ಸರ್ಕಾರಗಳು ಬದಲಾದರೂ ಶಾಲೆಗಳು ಅಭಿವೃದ್ಧಿ ಕಂಡಿಲ್ಲ: ಹೈಕೋರ್ಟ್‌ ತರಾಟೆ

Date:

Advertisements
  • 2,901 ಮಕ್ಕಳು ಶಾಲೆಯಿಂದ ಹೊರಗೆ, 4,122 ಶಾಲೆಗಳಲ್ಲಿ ಸೌಕರ್ಯವಿಲ್ಲ
  • 464 ಶಾಲೆಗಳಲ್ಲಿ ಶೌಚಾಲಯ ಇಲ್ಲ, 87 ಶಾಲೆಗಳಲ್ಲಿ ಕುಡಿಯುವ ನೀರಿಲ್ಲ

ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಕೊರತೆಗಳಿರುವ ಬಗ್ಗೆ 2013 ರಿಂದಲೂ ಸ್ವಯಂಪ್ರೇರಿತ ಪಿಐಎಲ್ ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್ ಶಾಲೆಗಳಲ್ಲಿನ ಮೂಲ ಸೌಕರ್ಯ ಕೊರತೆ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದೆ.

ಕಾಲಮಿತಿಯಲ್ಲಿ ಮೂಲ ಸೌಕರ್ಯ ಒದಗಿಸುವಂತೆ ಹೈಕೋರ್ಟ್ ಈ ಹಿಂದೆಯೇ ನಿರ್ದೇಶನ ನೀಡಿತ್ತು. ಹೈಕೋರ್ಟ್ ಆದೇಶದ ಅನುಸಾರ ಕೈಗೊಂಡ ಕ್ರಮಗಳ ಬಗ್ಗೆ ಸರ್ಕಾರ ಗುರುವಾರ ವರದಿ ಸಲ್ಲಿಸಿದೆ.

ವರದಿಯ ಜೊತೆಗೆ ಸಲ್ಲಿಸಲಾಗಿದ್ದ ಶೌಚಾಲಯಗಳ ಫೋಟೋ ಗಮನಿಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಎಂ ಜಿ ಎಸ್ ಕಮಲ್ ಅವರಿದ್ದ ವಿಭಾಗೀಯ ಪೀಠ ಶಾಲೆಗಳಲ್ಲಿ ನೀರು, ಶೌಚಾಲಯಗಳ ದುಸ್ಥಿತಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

Advertisements

ಶೌಚಾಲಯಗಳ ಫೋಟೊ ನಮ್ಮ ಆತ್ಮಸಾಕ್ಷಿಗೆ ಆಘಾತ ನೀಡುತ್ತಿದೆ. ಶೌಚಾಲಯಗಳು ದುಸ್ಥಿತಿಯಲ್ಲಿವೆ, ಗಿಡಬಳ್ಳಿ ಬೆಳೆದಿವೆ. ಅಧಿಕಾರಿಗಳು ತಮ್ಮ ಮನೆ ಶೌಚಾಲಯವನ್ನೂ ಹೀಗೇ ಇಟ್ಟುಕೊಳ್ಳುತ್ತಾರಾ? ಸರ್ಕಾರ ಸಲ್ಲಿಸಿರುವ ವರದಿ ಬೇಸರದಾಯಕ, ಆಘಾತಕಾರಿ ಎಂದು ಕೋರ್ಟ್‌ ಬೇಸರ ವ್ಯಕ್ತಪಡಿಸಿದೆ.

ಕುಡಿಯುವ ನೀರನ್ನು ತಲೆ ಮೇಲೆ ಹೊತ್ತು ತರಲಾಗುತ್ತಿದೆ ಎಂದು ವರದಿಯಲ್ಲಿದೆ. ಕುಡಿಯುವ ನೀರಿನ ಪೂರೈಕೆ ಮಾಡಲೂ ಸರ್ಕಾರಕ್ಕೆ ಸಾಧ್ಯವಿಲ್ಲವೇ. ಮೂಲ ಸೌಕರ್ಯ ಇಲ್ಲದ ಶಾಲೆಗಳಿಂದ ಉತ್ತಮ ಶಿಕ್ಷಣ ಸಾಧ್ಯವೇ. ಎಂಥ ಸಮಾಜವನ್ನು ನಾವು ನಿರ್ಮಿಸುತ್ತಿದ್ದೇವೆ. ಇಂತಹ ವರದಿ ಸಲ್ಲಿಸುವ ಧೈರ್ಯ ಅಧಿಕಾರಿಗಳಿಗೆ ಹೇಗೆ ಬಂತು. ಇದಕ್ಕೆಲ್ಲಾ ಯಾರು ಜವಾಬ್ದಾರಿ ಯಾರು ಉತ್ತರದಾಯಿ? ಅಧಿಕಾರಿಗಳ ‘ಚಲ್ತಾ ಹೈ’ ಮನಸ್ಥಿತಿ ಸಹಿಸಲು ಸಾಧ್ಯವಿಲ್ಲ. ಇಂತಹ ಶಾಲೆಗೆ ಅಧಿಕಾರಿಗಳು ತಮ್ಮ ಮಕ್ಕಳನ್ನು ಕಳುಹಿಸುತ್ತಾರಾ ಎಂದು ಹೈಕೋರ್ಟ್ ಪ್ರಶ್ನಿಸಿದೆ.

