ಮಲೆನಾಡು-ಕರಾವಳಿಯಲ್ಲಿ ಮಳೆ ಅಬ್ಬರ; ಭೋರ್ಗರೆಯುತ್ತಿವೆ ಜಲಪಾತಗಳು

Date:

ಕರ್ನಾಟಕದ ಮಲೆನಾಡು-ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಜಲಪಾತಗಳು ಮಳೆ ನೀರಿನಿಂದ ಭೋರ್ಗರೆಯುತ್ತಿವೆ. ಈ ಭಾಗದ ಹಲವಾರು ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಭೇಟಿಯನ್ನು ನಿರ್ಬಂಧಿಸಲಾಗಿದೆ.

- Advertisement -

ಮಲೆನಾಡು ಭಾಗವಾದ ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ಧಾರಕಾರ ಮಳೆ ಸುರಿದಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅಬ್ಬರದಿಂದ ತುಂಗಾ ನದಿಗೆ ನೀರು ಹರಿದು ಬರುತ್ತಿದ್ದು, ನದಿ ತುಂಬಿ ಹರಿಯುತ್ತಿದೆ. ನದಿ ದಂಡೆಯ ಕೃಷಿ ಭೂಮಿ, ತೋಟಗಳು ಜಲಾವೃತವಾಗಿವೆ. ಗಾಜನೂರು ಬಳಿಯ ತುಂಗಾ ಜಲಾಶಯ ಭರ್ತಿಯಾಗಿದ್ದು, ಜಲಾಶಯದ 22 ಕ್ರಸ್ಟ್‌ಗೇಟ್‌ಗಳ ಪೈಕಿ 14 ಗೇಟ್‌ಗಳನ್ನು ತೆರೆದು ನದಿಗೆ ನೀರು ಹರಿಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೈಲೊಂದು ಕ್ಯಾಮೆರಾ, ಜೀವಂತ ಬದುಕಿಗೆ ಮುಖಾಮುಖಿ

ಸಿನೆಮಾದ ಶಕ್ತಿ ಅದರ ಹಿಂದೆ ನಿಂತಿರುವ ತಂತ್ರಜ್ಞರ ಸಂಖ್ಯೆಯಲ್ಲಾಗಲಿ, ದುಬಾರಿ ಉಪಕರಣಗಳಲ್ಲಾಗಲಿ ಇಲ್ಲ. ಕನಿಷ್ಠ ಉಪಕರಣಗಳು ಮತ್ತು ಸಣ್ಣ ತಂಡದೊಂದಿಗೆ ಕೆಲಸ ಮಾಡುವುದು ಕೇವಲ ಆರ್ಥಿಕ ಅನಿವಾರ್ಯತೆಯಲ್ಲ; ಸಾಂಪ್ರದಾಯಿಕ ಸಿನೆಮಾ ವ್ಯವಸ್ಥೆಯ ಮಿತಿಗಳನ್ನು...

‘ಟಿಪ್ಪು ನಿಜ ಕನಸು’ಗಳಿಂದ ‘ಗಾಂಧೀ ಹತ್ಯೆಯ ಸತ್ಯ’ದವರೆಗೆ: ಇತಿಹಾಸ...

ನಾಟಕಕಾರ, ಬರಹಗಾರ ಅಡ್ಡಂಡ ಕಾರ್ಯಪ್ಪ ಹಿಂದಿನಿಂದಲೂ ಒಂದಲ್ಲೊಂದು ಕಾರಣಕ್ಕೆ ಸಾರ್ವಜನಿಕ ಚರ್ಚೆಯ ಮುನ್ನೆಲೆಗೆ ಬಂದಿರುವ ಹೆಸರು. ಇತಿಹಾಸದ ನಿರೂಪಣೆ, ರಂಗಭೂಮಿಯ ಬಳಕೆ, ಧಾರ್ಮಿಕ ಮತ್ತು ರಾಜಕೀಯ ವಿಚಾರಗಳ ಅಭಿವ್ಯಕ್ತಿ ಹಾಗೂ ಕೋಮು ಸೌಹಾರ್ದದ...

ಭಾವೈಕ್ಯತೆಯ ಹೆಜ್ಜೆನಾದ: ಕದ್ರಿ ದೇಗುಲದ ಯಕ್ಷಗಾನದಲ್ಲಿ ‘ಮಹಿಷಾಸುರ ಮರ್ದಿನಿ’ಯಾಗಿ...

ಕಲೆಗೆ ಯಾವುದೇ ಧರ್ಮ, ಜಾತಿಗಳ ಭೇದವಿಲ್ಲ ಎಂಬುದನ್ನು ಕರಾವಳಿಯ ಹೆಮ್ಮೆಯ ಸಾಂಪ್ರದಾಯಿಕ ಕಲೆ ಮತ್ತೊಮ್ಮೆ ಅತ್ಯಂತ ಸುಂದರವಾಗಿ ಸಾಬೀತುಪಡಿಸಿದೆ. ಮಂಗಳೂರಿನ ಐತಿಹಾಸಿಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವೇದಿಕೆಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು 'ಮಹಿಷಾಸುರ...

