ಮುರುಘಾ ಮಠಕ್ಕೆ ಸರ್ಕಾರದ ಆಡಳಿತಾಧಿಕಾರಿ ನೇಮಕ ರದ್ದು; ಹೈಕೋರ್ಟ್ ಆದೇಶ

Date:

ಚಿತ್ರದುರ್ಗದ ಮುರುಘಾ ಮಠಕ್ಕೆ ಸರ್ಕಾರದ ಆಡಳಿತಾಧಿಕಾರಿ ನೇಮಕವನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ. ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಿಸುವ ಅಧಿಕಾರ ಸರ್ಕಾರಕ್ಕೆ ಇಲ್ಲ. ವೀರಶೈವ ಮುಖಂಡರು, ಸಮಾಜದ ಪ್ರಮುಖರು ಆಡಳಿತ ನಡೆಸಬಹುದು ಎಂದು ಹೇಳಿದೆ.

ಇನ್ನು ನಾಲ್ಕು ವಾರಗಳ ಕಾಲ ಮಾತ್ರ ಆಡಳಿತಾಧಿಕಾರಿ ಮುಂದುವರಿಯಬಹುದು. ನಾಲ್ಕು ವಾರಗಳ ನಂತರ ಆಡಳಿತಾಧಿಕಾರಿಗೆ ಅಧಿಕಾರವಿಲ್ಲ ಎಂದು ಹೈಕೋರ್ಟ್ ಹೇಳಿದೆ.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿಗಳು ಪೋಕ್ಸೋ ಕಾಯ್ದೆಯಡಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಹಿನ್ನೆಲೆ ಟ್ರಸ್ಟ್ ಮತ್ತು ಶಿಕ್ಷಣ ಸಂಸ್ಥೆಗಳ ನಿರ್ವಹಣೆಗಾಗಿ ಆಡಳಿತಾಧಿಕಾರಿ ನೇಮಕ ಮಾಡುವಂತೆ ಭಕ್ತರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದರು.

ಅದ್ಧರಿಂದ ರಾಜ್ಯ ಸರ್ಕಾರ ಡಿಸೆಂಬರ್ 13 ರಂದು ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ಅವರನ್ನು ಮುರುಘಾಮಠದ ಆಡಳಿತಾಧಿಕಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿತ್ತು.

ಈ ಸುದ್ದಿ ಓದಿದ್ದೀರಾ? ಎಸ್‌ ಎಂ ಕೃಷ್ಣ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಡಿಸಿಎಂ ಡಿ ಕೆ ಶಿವಕುಮಾರ್‌

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಸಚಿವರು | ಆರ್‌ ಬಿ ತಿಮ್ಮಾಪೂರ್‌ ಮಂತ್ರಿಯಾದರೂ ಮುಧೋಳ ಕ್ಷೇತ್ರದ ಜನರಿಗೆ ನೀಗದ ಬವಣೆ  

ಬಾಗಲಕೋಟೆ ಜಿಲ್ಲೆಯ ಏಕೈಕ ಎಸ್ಸಿ ಮೀಸಲು ಕ್ಷೇತ್ರದಲ್ಲಿ ಮಾಜಿ ಉಪ ಮುಖ್ಯಮಂತ್ರಿ,...

ಮಂಡ್ಯ | ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ : ಸಚಿವ ಎನ್ ಚೆಲುವರಾಯಸ್ವಾಮಿ

ಮಂಡ್ಯ ಜಿಲ್ಲೆಯಲ್ಲಿ ಹಲವು ಸಮಸ್ಯೆಗಳಿದ್ದು, ಅವುಗಳನ್ನು ಹಂತ ಹಂತವಾಗಿ ಪರಿಹರಿಸಿ, ಜಿಲ್ಲೆಯ...

ರಾಮನಗರ | ಕಾಡಾನೆ ದಾಳಿಗೆ ಸಾವು; ಕುಟುಂಬಕ್ಕೆ ಸಚಿವರಿಂದ ಪರಿಹಾರದ ಚೆಕ್‌ ವಿತರಣೆ

ರಾಮನಗರ ಜಿಲ್ಲೆ ಕನಕಪುರ ಬಳಿಯ ಮುತ್ತುರಾಯನ ದೊಡ್ಡಿ ಗ್ರಾಮಕ್ಕೆ ಅರಣ್ಯ ಜೀವಿಶಾಸ್ತ್ರ...

ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿರುವ 1500 ಪ್ರಯಾಣಿಕರಿಗೆ ಅಗತ್ಯ ನೆರವು

1500 ಕಾರ್ಮಿಕರಿಗೆ ಬಿಬಿಎಂಪಿ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳಿಂದ ನೆರವು ಕಾರ್ಮಿಕರ ನೆರವಿಗೆ...