ಭಾರೀ ಮಳೆ; ಜನಜೀವನ ಅಸ್ತವ್ಯಸ್ತ

Date:

Advertisements

ಭಾರೀ ಮಳೆ ಗಾಳಿಯಿಂದ ಕೆಲವು ಜಿಲ್ಲೆಗಳಲ್ಲಿ ಅವಾಂತರ ಸೃಷ್ಟಿಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಒಂದೆಡೆ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ಇನ್ನೊಂದೆಡೆ ಮನೆಯ ಮೇಲ್ಛಾವಣಿ ಹಾರಿದ್ದು, ಬಾಳೆ ಬೆಳೆ ಹಾನಿಯಾಗಿರುವ ಘಟನೆ ನಡೆದಿದೆ.

ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಸಿಡಿಲು ಬಡಿದು ಇಬ್ಬರು ಸಾವಿಗೀಡಾಗಿದ್ದಾರೆ. ಮಾದರಹಳ್ಳಿ ಬಳಿಯ ಹರಳಹಳ್ಳಿ ಕ್ರಾಸ್ ಬಳಿ ಮರದ ಕೆಳಗೆ ನಿಂತಿದ್ದ ವೇಳೆ ವೈದ್ಯನಾಥಪುರದ ಮಧು (34) ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಶಿವಪುರದ ಗೌರಮ್ಮ‌ (80) ಮನೆಯಲ್ಲಿದ್ದಾಗ ಸಿಡಿಲಿನ ಶಬ್ದಕ್ಕೆ ಹೃದಯಾಘಾತವಾಗಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಕೋಲಾರ | ಮಳೆಯಿಂದ ತುಂಬಿದ ರಸ್ತೆಗಳು; ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ

Advertisements

ತಾಲೂಕಿನ ಹಲವೆಡೆ ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿದಿದೆ. ತಾಲೂಕಿನ ಹಲವು ಗ್ರಾಮಗಳಲ್ಲಿ ಬಿರುಗಾಳಿ ಸಹಿತ ಮಳೆಗೆ ಮೇಲ್ಛಾವಣಿ ಹಾರಿದೆ. ಬಿರುಗಾಳಿ ಮಳೆಗೆ ಹಲವು ಕಡೆ ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ವಿದ್ಯುತ್ ವ್ಯತ್ಯಯಗೊಂಡಿದೆ. ಮದ್ದೂರು ಪಟ್ಟಣದ ಬಳಿ ಸರ್ವೀಸ್ ರಸ್ತೆಗೆ ಬೃಹತ್‌ ಮರ ಉರುಳಿ ಬಿದ್ದಿದ್ದು, ಸಂಚಾರಕ್ಕೆ ಅಡ್ಡಿಯಾಗಿದೆ.

ಚಾಮರಾಜನಗರ: ಚಾಮರಾಜನಗರದ ಹನೂರು ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದಲ್ಲಿ ನಿರಂತರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಗುರುವಾರ ರಾತ್ರಿ ಸುರಿದ ಮಳೆಗೆ ಕುರಟ್ಟಿ ಹೊಸೂರು ಗ್ರಾಮದ ಪೊನ್ನಶೆಟ್ಟಿ ಎಂಬುವವರ ಮನೆಯ ಮೇಲ್ಛಾವಣಿ ಏಕಾಏಕಿ ಕುಸಿದಿದ್ದು, ಅದೃಷ್ಟವಶಾತ್‌ ಮನೆಯ‌ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಾಮರಾಜನಗರದಲ್ಲಿ ಮನೆಗೆ ಹಾನಿ
ಚಾಮರಾಜನಗರದಲ್ಲಿ ಸುರಿದ ಮಳೆಗೆ ಹಾರಿದ ಮೇಲ್ಛಾವಣಿ

