ಉಡುಪಿ | ಹೆಜಮಾಡಿಯ ಹದಗೆಟ್ಟ ರಸ್ತೆಗೀಗ ಕಾಯಕಲ್ಪ: ₹50 ಲಕ್ಷ ಅನುದಾನ

Date:

ಹೆಜಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡಬ್ಬು ದೈವಸ್ಥಾನ ಬಳಿಯಿಂದ ಗಿರಿಜಾ ಅವರ ಮನೆವರೆಗೆ ಕಾಲೋನಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುರುವಾರ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಶಿಲಾನ್ಯಾಸ ನೆರವೇರಿಸಿದರು.

- Advertisement -

ಬಳಿಕ ಮಾತನಾಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ತೀರಾ ಹದಗೆಟ್ಟಿರುವ ಹೆಜಮಾಡಿಯ ಶ್ರೀನಾರಾಯಣ ಗುರು ರಸ್ತೆಯನ್ನು ಸಮಾಜ ಕಲ್ಯಾಣ ಇಲಾಖೆಯ ಮೂಲಕ ₹50 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ರಸ್ತೆಯನ್ನು 5 ಮೀಟರ್ ಅಗಲದಲ್ಲಿ ಸುಮಾರು 350 ಮೀಟರ್‌ವರೆಗೆ ಅಭಿವೃದ್ಧಿಪಡಿಸಲಾಗುವುದು. ಉಳಿದ ಸುಮಾರು 70 ಮೀಟರ್ ಉದ್ದದ ರಸ್ತೆಯನ್ನೂ ಸಾರ್ವಜನಿಕರ ಒತ್ತಾಸೆಯಂತೆ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದರು.

ಕಾಪು ಕ್ಷೇತ್ರದಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಸರ್ಕಾರದಿಂದ ಕೇವಲ ₹38 ಕೋಟಿ ಅನುದಾನ ದೊರೆತಿದೆ. ಪ್ರಸ್ತುತ ₹16 ಕೋಟಿಯನ್ನು ಕಾಪು ಕ್ಷೇತ್ರದ ವಿವಿಧ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ರಸ್ತೆ ಅಭಿವೃದ್ಧಿಗೆ ಮೀಸಲಿಡಲಾಗಿದೆ. ಆದ್ಯತೆಯ ಆಧಾರದ ಮೇಲೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಎಲ್ಲ ಕಾಮಗಾರಿಗಳನ್ನೂ ಪಾರದರ್ಶಕವಾಗಿ ಟೆಂಡರ್ ಮೂಲಕವೇ ನಿರ್ವಹಿಸಲಾಗುತ್ತಿದೆ ಎಂದು ಹೇಳಿದರು.

ಪ್ರವಾಸೋದ್ಯಮ ಅಭಿವೃದ್ಧಿಯ ದೃಷ್ಟಿಯಿಂದ ಮೀನುಗಾರಿಕಾ ರಸ್ತೆಗಳ ಅಭಿವೃದ್ಧಿಗೂ ಅನುದಾನ ನೀಡುವಂತೆ ಸರ್ಕಾರವನ್ನು ಒತ್ತಾಯಿಸಲಾಗಿದೆ. ಸಾಗರಮಾಲಾ ಯೋಜನೆಯ ಮೂಲಕ ಕೇಂದ್ರ ಸರ್ಕಾರದಿಂದಲೂ ಅನುದಾನ ಪಡೆಯಲು ಪ್ರಯತ್ನಿಸಲಾಗುವುದು ಎಂದರು.

ಹೆಜಮಾಡಿ ಸರ್ವಋತು ಬಂದರು ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಮುಂದಿನ ಜನವರಿ ವೇಳೆಗೆ ಬಂದರನ್ನು ಲೋಕಾರ್ಪಣೆಗೊಳಿಸುವ ನಿರೀಕ್ಷೆಯಿದೆ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ತಿಳಿಸಿದರು.

1012534149

ಕಾರ್ಯಕ್ರಮದಲ್ಲಿ ಜಿಲ್ಲಾ ಬಿಎಸ್‌ಪಿ ಅಧ್ಯಕ್ಷ ಶೇಖರ ಹೆಜಮಾಡಿ, ಹೆಜಮಾಡಿ ಬಿಲ್ಲವರ ಸಂಘದ ಅಧ್ಯಕ್ಷ ಮೋಹನ್‌ದಾಸ್ ಹೆಜಮಾಡಿ, ಗುತ್ತಿಗೆದಾರ ಕಿಶೋರ್ ಕುಮಾರ್ ಗುರ್ಮೆ, ಹೆಜಮಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ರೇಶ್ನಾ ಮೆಂಡನ್, ಪಾಂಡುರಂಗ ಕರ್ಕೇರ, ಪ್ರಾಣೇಶ್ ಹೆಜಮಾಡಿ, ಪವಿತ್ರಾ ಗಿರೀಶ್, ಶರಣ್ ಕುಮಾರ್ ಮಟ್ಟು, ಸುಭಾಸ್ ಸಾಲ್ಯಾನ್, ಮೋಹನ್ ಸುವರ್ಣ, ರಾಜು ಹೆಜಮಾಡಿ, ಶಿವರಾಮ ಶೆಟ್ಟಿ, ಗೋವರ್ಧನ್ ಕೋಟ್ಯಾನ್, ರವಿ ಕುಂದರ್, ಬಬಿತಾ ಪುತ್ರನ್, ಲೇಲೇಶ್ ಸುವರ್ಣ, ರಿಕ್ಷಾ ಯೂನಿಯನ್ ಪದಾಧಿಕಾರಿ ಚಂದ್ರಕಾಂತ್, ಕೋಕೊರ್ದಬ್ಬು ದೈವಸ್ಥಾನದ ಅರ್ಚಕ ಜಗನ್ನಾಥ ಮುಖಾರಿ ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ನನ್ನ ರಾಜಕೀಯ ಏಳಿಗೆಯಲ್ಲಿ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಪಾತ್ರ ದೊಡ್ಡದು | ಸಿದ್ದರಾಮಯ್ಯ

ನಗರದ ಶ್ರೀದೇವರಾಜ ಅರಸು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರ ಹಾಗೂ...

ಚಿಕ್ಕಮಗಳೂರು | ಭೀಕರ ಅಪಘಾತ: ಇಬ್ಬರಿಗೆ ಗಂಭೀರ 

ವಾಹನ ಅಪಘಾತ,ಜೆಸಿಬಿ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು...

ಬಾಗೇಪಲ್ಲಿ: ಅಂತರರಾಜ್ಯ ಮಟ್ಟದ ಬಹುಭಾಷಾ ದಸರಾ ಕವಿಗೋಷ್ಠಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಪಟ್ಟಣಕ್ಕೆ ಸಮೀಪದ ಗಡಿದಂ ರಾಜರಾಜೇಶ್ವರಿ...