ಬೀದರ್‌ ಮಹಾಮಳೆ | ಸೆ.30ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ

Date:

Advertisements

ಬೀದರ್‌ ಜಿಲ್ಲಾದ್ಯಂತ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭಾರೀ ಪ್ರಮಾಣದ ಬೆಳೆ, ಮನೆ ಹಾನಿಯ ಜೊತೆಗೆ ಮೂಲಸೌಕರ್ಯಕ್ಕೂ ಹಾನಿಯಾಗಿದ್ದು, ವೈಮಾನಿಕ ಸಮೀಕ್ಷೆ ನಡೆಸಿ, ವಿಶೇಷ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಗಳಿಗೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಮನವಿ ಮಾಡಿದ್ದಾರೆ.

ಪೌರಾಡಳಿತ ಸಚಿವ ರಹೀಂಖಾನ್ ಅವರೊಂದಿಗೆ ಭಾನುವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಸಚಿವರು, ʼತಮ್ಮ ಮನವಿಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಸೆ.30 ರಂದು ವೈಮಾನಿಕ ಸಮೀಕ್ಷೆ ನಡೆಸುವ ಭರವಸೆ ನೀಡಿದ್ದಾರೆʼ ಎಂದರು.

ʼಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನ ಏರಿಕೆಯ ಪರಿಣಾಮವಾಗಿ ಋತುಮಾನಗಳಲ್ಲಿ ಏರುಪೇರಾಗುತ್ತಿದ್ದು, ಇದರ ಪರಿಣಾಮ ಗಡಿ ಜಿಲ್ಲೆ ಬೀದರ್ ಮೇಲೂ ಆಗುತ್ತಿದೆ. ಹೆಚ್ಚಿನ ಕೈಗಾರಿಕೆ, ವಾಣಿಜ್ಯ ಚಟುವಟಿಕೆ ಇಲ್ಲದ ನಮ್ಮ ಜಿಲ್ಲೆಯ ಶೇ.75ರಷ್ಟು ಜನರ ಬದುಕು ಕೃಷಿಯನ್ನೇ ಅವಲಂಬಿಸಿದ್ದು, ಈ ವರ್ಷ 4.31 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ನಡೆದಿದೆ. ಆದರೆ, ಆಗಸ್ಟ್ ತಿಂಗಳಲ್ಲೇ ಸುರಿದ ಅನಿರೀಕ್ಷಿತ ಪ್ರಮಾಣದ ಮಳೆಯಿಂದ ಶೇ.25ರಷ್ಟು ಬೆಳೆ ನಷ್ಟವಾಗಿತ್ತು. ಈಗ ಸೆಪ್ಟೆಂಬರ್ ನಲ್ಲಿ ಮತ್ತೆ ವಿಪರೀತ ಮಳೆ ಸುರಿಯುತ್ತಿದ್ದು, ರಾಶಿಗೆ ಬಂದ ಹೆಸರು, ಉದ್ದು, ತೊಗರಿ, ಸೋಯಾ ಸೇರಿದಂತೆ ಎಲ್ಲ ಬೆಳೆ ಸಂಪೂರ್ಣ ಹಾನಿಯಾಗಿದೆ. ಇದರಿಂದ ನಮ್ಮ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಈಶ್ವರ ಖಂಡ್ರೆ ಮುಖ್ಯಮಂತ್ರಿಯವರಿಗೆ ವಿವರಿಸಿದರು..

ʼಒಂದು ವಾರದ ಅವಧಿಯಲ್ಲಿ ಒಂದು ತಿಂಗಳ ಮಳೆ ಬೀಳುತ್ತಿರುವ ಪರಿಣಾಮ, ಹಲವು ಸೇತುವೆಗಳು ಕುಸಿದು ಸಂಪರ್ಕ ಕಡಿತವಾಗಿದೆ. ವಿದ್ಯುತ್ ಕಂಬಗಳು ಧರೆಗುರುಳಿ ಅನೇಕ ಗ್ರಾಮಗಳು ವಿದ್ಯುತ್ ಇಲ್ಲದೆ ಅಂಧಕಾರದಲ್ಲಿ ಮುಳುಗಿವೆ. ಭಾರೀ ಮಳೆಗೆ ಶಾಲಾ ಕೊಠಡಿ, ಅಂಗನವಾಡಿ ಕಟ್ಟಡ, ಆಸ್ಪತ್ರೆ, ಸರ್ಕಾರಿ ಕಚೇರಿಗಳೂ ಸೋರುವಂತಾಗಿದೆ. ಪ್ರವಾಹದಿಂದಾಗಿ ಫಲವತ್ತಾದ ಮಣ್ಣು ಕೊಚ್ಚಿ ಹೋಗಿದ್ದು, ಭೂಮಿ ಸವಳು ಜವಳಾಗಿದೆ. ರೈತರ ಬಗ್ಗೆ ಅಪಾರ ಕಾಳಜಿ ಹೊಂದಿರುವ ತಾವು, ಬೀದರ್ ಜಿಲ್ಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ, ತುರ್ತು ಪರಿಹಾರ ಹಾಗೂ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ವಿನಂತಿ ಮಾಡಿದ್ದೇನೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆʼ ಎಂದೂ ತಿಳಿಸಿದರು.

ಮಂಗಳವಾರ ಪ್ರವಾಸ :

ʼಭೀಮಾ ನದಿ‌ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮಂಗಳವಾರ ಪ್ರವಾಸ ಕೈಗೊಂಡು, ಕಲಬುರ್ಗಿ, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಿ, ಪರಿಹಾರ ಕಾರ್ಯಗಳ ಪೂರ್ಣ ಮಾಹಿತಿ ಪಡೆದು, ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಕ್ರಮ ವಹಿಸುವುದಾಗಿ ತಿಳಿಸಿದ್ದೇನೆ’ ಎಂದು ಸಿಎಂ ಸಿದ್ದರಾಮಯ್ಯ ಅವರು ʼಎಕ್ಸ್ ʼನಲ್ಲಿ ಹಂಚಿಕೊಂಡಿದ್ದಾರೆ.

ಈ ಬಗ್ಗೆ ʼಈದಿನ.ಕಾಮ್‌ʼ ಭಾನುವಾರ ಮಧ್ಯಾಹ್ನ ಬೀದರ್‌ | ʼರೈತರʼ ನೋವ ನೋಯದವರೆತ್ತ ಬಲ್ಲರೊ? ಎಂಬ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿ ಸಿಎಂ ಸೇರಿದಂತೆ ಕೃಷಿ, ಕಂದಾಯ ಸಚಿವರು ಜಿಲ್ಲೆಯ ಪ್ರವಾಹ ಪರಿಸ್ಥಿತಿ ಪರಿಶೀಲಿಸಬೇಕೆಂದು ಗಮನ ಸೆಳೆದಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ...

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

Download Eedina App Android / iOS

X