ರಾತ್ರಿ ಮಲಗಿದ್ದಾಗ ದಿಢೀರ್‌ ಸದ್ದು ಕೇಳಿದ್ದರಿಂದ ಮಲಗಿದ್ದವರು ಎದ್ದು ಹೊರಬಂದಿದ್ದಾರೆ. ಇದ್ದಕ್ಕಿದ್ದಂತೆ ಮನೆ ಸಂಪೂರ್ಣವಾಗಿ ನೆಲಕ್ಕುರುಳಿದೆ. ಇದೀಗ ಮನೆ ಕಳೆದುಕೊಂಡು ಕುಟಂಬ ಬೀದಿಗೆ ಬಂದಿದೆ. ಮನೆಯಲ್ಲಿದ್ದವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯ ಗೋಡೆ ಕುಸಿದು ಚಾವಣಿ ಸಂಪೂರ್ಣ ಹಾನಿಯಾಗಿರುವುದರಿಂದ ಮನೆಯಲ್ಲಿದ್ದ ಬಟ್ಟೆ, ಆಹಾರ ಧಾನ್ಯಗಳು ಮಾತ್ರವಲ್ಲದೆ ಫಿಡ್ಜ್‌, ಟಿವಿ, ಮಂಚ ಎಲ್ಲವೂ ಜಖಂ ಆಗಿವೆ.

ಬಿರುಗಾಳಿ ಸಹಿತ ಮಳೆಗೆ ನೆಲಕಚ್ಚಿದ ಬಾಳೆ
ತಡರಾತ್ರಿ ಬಿರುಗಾಳಿ ಸಹಿತ ಮಳೆಯಾಗಿದ್ದು, ಹತ್ತಾರು ಎಕರೆ ಬಾಳೆ ಬೆಳೆ ನೆಲಕಚ್ಚಿದೆ. ಗುಂಡ್ಲುಪೇಟೆ ತಾಲೂಕಿನ ಕೊಡಸೋಗೆ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ರವಿಚಂದ್ರ, ನವೀನ್, ಶರತ್, ಪರಮೇಶ್ವರಪ್ಪ, ನಾಗಮ್ಮ ಮೊದಲಾದ ರೈತರಿಗೆ ಸೇರಿದ ಬಾಳೆ ಹಾಳಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ.ಈ ಹಿನ್ನೆಲೆಯಲ್ಲಿ ಕೃಷಿ ಇಲಾಖೆಯವರು ಬೆಳಗೆ ಪರಿಹಾರ ಘೋಷಣೆ ಮಾಡಬೇಕೆಂದು ಸಂತ್ರಸ್ತ ರೈತರು ಒತ್ತಾಯಿಸಿದ್ದಾರೆ.

ಬಾಳೆ ಬೆಳೆ ಹಾನಿ
ಭಾರೀ ಮಳೆಗೆ ನೆಲ ಕಚ್ಚಿದ ಬಾಳೆ

ಮೈಸೂರಲ್ಲಿ ಬಾಳೆ ತೋಟ ನಾಶ

ಮೈಸೂರು ಜಿಲ್ಲೆಯಲ್ಲಿಯೂ ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಬಾಳೆ ತೋಟ ಸಂಪೂರ್ಣ ನಾಶವಾಗಿದೆ. ತಿ.ನರಸೀಪುರ ತಾಲೂಕಿನ ವಾಟಾಳು ಗ್ರಾಮದ ರೈತ ಸೋಮಣ್ಣ ಎಂಬುವವರಿಗೆ ಸೇರಿದ ಬಾಳೆ ತೋಟ ನೆಲಕಚ್ಚಿದ್ದು, 30 ರಿಂದ 35 ಲಕ್ಷ ರೂ. ಬೆಲೆ ಬಾಳುವ ಬಾಳೆ ತೋಟ ಸಂಪೂರ್ಣ ನಾಶವಾಗಿದೆ. ಕಂಗಲಾಗಿರುವ ರೈತ ಸೋಮಣ್ಣ, ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X