ತುಮಕೂರಿನಲ್ಲಿ ಭರ್ಜರಿ ಮಳೆ; ಪಾಲಿಕೆ ನಿರ್ಲಕ್ಷ್ಯದಿಂದ ಸಂಚಾರಕ್ಕೆ ತೊಂದರೆ

Date:

ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನಕ್ಕೆ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ನಿರಳಾರಾಗಿದ್ದರು. ತುಮಕೂರಿನಲ್ಲಿ ಮಳೆ ಮುಂದುವರೆದಿದ್ದು ಶುಕ್ರವಾರ ಸಂಜೆಯೂ ಭರ್ಜರಿ ಮಳೆಯಾಗಿದೆ.

- Advertisement -

ಮಳೆಯ ಸಂಭ್ರಮ ಒಂದೆಡೆಯಾದರೆ, ತುಮಕೂರು ಮಹಾನಗರ ಪಾಲಿಕೆಯ ನಿರ್ಲಕ್ಷ್ಯಕ್ಕೆ ಪಾದಚಾರಿಗಳು, ವಾಹನ ಸವಾರರು ಸಂಚರಿಸಲು ಪರಡುವಂತಾಗಿದೆ. ರಾಜಗಾಲುವೆ ಒತ್ತುವರಿ ತೆರವಾಗದೆ ಹಲವು ಕಡೆ ಮಳೆ ನೀರು ರಸ್ತೆಯ ಮೇಲೆ ಹರಿಯುತ್ತಿದೆ. ಹೀಗಾಗಿ ಸಂಚಾರಕ್ಕೆ ಅಡ್ಡಿಯಾಗಿದೆ. ತುಮಕೂರು ನಗರದ ಸರ್ವೋದಯ ಪಿಯು ಕಾಲೇಜು ಮುಂಭಾಗ ರಸ್ತೆಯಲ್ಲಿ ನೀರು ತುಂಬಿ ಹರಿದಿದ್ದರಿಂದ ವಾಹನ ಸವಾರು ಸಂಚರಿಸಲು ಪರದಾಡಿದ ದೃಶ್ಯಗಳು ಕಂಡುಬಂದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಭಾರೀ ಮಳೆ ತುಮಕೂರು

“ಮಳೆ ಅವಾಂತರಕ್ಕೆ ನಗರದ ಜನತೆ ತತ್ತರಿಸಿ ಹೋಗಿದ್ದು, ಮಳೆನೀರು ಸರಾಗವಾಗಿ ಹರಿಯಲು ಮಹಾನಗರಪಾಲಿಕೆ ಸಮರ್ಪಕ ವ್ಯವಸ್ಥೆ ಮಾಡದೇ ನಿಲ್ಯಕ್ಷದಿಂದ ಇರುವುದೇ ಅನಾಹುತಕ್ಕೆ ಕಾರಣವಾಗಿದೆ” ಎನ್ನುತ್ತಾರೆ ಮಹಾನಗರಪಾಲಿಕೆ ಮಾಜಿ ಸದಸ್ಯ ಕೆ ಪಿ ಮಹೇಶ್.

“ಶುಕ್ರವಾರ ಸಂಜೆ ಸುರಿದ ಭಾರೀ ಮಳೆಗೆ ಅಂತರಸನಹಳ್ಳಿ – ಯಲ್ಲಾಪುರದ ಮಧ್ಯದ ರಾಷ್ಟ್ರೀಯ ಹೆದ್ದಾರಿಯ ಒವರ್ ಬ್ರಿಡ್ಜ್ ಕೆಳಗೆ ನೀರು ಸಂಗ್ರಹವಾಗಿ ಸ್ಥಳೀಯರಿಗೆ ಸಂಚರಿಸಲು ತೊಂದರೆಯಾಗಿದೆ. ಅಂತೆಯೇ ನಗರದ ಅಮಾನಿಕೆರೆ, ಕೋತಿತೋಪು, ಮಹಾತ್ಮಗಾಂಧಿ ರಸ್ತೆ, ಅಶೋಕ ರಸ್ತೆ, ಗುಬ್ಬಿ ಗೇಟ್, ಶೆಟ್ಟಿಹಳ್ಳಿ-ಕುಣಿಗಲ್ ರಸ್ತೆ, ರಿಂಗ್ ರಸ್ತೆಯ ಅಂಡರ್ ಪಾಸ್‌ಗಳಲ್ಲಿ ಮಳೆ ನೀರು ಭಾರೀ ಪ್ರಮಾಣದಲ್ಲಿ ತುಂಬಿದ್ದು, ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದಲೇ ಅನಾಹುತಗಳಿಗೆ ಕಾರಣವಾಗಿದೆ. ರಾಜಗಾಲುವೆ ಮತ್ತು ಚರಂಡಿಗಳಲ್ಲಿರುವ ಹೂಳು ತೆಗೆಯದ ಮಹಾನಗರಪಾಲಿಕೆಯ ಬೇಜಾವಬ್ದಾರಿಯೇ ಇದ್ದಕ್ಕೆ ಕಾರಣ ಎನ್ನುತ್ತಾರೆ” ಮಹೇಶ್.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬಿತ್ತನೆ ಬೀಜ, ರಸಗೊಬ್ಬರಗಳ ದರ ಇಳಿಸುವಂತೆ ಕೆಪಿಆರ್‌ಎಸ್‌ ಆಗ್ರಹ

ತುಮಕೂರು ಮಹಾನಗರ ಪಾಲಿಕೆ ಕೂಡಲೇ ಈ ಸಮಸ್ಯೆ ಪರಿಹರಿಸಬೇಕೆಂಬುದು ಸಾರ್ವಜನಿಕರ ಒತ್ತಾಯವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....