಲೆ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ ಹಾಗೂ ಒಂದರಿಂದ ಹತ್ತನೇ ತರಗತಿವರೆಗೆ( ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ) ನಾಳೆ ದಿನಾಂಕ 16-6-2025 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ.ಕೆ ರವರು ಆದೇಶಿಸಿದ್ದಾರೆ.
ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜೂ. 16ರ ಸೋಮವಾರ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಸಾರಲಾಗಿದೆ. ಈ ಕುರಿತು ಕಾರ್ಕಳ ತಹಶೀಲ್ದಾರ್ ಪ್ರದೀಪ್ ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಕಳ ತಾಲೂಕಿನೆಲ್ಲೆಡೆ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕೆರೆ, ಹೊಳೆ, ನದಿಗಳು ಧುಮ್ಮಿಕ್ಕಿ ಹರಿಯುತ್ತಿದೆ. ನೆರೆ ನೀರು ತೋಟಗಳಿಗೆ ನುಗ್ಗಿದೆ. ಹಲವೆಡೆ ಗಾಳಿ ಮಳೆಗೆ ಮನೆಗಳಿಗೆ ಹಾನಿಯಾಗಿದೆ.
College????