ಭಾರೀ ಮಳೆಯಿಂದ ಸಂಪರ್ಕ ಕಡಿತಗೊಂಡ ಹೆಬ್ರಿ -ಕುಚೂರು ಸಂಪರ್ಕಿಸುವ ಬದಲಿ ರಸ್ತೆಯ ಸ್ಥಳಕ್ಕೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ. ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇಲಾಖಾಧಿಕಾರಿಗಳ ನಿರ್ಲಕ್ಷದಿಂದ ಈ ಅನಾಹುತ ಉಂಟಾಗಿದೆ ಎಂದು ಆರೋಪಿಸಿ ಸಾಮಾಜಿಕ ಹೋರಾಟಗಾರ ಶ್ರೀಕಾಂತ್ ಕುಚೂರು ಮನವಿ ಸಲ್ಲಿಸಿದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ. ಸ್ಥಳ ಪರಿಶೀಲನೆ ನಡೆಸಿದರು. ಯಾವುದೇ ಕಾರಣಕ್ಕೂ ಸ್ಥಳೀಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆ ಯಾಗಬಾರದು. ಹಗಲು ಹೊತ್ತು ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿ ರಾತ್ರಿ ವೇಳೆ ವಾಹನ ಸಂಚಾರ ನಿಲ್ಲಿಸಿ ಬದಲಿ ಮಾರ್ಗದಲ್ಲಿ ಚಲಿಸುವಂತೆ ಸೂಚನೆ ನೀಡಬೇಕೆಂದು ಜಿಲ್ಲಾಧಿಕಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಹೆಬ್ರಿ ತಹಶೀಲ್ದಾರ್ ಪ್ರಸಾದ್ ಎ., ಹೆಬ್ರಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿ ಕಾರಿ ವಿಜಯ, ಸಾಮಾಜಿಕ ಹೋರಾಟ ಗಾರ ಶ್ರೀಕಾಂತ್ ಪೂಜಾರಿ ಕುಚೂರು, ಬಾಲಕೃಷ್ಣ ಶೆಟ್ಟಿ ಮಡಾಮಕ್ಕಿ, ಮಹೇಶ್ ಶೆಟ್ಟಿ ಬಾದು, ಗ್ರಾಮಸ್ಥರು ಉಪಸ್ಥಿತರಿದ್ದರು.