ಮಳೆಯ ಅಬ್ಬರಕ್ಕೆ ಜಿಲ್ಲೆಯ ಕೊಟ್ಟಿಗೆಹಾರ ಬಳಿಯ ಚಾರ್ಮಾಡಿ ಘಾಟ್‌ನಲ್ಲಿ ಇತ್ತೀಚೆಗಷ್ಟೇ ಕಾಮಗಾರಿ ನಡೆದಿದ್ದ ರಸ್ತೆ ಬಿರುಕು ಬಿಟ್ಟಿದೆ. ರಸ್ತೆ ಕುಸಿಯುವ ಅಪಾಯ ಎದುರಾಗಿದೆ. ದಕ್ಷಿಣ ಕನ್ನಡ-ಚಿಕ್ಕಮಗಳೂರು ನಡುವಿನ ಸಂಪರ್ಕಕೊಂಡಿ ಕಳಚಿದಂತಾಗಿದೆ.

ಮಳೆ1

ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ. ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಕೆಆರ್‌ಎಸ್‌ ಜಲಾಶಯಕ್ಕೆ 12 ಅಡಿ ನೀರು ಬಂದಿದೆ. ವಾರದ ಹಿಂದೆ, ಜಲಾಶಯದಲ್ಲಿ 87 ಅಡಿಯಿದ್ದ ನೀರಿನ ಮಟ್ಟ 99.30 ಅಡಿಗೆ ಏರಿಕೆಯಾಗಿದೆ.

ಇನ್ನು, ಕರಾವಳಿ ಪ್ರದೇಶದಲ್ಲಿಯೂ ಮಳೆ ಅಬ್ಬರಿಸುತ್ತಿದ್ದು, ಗಾಳಿಯೂ ವೇಗವಾಗಿ ಬೀಸುತ್ತಿದೆ. ಕುಂದಾಪುರ ತಾಲೂಕಿನ ರಟ್ಟಾಡಿ ಗ್ರಾಮದಲ್ಲಿ ಸುಂಟರಗಾಳಿ ಎದ್ದಿದ್ದು, ಮರಗಳು ಉರುಳಿ ಬಿದ್ದಿವೆ. ಮನೆಗಳಿಗೂ ಹಾನಿಯಾಗಿದೆ. ಗ್ರಾಮದ ಜನರು ಆತಂಕಗೊಂಡಿದ್ದಾರೆ. ಗ್ರಾಮಕ್ಕೆ ಅಮಾವಾಸ್ಯೆ ಬೈಲು ಗ್ರಾಮ ಪಂಚಾಯತಿ ಪಿಡಿಒ ಭೇಟಿ ನೀಡಿ ಹಾನಿ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನ ಇರುವ ಕಮಲಶಿಲೆಯಲ್ಲಿಯೂ ಹೆಚ್ಚಿನ ಮಳೆಯಾಗಿದ್ದು, ಕುಬ್ಜ ನದಿ ತುಂಬಿ ಹರಿಯುತ್ತಿದೆ. ದೇವಾಲಯಕ್ಕೂ ನೀರು ನುಗ್ಗಿದೆ.

ಮಳೆ 14

ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನಲ್ಲಿ ಗಂಗಾವಳಿ ನದಿ ಕೂಡ ತುಂಬಿ ಹರಿಯುತ್ತಿದೆ. ತಾಲೂಕಿನ ಶಿರಲೆ ಜಲಪಾತ, ಕಾನೂರು ಜಲಪಾತ​​​, ಕುಳಿ ಮಾಗೋಡು ಜಲಪಾತಗಳಿಗೆ ಪ್ರವಾಸಿಗರ ಭೇಟಿಯನ್ನು ನಿರ್ಬಂಧಿಸಲಾಗಿದೆ.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ಕಣಕುಂಬಿ, ಜಾಂಬೋಟಿ, ನಾಗರಗಾಳಿ, ಭೀಮಗಡ ಹಾಗೂ ಲೋಂಡಾ ಅರಣ್ಯ ಪ್ರದೇಶದಲ್ಲಿ ಧಾರವಾರವಾಗಿ ಮಳೆ ಸುರಿದಿದೆ ಮಲಪ್ರಭಾ, ಮಹಾದಾಯಿ ಮತ್ತು ಪಾಂಡರಿ ನದಿಗಳು ಉಕ್ಕಿ ಹರಿಯುತ್ತಿವೆ.

ರಾಜ್ಯದಲ್ಲಿ ಗುರುವಾರವೂ ಭಾರೀ ಮಳೆಯಾಗಲಿದ್ದು, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಜ್ಞಾನೇಶ್ ಕುಮಾರ್ ವಜಾ, ಎಸ್‌ಐಆರ್ ರದ್ದತಿಗೆ ಚಾರ್ಲ್ಸ್ ಅಂಬ್ಲರ್ ಆಗ್ರಹ

ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಅಕ್ಟೋಬರ್ 23ರಂದು ದೇಶಾದ್ಯಂತ ನಡೆಯಲಿರುವ...

ಉಡುಪಿ ಧರ್ಮಪ್ರಾಂತ್ಯದ ಮೂವರು ಉಪಯಾಜಕರಿಗೆ ಗುರುದೀಕ್ಷೆ ಪದವಿ ಪ್ರದಾನ

ಉಡುಪಿ ಧರ್ಮಪ್ರಾಂತದ ಮೂವರು ಉಪ ಯಾಜಕರಿಗೆ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ...

‘SIR’ ವಿರುದ್ಧ ಅ.23ರಂದು ಮೈಸೂರಿನಲ್ಲಿ ತಿರಂಗಾ ಯಾತ್ರೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಪ್ರಜಾಪ್ರಭುತ್ವ...