2013ರಲ್ಲಿ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾದಾಗಿನಿಂದಲೂ ಮೂರು ಸರ್ಕಾರಗಳು ಬದಲಾಗಿವೆ. ಆದರೂ ಶಾಲೆಗಳ ಪರಿಸ್ಥಿತಿ ಬದಲಾಗಿಲ್ಲ. ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸ್ವಲ್ಪವಾದರೂ ಕಾಳಜಿ, ಗಂಭೀರತೆ ಇರಬೇಕು. ಪರಿಸ್ಥಿತಿ ನೋಡಿ ನಮಗೆ ನೋವಾಗಿದೆ, ಖಿನ್ನರಾಗಿದ್ದೇವೆ. ಶಾಲೆಗಳ ಶೌಚಾಲಯದ ಸ್ಥಿತಿ ಕರುಣಾಜನಕವಾಗಿದೆ. ಯಾವ ಪೋಷಕರೂ ಇಂತಹ ಶಾಲೆಗೆ ಮಕ್ಕಳನ್ನು ಕಳಿಸಲ್ಲ. ಹೆಸರಿಗೆ ಮಾತ್ರ ಶೌಚಾಲಯ ನಿರ್ಮಿಸಲಾಗಿದೆ ಸರ್ಕಾರದ ವರದಿ ಕೇವಲ ಕಣ್ಣೊರೆಸುವ ತಂತ್ರವಿದ್ದಂತಿದೆ ಎಂದು ನ್ಯಾಯಪೀಠವು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಈ ಸುದ್ದಿ ಓದಿದ್ದೀರಾ? ಅಕ್ಕಿ ಕೊಡದಿರುವ ನೀಚ ಬುದ್ಧಿ ನಮಗಿಲ್ಲ: ಡಿ ವಿ ಸದಾಂದಗೌಡ ತಿರುಗೇಟು

ಮಕ್ಕಳನ್ನು ಅವರ ಹಕ್ಕಿನಿಂದ ವಂಚಿತಗೊಳಿಸಲಾಗುತ್ತಿದೆ. ಮೂರು ತಿಂಗಳಲ್ಲಿ ಹೊಸದಾಗಿ ಸರ್ವೆ ನಡೆಸಿ ವರದಿ ಸಲ್ಲಿಸಬೇಕು. ಹೈಕೋರ್ಟ್‌ನ ಆದೇಶದ ವಿವರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ತಲುಪಿಸುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಒದಗಿಸುವ ವಿಚಾರದ ಬಗ್ಗೆ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ವಿಚಾರಣೆ ನಡೆಸಿರುವ ಹೈಕೋರ್ಟ್, ಕಾಲಕಾಲಕ್ಕೆ ಸರ್ಕಾರದಿಂದ ವರದಿ ಕೇಳುತ್ತಿದೆ. ಶಾಲೆಗಳಿಂದ ಹೊರಗುಳಿದ ವಿದ್ಯಾರ್ಥಿಗಳ ಬಗ್ಗೆಯೂ ವರದಿ ಪಡೆಯುತ್ತಿದೆ. ಹೈಕೋರ್ಟ್ ಗೆ ಸಲಹೆ ನೀಡಲು ಅಮಿಕಸ್ ಕ್ಯೂರಿಯಾಗಿ ಹಿರಿಯ ವಕೀಲ ಕೆ.ಎನ್. ಫಣೀಂದ್ರರನ್ನು ನೇಮಕಗೊಳಿಸಲಾಗಿದೆ.

ಕಳೆದ ತಿಂಗಳು ವರದಿ ನೀಡಿದ್ದ ಅಮಿಕಸ್ ಕ್ಯೂರಿ 2,901 ಮಕ್ಕಳು ಇನ್ನೂ ಶಾಲೆಯಿಂದ ಹೊರಗುಳಿದಿದ್ದಾರೆ. 4,122 ಶಾಲೆಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಇದೆ. 464 ಶಾಲೆಗಳಲ್ಲಿ ಶೌಚಾಲಯ ಇಲ್ಲ, 87 ಶಾಲೆಗಳಲ್ಲಿ ಕುಡಿಯುವ ನೀರಿಲ್ಲ ಎಂದು ವರದಿ ನೀಡಿತ್ತು. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಆದೇಶಿಸಿದ್ದ ಹಿನ್ನೆಲೆ ಗುರುವಾರ ವಿಚಾರಣೆ ನಡೆದಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X