ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನಕ್ಕೆ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ನಿರಳಾರಾಗಿದ್ದರು. ತುಮಕೂರಿನಲ್ಲಿ ಮಳೆ ಮುಂದುವರೆದಿದ್ದು ಶುಕ್ರವಾರ ಸಂಜೆಯೂ ಭರ್ಜರಿ ಮಳೆಯಾಗಿದೆ.
ಮಳೆಯ ಸಂಭ್ರಮ ಒಂದೆಡೆಯಾದರೆ, ತುಮಕೂರು ಮಹಾನಗರ ಪಾಲಿಕೆಯ ನಿರ್ಲಕ್ಷ್ಯಕ್ಕೆ ಪಾದಚಾರಿಗಳು, ವಾಹನ ಸವಾರರು ಸಂಚರಿಸಲು ಪರಡುವಂತಾಗಿದೆ. ರಾಜಗಾಲುವೆ ಒತ್ತುವರಿ ತೆರವಾಗದೆ ಹಲವು ಕಡೆ ಮಳೆ ನೀರು ರಸ್ತೆಯ ಮೇಲೆ ಹರಿಯುತ್ತಿದೆ. ಹೀಗಾಗಿ ಸಂಚಾರಕ್ಕೆ ಅಡ್ಡಿಯಾಗಿದೆ. ತುಮಕೂರು ನಗರದ ಸರ್ವೋದಯ ಪಿಯು ಕಾಲೇಜು ಮುಂಭಾಗ ರಸ್ತೆಯಲ್ಲಿ ನೀರು ತುಂಬಿ ಹರಿದಿದ್ದರಿಂದ ವಾಹನ ಸವಾರು ಸಂಚರಿಸಲು ಪರದಾಡಿದ ದೃಶ್ಯಗಳು ಕಂಡುಬಂದವು.
“ಮಳೆ ಅವಾಂತರಕ್ಕೆ ನಗರದ ಜನತೆ ತತ್ತರಿಸಿ ಹೋಗಿದ್ದು, ಮಳೆನೀರು ಸರಾಗವಾಗಿ ಹರಿಯಲು ಮಹಾನಗರಪಾಲಿಕೆ ಸಮರ್ಪಕ ವ್ಯವಸ್ಥೆ ಮಾಡದೇ ನಿಲ್ಯಕ್ಷದಿಂದ ಇರುವುದೇ ಅನಾಹುತಕ್ಕೆ ಕಾರಣವಾಗಿದೆ” ಎನ್ನುತ್ತಾರೆ ಮಹಾನಗರಪಾಲಿಕೆ ಮಾಜಿ ಸದಸ್ಯ ಕೆ ಪಿ ಮಹೇಶ್.
“ಶುಕ್ರವಾರ ಸಂಜೆ ಸುರಿದ ಭಾರೀ ಮಳೆಗೆ ಅಂತರಸನಹಳ್ಳಿ – ಯಲ್ಲಾಪುರದ ಮಧ್ಯದ ರಾಷ್ಟ್ರೀಯ ಹೆದ್ದಾರಿಯ ಒವರ್ ಬ್ರಿಡ್ಜ್ ಕೆಳಗೆ ನೀರು ಸಂಗ್ರಹವಾಗಿ ಸ್ಥಳೀಯರಿಗೆ ಸಂಚರಿಸಲು ತೊಂದರೆಯಾಗಿದೆ. ಅಂತೆಯೇ ನಗರದ ಅಮಾನಿಕೆರೆ, ಕೋತಿತೋಪು, ಮಹಾತ್ಮಗಾಂಧಿ ರಸ್ತೆ, ಅಶೋಕ ರಸ್ತೆ, ಗುಬ್ಬಿ ಗೇಟ್, ಶೆಟ್ಟಿಹಳ್ಳಿ-ಕುಣಿಗಲ್ ರಸ್ತೆ, ರಿಂಗ್ ರಸ್ತೆಯ ಅಂಡರ್ ಪಾಸ್‌ಗಳಲ್ಲಿ ಮಳೆ ನೀರು ಭಾರೀ ಪ್ರಮಾಣದಲ್ಲಿ ತುಂಬಿದ್ದು, ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದಲೇ ಅನಾಹುತಗಳಿಗೆ ಕಾರಣವಾಗಿದೆ. ರಾಜಗಾಲುವೆ ಮತ್ತು ಚರಂಡಿಗಳಲ್ಲಿರುವ ಹೂಳು ತೆಗೆಯದ ಮಹಾನಗರಪಾಲಿಕೆಯ ಬೇಜಾವಬ್ದಾರಿಯೇ ಇದ್ದಕ್ಕೆ ಕಾರಣ ಎನ್ನುತ್ತಾರೆ” ಮಹೇಶ್.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬಿತ್ತನೆ ಬೀಜ, ರಸಗೊಬ್ಬರಗಳ ದರ ಇಳಿಸುವಂತೆ ಕೆಪಿಆರ್‌ಎಸ್ ಆಗ್ರಹ
ತುಮಕೂರು ಮಹಾನಗರ ಪಾಲಿಕೆ ಕೂಡಲೇ ಈ ಸಮಸ್ಯೆ ಪರಿಹರಿಸಬೇಕೆಂಬುದು ಸಾರ್ವಜನಿಕರ ಒತ್ತಾಯವಾಗಿದೆ.
