ತೀವ್ರ ಸ್ವರೂಪ ಪಡೆಯುತ್ತಿರುವ ʼಹೇಮಾವತಿʼ ಹೋರಾಟ; ಎಸ್ಪಿ ಕಚೇರಿ ಮುಂದೆ ಬಿಜೆಪಿ ಶಾಸಕರ ಧರಣಿ

Date:

ತುಮಕೂರಿನ ಹೇಮಾವತಿ ಲಿಂಕ್‌ ಕೆನಾಲ್‌ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

- Advertisement -

ಕೃಷಿ ಹಾಗೂ ಕನ್ನಡಪರ ಹೋರಾಟಗಾರರಿಂದ ಎಸ್ಪಿ ಕಚೇರಿಗೆ ಮುತ್ತಿಗೆ ಹಾಕುವ ನಿರ್ಧಾರದ ಬೆನ್ನಲ್ಲೇ ಭಾರಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ನಿಗದಿಯಾಗಿದ್ದ ಪ್ರತಿಭಟನೆಯಲ್ಲಿ ಜಿಲ್ಲೆಯ ಮೂವರು ಶಾಸಕರು ಹಾಗೂ ವಿವಿಧ ಕನ್ನಡಪರ ಸಂಘಟನೆಗಳು ಭಾಗಿಯಾಗಿ ಬೆಂಬಲ ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಶಾಸಕರಾದ ಜ್ಯೋತಿಗಣೇಶ್, ಸುರೇಶ್ ಗೌಡ, ಎಂ ಟಿ ಕೃಷ್ಣಪ್ಪ ಹಾಗೂ ಮಾಜಿ ಸಚಿವ ಸೊಗಡು ಶಿವಣ್ಣ, ಬಿಜೆಪಿ ತುಮಕೂರು ಜಿಲ್ಲಾಧ್ಯಕ್ಷ ಹೆಬ್ಬಾಕ ರವಿ ಈ ಹೋರಾಟಕ್ಕೆ ಬೆಂಬಲ ನೀಡಿದ್ದು, ರೈತರ ಬಂಧನ ಹಾಗೂ ಸ್ವಾಮೀಜಿಗಳ ವಿರುದ್ಧ ದಾಖಲಾದ ಎಫ್‌ಐಆರ್ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದು, ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಪ್ರತಿಭಟನಾಕಾರರು ನೇರವಾಗಿ ಎಸ್ಪಿ ಚೇಂಬರ್‌ಗೆ ತೆರಳಿ ಪ್ರಕರಣಗಳನ್ನು ಹಿಂಪಡೆಯುವಂತೆ ಮನವಿ ಸಲ್ಲಿಸಿದರು.

WhatsApp Image 2025 06 04 at 2.23.12 PM

ಹಠಾತ್‌ಗೆ ಘಟನಾ ಸ್ಥಳಕ್ಕೆ ಆಗಮಿಸಿದ ಕೇಂದ್ರ ವಲಯ ಐಜಿಪಿ ಲಬೂರಾಮ್, ಎಸ್ಪಿ ಕಚೇರಿ ಆವರಣದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಕುರಿತಂತೆ ಮಾಹಿತಿ ಪಡೆದುಕೊಂಡರು. ಪ್ರತಿಭಟನಾ ನಿರತರ ಸಮಸ್ಯೆಗಳನ್ನು ಆಲಿಸಿದರು. ಶಾಸಕರು ಮತ್ತು ಮುಖಂಡರ ಬೇಡಿಕೆಗೆ ಸ್ಪಂದಿಸುವ ಭರವಸೆ ನೀಡಿದ ಲಬೂರಾಮ್, ಪರಿಸ್ಥಿತಿ ಸಮತೋಲನದಲ್ಲಿರಲಿ ಎಂಬ ಉದ್ದೇಶದಿಂದ ಸ್ಥಳೀಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.

ಎಸ್ಪಿ ಕಚೇರಿಯ ಮೆಟ್ಟಿಲುಗಳ ಮೇಲೆಯೇ ಶಾಸಕರು ಧರಣಿ ಕೂತಿದ್ದಾರೆ. ತಕ್ಷಣವೇ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರನ್ನು ಸಂಪರ್ಕಿಸಿ ಎಫ್‌ಐಆರ್ ಹಿಂಪಡೆಯುವಂತೆ ತೀವ್ರ ಒತ್ತಡ ಹಾಕಿದ್ದಾರೆ.

WhatsApp Image 2025 06 04 at 2.23.10 PM

ಇದನ್ನೂ ಓದಿ: ಹಾಸನ | ಕೌಟುಂಬಿಕ ಕಲಹ; ಹೇಮಾವತಿ ನದಿಗೆ ಹಾರಿ ಎಂಜಿನಿಯರ್ ಆತ್ಮಹತ್ಯೆ

ಪ್ರತಿಭಟನೆಯ ಹಿನ್ನೆಲೆ ತುಮಕೂರಿನ ಬಿಹೆಚ್ ರಸ್ತೆದಲ್ಲಿರುವ ಎಸ್ಪಿ ಕಚೇರಿಗೆ ಮುಂಜಾನೆಯಿಂದಲೇ ಭದ್ರತೆ ಒದಗಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಅಗ್ನಿಶಾಮಕ ದಳ ಸಿಬ್ಬಂದಿಯೂ ಸ್ಥಳದಲ್ಲಿದ್ದಾರೆ. ಮೂವರು ಡಿವೈಎಸ್ಪಿ, 8 ಇನ್ಸ್‌ಪೆಕ್ಟರ್‌ಗಳು ಹಾಗೂ ನೂರಾರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

WhatsApp Image 2025 06 04 at 2.23.12 PM 1

ಎಸ್‌ಎಸ್‌ಐಟಿ ಕಾಲೇಜಿನಿಂದ ಶಿವಕುಮಾರ್ ಸ್ವಾಮೀಜಿ ವೃತ್ತದವರೆಗೆ ಸಂಪೂರ್ಣವಾಗಿ ಸಂಚಾರ ಸ್ಥಗಿತಗೊಳಿಸಲಾಗಿದೆ. ಎಸ್ಪಿ ಕಚೇರಿ ಎದುರು ಭಾಗದಲ್ಲಿ ಬ್ಯಾರಿಕೇಡ್‌ ಹಾಕಲಾಗಿದ್ದು, ಎಲ್ಲಾ ಪ್ರಮುಖ ಅಡ್ಡ ರಸ್ತೆಗಳನ್ನೂ ನಿಗದಿತವಾಗಿ ಬಂದೋಬಸ್ತ್ ಮಾಡಲಾಗಿದೆ. ಪ್ರತಿಯೊಂದು ಪ್ರವೇಶ ಬಾಗಿಲುಗಳಲ್ಲಿ ನಾಕಾ ಬಂದಿಯನ್ನು ಸಜ್ಜುಗೊಳಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...