ಕೆಪಿಟಿಸಿಎಲ್ 404 ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಹೈಕೋರ್ಟ್‌ ಸೂಚನೆ

Date:

404 ಸಹಾಯಕ ಎಂಜಿನಿಯರ್‌ಗಳ (ಎಇ) ಹುದ್ದೆಗಳಿಗೆ ತಾತ್ಕಾಲಿಕವಾಗಿ ನೇಮಕಾತಿ ನಡೆಸಲು ಕರ್ನಾಟಕ ರಾಜ್ಯ ವಿದ್ಯುತ್ ಪ್ರಸರಣ ನಿಗಮ ನಿಯಮಿತಕ್ಕೆ (ಕೆಪಿಟಿಸಿಎಲ್) ಹೈಕೋರ್ಟ್‌ ನಿರ್ದೇಶಿಸಿ, ಮಧ್ಯಂತರ ಆದೇಶ ಹೊರಡಿಸಿಎ. ಈ ನೇಮಕಾತಿಯ ನ್ಯಾಯಾಲಯದ ಅಂತಿಮ ಆದೇಶಕ್ಕೆ ಬದ್ಧವಾಗಿರುತ್ತದೆಂದು ನೇಮಕಾತಿಯಲ್ಲಿ ಉಲ್ಲೇಖಿಸಲು ಸೂಚನೆ ನೀಡಿದೆ.

- Advertisement -

2022ರ ಆಗಸ್ಟ್ 7ರಂದು ಕೆಪಿಟಿಸಿಎಲ್‌ನ ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಪರೀಕ್ಷೆ ನಡೆದಿತ್ತು. ಆದರೆ, ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್‌ನ ಖಾಸಗಿ ಕಾಲೇಜಿನಲ್ಲಿ ಅಭ್ಯರ್ಥಿಗಳು ಉತ್ತರ ನಕಲು ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿತ್ತು. ಅಲ್ಲದೆ, ಅಕ್ರಮದಲ್ಲಿ ಭಾಗಿಯಾಗಿದ್ದ ಹಲವನ್ನು ಬಂಧಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದೆಲ್ಲದರ ನಡುವೆ, 2023ರ ಫೆಬ್ರುವರಿ 4ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಾತ್ಕಾಲಿಕ ಅರ್ಹತಾ ಪಟ್ಟಿಯನ್ನು ಪ್ರಕಟಿಸಿತು. ಆದರೆ, ಆ ಪಟ್ಟಿಯನ್ನು ಹೈಕೋರ್ಟ್‌ನ ಏಕಸದಸ್ಯ ನ್ಯಾಯಪೀಠ ರದ್ದುಪಡಿಸಿತ್ತು. ರದ್ದತಿಯನ್ನು ಪ್ರಶ್ನಿಸಿ ಪಟ್ಟಿಯಲ್ಲಿ ಅರ್ಹತೆ ಪಡೆದಿದ್ದ ಅಭ್ಯರ್ಥಿಗಳು ಮೇಲ್ಮನವಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿರುವ ಮುಖ್ಯ ನ್ಯಾಯಮೂರ್ತಿ ಪಿ.ಎಸ್ ದಿನೇಶ್ ಕುಮಾರ್, ಮತ್ತು ನ್ಯಾ. ಟಿ.ಜಿ ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠವು. ತಾತ್ಕಾಲಿಕ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದ ಅರ್ಹ ಅಭ್ಯರ್ಥಿಗಳನ್ನು ತಾತ್ಕಾಲಿಕ ನೇಮಕಾತಿ ಮಾಡಿಕೊಂಡು, ತಾತ್ಕಾಲಿಕ ನೇಮಕಾತಿ ಆದೇಶ ಪತ್ರ ನೀಡುವಂತೆ ಮಧ್ಯಂತರ ತೀರ್ಪು ನೀಡಿದೆ.

“ಈ ನೇಮಕಾತಿ ನ್ಯಾಯಾಲಯದ ಅಂತಿಮ ತೀರ್ಪಿಗೆ ಬದ್ದವಾಗಿರಬೇಕು. ಕೋರ್ಟ್‌ ತೀರ್ಪಿಗೆ ಅನುಗುಣವಾಗಿ ಸೇವಾ ಜೇಷ್ಠತೆ ಕಾಯ್ದುಕೊಳ್ಳಬೇಕು. ಒಂದು ವೇಳೆ, ಮೇಲ್ಮನವಿ ಪುರಸ್ಕೃತಗೊಂಡು ಅರ್ಜಿದಾರರು ಆಯ್ಕೆಗೊಂಡರೆ, ಅವರ ನೇಮಕಾತಿಯಲ್ಲಿ ಸೇವಾ ಹಿರಿತನ ಮತ್ತು ರೋಸ್ಟರ್ ಪಾಲಿಸಬೇಕು” ಎಂದು ಹೇಳಿದೆ. ಮುಂದಿನ ವಿಚಾರಣೆಯನ್ನು ಮಾರ್ಚ್ 13ಕ್ಕೆ ಮುಂದೂಡಿದೆ.

2023ರಲ್ಲಿ ಪ್ರಕಟವಾಗಿರುವ ತಾತ್ಕಾಲಿಕ ಅರ್ಹತಾ ಪಟ್ಟಿಯಲ್ಲಿ – 313 ಮೂಲ ವೃಂದ, 91 ಕಲ್ಯಾಣ ಕರ್ನಾಟಕ ವೃಂದದ – ಒಟ್ಟು 202 ಅಭ್ಯರ್ಥಿಗಳು ಆಯ್ಕೆಯಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...