ಡಿಸೆಂಬರ್ 8 ರಂದು ಹೆಬ್ರಿ ಗ್ರಾಮದ ಇಕ್ಕೋಡ್ಲು ಹೋಂ ಸ್ಟೇ ಒಂದರ ಅಡಿಕೆ ತೋಟದ ಬಳಿ ಸುಮಾರು 35 ರಿಂದ 45 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯು ಮಲಗಿದ್ದಲ್ಲಿಯೇ ಮೃತಪಟ್ಟಿದ್ದು, ಮೃತದೇಹವನ್ನು ನಗರದ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ಇರಿಸಲಾಗಿರುತ್ತದೆ.
ಮೃತ ವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ಹೆಬ್ರಿ ಪೊಲೀಸ್ ಠಾಣೆಯ ಉಪನಿರೀಕ್ಷರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
