ಭಾರೀ ಮಳೆ | ಗೊರೂರಿನ ಹೇಮಾವತಿ ಜಲಾಶಯದ ಆರು ಕ್ರೆಸ್ಟ್ ಗೇಟ್‌ಗಳ ಮೂಲಕ ನೀರು ಬಿಡುಗಡೆ

Date:

ಹಾಸನ ಜಿಲ್ಲೆಯ ಮಲೆನಾಡು ಭಾಗದ ಹಾಗೂ ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಹೇಮಾವತಿ ನದಿಗೆ ಒಳಹರಿವು ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಾಸನ ತಾಲೂಕಿನ, ಗೊರೂರಿನಲ್ಲಿರುವ ಹೇಮಾವತಿ ಜಲಾಶಯದಿಂದ ಆರು ಕ್ರೆಸ್ಟ್‌ ಗೇಟ್‌ಗಳ ಮೂಲಕ ನೀರು ಬಿಡುಗಡೆ ಮಾಡಲಾಗಿದೆ.

- Advertisement -

ಜಿಲ್ಲೆಯ ಸಕಲೇಶಪುರ, ಆಲೂರು, ಹಾಸನ, ಅರಕಲಗೂಡು, ಹೊಳೆನರಸೀಪುರ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ ಹಿನ್ನಲೆಯಲ್ಲಿ ಗುರುವಾರ ಸಕಲೇಶಪುರ, ಆಲೂರು, ಹಾಸನ, ಅರಕಲಗೂಡು ಹಾಗೂ ಹೊಳೆನರಸೀಪುರ ತಾಲೂಕುಗಳ‌ ಅಂಗನವಾಡಿ ಹಾಗೂ ಶಾಲೆಗಳಿಗೆ ಮುಂಜಾಗ್ರತ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಇನ್ನು ಸಕಲೇಶಪುರ ತಾಲೂಕಿನಾದ್ಯಂತ ಅತಿಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಂಗನವಾಡಿ, ಶಾಲೆಗಳ ಜೊತೆಗೆ ಕಾಲೇಜುಗಳಿಗೂ ಕೂಡ ರಜೆ ನೀಡಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.

ಇದನ್ನೂ ಓದಿದ್ದೀರಾ? ಕೊಡಗು | ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತ; ಈವರೆಗೆ ತಿರುಗಿ ನೋಡದ ಉಸ್ತುವಾರಿ ಸಚಿವರು

ಹೇಮಾವತಿ ಜಲಾಶಯದ ನೀರಿನ ಮಟ್ಟ

ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ 37.103 ಟಿಎಂಸಿ ಇದ್ದು, ಸದ್ಯ ಜಲಾಶಯದಲ್ಲಿ 31.112 ಟಿಎಂಸಿ ನೀರು ಸಂಗ್ರಹವಾಗಿದೆ. ಇನ್ನು ಹೇಮಾವತಿ ಜಲಾಶಯದ ಗರಿಷ್ಠ ಮಟ್ಟ 2922.00 ಅಡಿಗಳಾಗಿದ್ದು, ಇಂದಿನ ನೀರಿನ ಮಟ್ಟ 2915.50 ಅಡಿಗಳಷ್ಟಿದೆ. ಸದ್ಯ ಜಲಾಶಯದ ಒಳಹರಿವು 14985 ಕ್ಯೂಸೆಕ್ ಹಾಗೂ ಹೊರಹರಿವು 15,700 ಕ್ಯೂಸೆಕ್ ಇದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ರೈತರಿಗೆ ಎಕರೆಗೆ ರೂ.25 ಸಾವಿರ ಪರಿಹಾರ ನೀಡಿ: ಭೀಮ್ ರಾಜ್ಯ ದಲಿತ ಸೇವಾ ಸಮಿತಿ ಆಗ್ರಹ

ಮಳೆ ಕೊರತೆಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪ್ರತಿ ಎಕರೆಗೆ ಕನಿಷ್ಠ...

SIR ರದ್ದುಗೊಳಿಸಿ, CEC ಜ್ಞಾನೇಶ್ ಕುಮಾರ್ ವಜಾಗೊಳಿಸಲು ಆಗ್ರಹ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಕೇಂದ್ರ...

ಉಡುಪಿ | ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಸಾಹಿತ್ಯದ ಪಾತ್ರ ಮಹತ್ವದ್ದು

ಪ್ರಶ್ನೆಗಳನ್ನು ಎತ್ತುವುದಷ್ಟೇ ಮುಖ್ಯವಲ್ಲ; ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವೂ ಅಗತ್ಯ. ಸಾಹಿತ್ಯವು...

ಹಾವೇರಿ | ಸಿಡಿಲು ಬಡಿದು ರೈತ ಸಾವು

ಹೊಲದಲ್ಲಿ ಕೃಷಿ ಕೆಲಸ ಮಾಡುವ ಸಮಯದಲ್ಲಿ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿರುವ...