ಭಾರೀ ಮಳೆ | ಧರೆಗುರುಳಿದ ವಿದ್ಯುತ್‌ ಕಂಬ, ಮರಗಳು; ಹಾರಿದ ಛಾವಣಿ

Date:

ರಾಜ್ಯದ ಕೆಲವೆಡೆ ಭಾರೀ ಮಳೆ ಸುರಿದಿದೆ. ಮೇ.29ರಂದು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಲವೆಡೆ ಸುರಿದ ಭಾರೀ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದ್ದು, ಬಿರುಗಾಳಿಗೆ ವಿದ್ಯುತ್ ಕಂಬಗಳು, ಬೃಹತ್ ಮರಗಳು, ಬಾಳೆ ಗಿಡಗಳು ನೆಲಕ್ಕುರಳಿವೆ.

ಬೇಲೂರು, ಚೀಕನಹಳ್ಳಿ, ಮೂಡಿಗೆರೆ ರಸ್ತೆಯಲ್ಲಿ 20ಕ್ಕೂ ಹೆಚ್ಚು ಬೃಹತ್ ಮರಗಳು, 17 ವಿದ್ಯುತ್ ಕಂಬಗಳು, ಮೂರು ಟ್ರಾನ್ಸ್‌ಫಾರ್ಮರ್‌ಗಳು ನೆಲಕ್ಕುರುಳಿವೆ. ತಾಲೂಕಿನ ಧರ್ಮೇಗೌಡ ಎಂಬುವವರ ಜಮೀನಿನಲ್ಲಿದ್ದ ನೂರಾರು ಬಾಳೆಗಿಡಗಳು ನೆಲಕ್ಕೆ ಬಿದ್ದಿದ್ದು, ಸಂಕಷ್ಟ ಎದುರಾಗಿದೆ.

ಮೇ 29ರಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಿದ್ದು, ನೆಲಕ್ಕುರುಳಿದ ಮರಗಳನ್ನು ಸಾರ್ವಜನಿಕರು ತೆರವುಗೊಳಿಸುತ್ತಿದ್ದಾರೆ. ಇಷ್ಟೆಲ್ಲ ಹಾನಿ ಸಂಭವಿಸಿದ್ದರೂ ಅಧಿಕಾರಿಗಳು ಮಾತ್ರ ಸ್ಥಳಕ್ಕೆ ಬಾರದೆ ಬೇಜವಾಬ್ದಾರಿ ತೋರಿದ್ದಾರೆ. ಇವರ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಿರುಗಾಳಿ, ಮಳೆಗೆ ಮೇಲ್ಚಾವಣಿ ಕುಸಿತ

ಚಿತ್ರದುರ್ಗ: ಜಿಲ್ಲೆಯ ಕೆಲವೆಡೆ ಮೇ 29ರ ರಾತ್ರಿ ಬಿರುಗಾಳಿ‌ ಸಹಿತ ಸುರಿದ ಮಳೆಗೆ ಎಂ.ಡಿ.ಕೋಟೆಯಲ್ಲಿ ಮನೆಯ ಮೇಲ್ಛಾವಣಿ ಕುಸಿದಿದ್ದು, ಬಸಪ್ಪನಮಾಳಿಗೆಯಲ್ಲಿ ಮನೆಯ ಶೀಟುಗಳು ಗಾಳಿಗೆ ಹಾರಿವೆ. ಮನೆಗಳಲ್ಲಿದ್ದ ನಿವಾಸಿಗಳು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಮನೆ ಹಾನಿಗೆ ಸೂಕ್ತ ಪರಿಹಾರ ಒದಗಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಭಾರೀ ಮಳೆ; ಬೃಂದಾವನ ಉದ್ಯಾನ ಬಂದ್

ಗಾಳಿ ಮಳೆಗೆ ನೆಲಕ್ಕುರಳಿದ ಮರಗಳು

ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರ ಗ್ರಾಮದ ವಾರ್ಡ್ ಸಂಖ್ಯೆ 1ರಲ್ಲಿ ಬಿರುಗಾಳಿ ಸಹಿತ ಮಳೆಗೆ ಮರಗಿಡಗಳು ನೆಲಕ್ಕೆ ಉರುಳಿದ್ದು, ಕೆಲವು ಮನೆಗಳಿಗೆ ಹಾನಿಯಾಗಿದೆ. ಕೆಲವು ಕಡೆ ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ. ಸ್ಥಳಕ್ಕೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ತುಮಕೂರು | ‘ದಲಿತರ ಸಂವಿಧಾನ’ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ

ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ...

ಬೆಂಗಳೂರು | ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ; ನ್ಯಾಯಕ್ಕಾಗಿ ರಾಷ್ಟ್ರಪತಿಗೆ ಕರವೇ ಮನವಿ

ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಯರು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು...