ದಕ್ಷಿಣ ಕನ್ನಡ | ಭಾರೀ ಮಳೆ; ಬಾಲಕಿ ಸೇರಿ ಇಬ್ಬರ ಸಾವು

Date:

ಹವಾಮಾನ ಇಲಾಖೆ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಮಳೆ ಅನಾಹುತದಿಂದ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಬಾಲಕಿ ಸೇರಿ ಇಬ್ಬರು ಮೃತಪಟ್ಟಿದ್ದಾರೆ.

- Advertisement -

ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊಂಟೆಪದವು ಸಮೀಪದ ಕೋಡಿ ಎಂಬಲ್ಲಿ ಗುಡ್ಡ ಕುಸಿದು ಎರಡು ಮನೆಗಳ ಮೇಲೆ ಬಿದ್ದು ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ಪ್ರೇಮ(50) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಇದನ್ನು ಓದಿದ್ದೀರಾ? ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ, ಉತ್ತರ ಭಾರತದಲ್ಲಿ ಏಳು ಸಾವು

ಕಾಂತಪ್ಪ ಪೂಜಾರಿ ಎಂಬವರ ಕುಟುಂಬ ಮಲಗಿದ್ದಾಗ ಗುಡ್ಡ ಕುಸಿದು ಮನೆಯ ಮೇಲೆ ಬಿದ್ದಿದೆ. ಇನ್ನೂ ಮೂವರು ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ ಎಂದು ತಿಳಿದು ಬಂದಿದೆ. ಒಬ್ಬರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಎನ್ ಡಿಆರ್‌ಎಫ್, ಎಸ್‌ಡಿಆರ್‌ಎಫ್‌, ಉಳ್ಳಾಲ ತಾಲೂಕು ತಹಶೀಲ್ದಾರ್ ಪುಟ್ಟರಾಜು, ಕಂದಾಯ ನಿರೀಕ್ಷಕ ಪ್ರಮೋದ್ ಮತ್ತಿತರರು ಭೇಟಿ ನೀಡಿೆದ್ದು ಕಾರ್ಯಾಚರಣೆ ಮುಂದುವರೆದಿದೆ.

ಇನ್ನು ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ಕಾನಕರೆ ಎಂಬಲ್ಲಿ ಭಾರೀ ಮಳೆಯಿಂದಾಗಿ ಮನೆಯ ಹಿಂಬದಿಯ ತಡೆಗೋಡೆ ಕುಸಿದು ಬಾಲಕಿ ಸಾವನ್ನಪ್ಪಿದ್ದಾಳೆ. ಮೃತ ಬಾಲಕಿಯನ್ನು ಫಾತಿಮ ನಈಮ(10) ಎಂದು ಗುರುತಿಸಲಾಗಿದೆ.

ಇದನ್ನು ಓದಿದ್ದೀರಾ? ಭಾರೀ ಮಳೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಕಾನಕರೆಯಲ್ಲಿರುವ ಮನೆಗೆ ಹಿಂಬದಿಯ ಗುಡ್ಡೆ, ತಡೆಗೋಡೆ ಕುಸಿದು ಬಿದ್ದು ಮನೆಯ ಕೊಠಡಿಯ ಕಿಟಕಿ ಬಾಲಕಿ ಮೇಲೆ ಬಿದ್ದಿದೆ. ಕೂಡಲೇ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆಗೆ ಸ್ಪಂದಿಸದೆ ಬಾಲಕಿ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

ಭಾರೀ ಮಳೆ: ಶಾಲೆಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಮೇ 30ರಂದು ಜಿಲ್ಲಾಡಳಿತ ರಜೆ ಘೋಷಿಸಿದೆ. ಗುರುವಾರ ರಾತ್ರಿಯಿಂದ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದೆ. ಜಿಲ್ಲೆಯ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಮನೆಗಳಿಗೆ ನೀರು ನುಗ್ಗಿದ್ದು ಹಲವು ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...