ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.
ರಾಜ್ಯ ಸರಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ನೇಮಿಸಿ ಮಂಗಳವಾರ ಸಂಜೆ ಆದೇಶ ಹೊರಡಿಸಿತ್ತು. 1998ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಹೇಮಂತ್ ನಿಂಬಾಳ್ಕರ್ ಅವರು ಪೊಲೀಸ್ ಇಲಾಖೆಯ ವಿವಿಧ ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ನಿಂಬಾಳ್ಕರ್ ಅವರಿಗೆ ಇಲಾಖೆಯ ಅಧಿಕಾರಿಗಳು ಪುಷ್ಪಗುಚ್ಛ ನೀಡಿ ಅಭಿನಂದಿಸಿದರು. ನಂತರ ಆಯುಕ್ತರು ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದರು.
ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.