ನ್ಯಾಯಾಲಯದಲ್ಲಿ 2,72,041 ಪ್ರಕರಣ ಬಾಕಿ: ಹೈಕೋರ್ಟ್‌ ಮುಖ್ಯ ನ್ಯಾ. ಪ್ರಸನ್ನ ಬಿ ವರಲೆ ಕಳವಳ

Date:

  • 77ನೇ ಸ್ವಾತಂತ್ರ್ಯ ದಿನದ ಧ್ವಜಾರೋಹಣ ನೆರವೇರಿಸಿ ಹೇಳಿಕೆ
  • ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು’

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು. ಕಾನೂನಿನ ಮುಂದೆ ಎಲ್ಲರೂ ಸರಿಸಮಾನರು ಎಂದು ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಲೆ ತಿಳಿಸಿದರು.

- Advertisement -

ಹೈಕೋರ್ಟ್‌ ಆವರಣದಲ್ಲಿ 77ನೇ ಸ್ವಾತಂತ್ರ್ಯ ದಿನದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, “ಸಮಾಜದಲ್ಲಿ ನ್ಯಾಯಾಂಗದ ಜವಾಬ್ದಾರಿ ಹಿರಿದಿದೆ. ಅದರ ಮೌಲ್ಯ ಹಾಗೂ ತತ್ವಗಳನ್ನು ನಾವೆಲ್ಲರೂ ಅರಿತುಕೊಳ್ಳಬೇಕು. ನ್ಯಾಯ ಪಡೆಯುವುದು ಪ್ರತಿಯೊಬ್ಬನ ನಾಗರಿಕನ ಹಕ್ಕು ಹೊರತು ವಿಶೇಷ ಸವಲತ್ತಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ನ್ಯಾಯ ಪಡೆಯಲು ಬಡವ, ಶ್ರೀಮಂತ ಮುಂತಾದ ಯಾವುದೇ ಮಾನದಂಡವಿಲ್ಲ. ಕಾನೂನಿನ ಮುಂದೆ ವ್ತಕ್ತಿಯ ಸಾಮಾಜಿಕ, ಆರ್ಥಿಕ ಅರ್ಹತೆ ಯಾವುದೇ ಪ್ರಭಾವ ಬೀರುವುದಿಲ್ಲ. ತಪ್ಪಿತಸ್ಥರಿಗೆ ಶಿಕ್ಷೆ ನೀಡಿ ನ್ಯಾಯಾಂಗ ವ್ಯವಸ್ಥೆಯನ್ನು ಇನ್ನಷ್ಟು ಬಲಗೊಳಿಸಲು ನಾಯಾಧೀಶರು, ವಕೀಲರು ಶ್ರಮಿಸಬೇಕು. ನ್ಯಾಯಾಲಯದಲ್ಲಿ 2,72,041 ಪ್ರಕರಣಗಳು ಬಾಕಿ ಉಳಿದಿದ್ದು, ಇವುಗಳನ್ನು‌ ಬೇಗ ವಿಲೇವಾರಿ ಮಾಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಕೋಮುವಾದಿ ಶಕ್ತಿಗಳ ವಿರುದ್ಧ ಮತ್ತೊಂದು ಸಂಗ್ರಾಮ ನಡೆಯಬೇಕು: ಡಿಕೆ ಶಿವಕುಮಾರ್

“ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದಿಂದ ನಮಗೆ ಸ್ವಾತಂತ್ರ್ಯ ದೊರೆತಿದೆ‌. ಇದನ್ನು ಉಳಿಸಿಕೊಳ್ಳಬೇಕಾದ ಜವಾಬ್ದಾರಿ ನಮ್ಮ ಮೇಲಿದೆ” ಎಂದರು.

ಈ ಸಂದರ್ಭದಲ್ಲಿ ಉಚ್ಚ ನ್ಯಾಯಾಲಯದ ನ್ಯಾಯಾಧೀಶರುಗಳು, ಹೆಚ್ಚುವರಿ ಸಾಲಿಸಿಟರ್ ಜನರಲ್ ಶಾಂತಿಭೂಷಣ್, ವಕೀಲರ ಸಂಘದ ಅಧ್ಯಕ್ಷರಾದ ವಿವೇಕ್ ಸುಬ್ಬಾರೆಡ್ಡಿ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಜಿ. ರವಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ ನಿರೂಪಣೆ

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ,...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....