ಕೋಲಾರ | ಮಾಲೂರು ಶಾಸಕರಿಗೆ ತಲೆನೋವಾದ ಹೈಕೋರ್ಟ್‌ ಆದೇಶ!

Date:

Advertisements

ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಮತ ಎಣಿಕೆಯ ವಿಚಾರದ ಸಂಬಂಧ ಹೈಕೋರ್ಟ್ ಆದೇಶ ಹೊರಬಿದ್ದ ಹಿನ್ನೆಲೆಯಲ್ಲಿ ಮಾಲೂರು ಶಾಸಕ ನಂಜೇಗೌಡ ಅವರಿಗೆ ಇಡಿ ದಾಳಿ ಬಳಿಕ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.

2023ರ ವಿಧಾನಸಭಾ ಚುನಾವಣೆ ಪರಾಜಿತ ಅಭ್ಯರ್ಥಿ ಮಂಜುನಾಥ್ ಗೌಡ 2023ರ ಚುನಾವಣೆಯ ಮತ ಎಣಿಕೆಯನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆ ನ್ಯಾಯಾಲಯಕ್ಕೆ ಸೂಕ್ತ ದಾಖಲೆಗಳನ್ನು ಒದಗಿಸುವ ಸಲುವಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ.

ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸ್ಟ್ರಾಂಗ್ ರೂಮ್ ಬಾಗಿಲು ಇಂದು ತೆರೆಯಲಿದ್ದು, ರಾಷ್ಟ್ರೀಯ ಪಕ್ಷಗಳ ಅಧಿಕೃತ ಅಭ್ಯರ್ಥಿಗಳ ಸಮಕ್ಷಮದಲ್ಲಿ ದಾಖಲೆಗಳ ಪರಿಶೀಲನೆ ನಡೆಸಲು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನುಮತಿ ನೀಡಿದ್ದಾರೆ.

Advertisements
ಮಂಜುನಾಥ್ ಗೌಡ
ಕೆ.ಎಸ್.ಮಂಜುನಾಥ್ ಗೌಡ

ಪ್ರಮುಖ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಸಿಪಿಎಂ, ಆಮ್ ಆದ್ಮಿ ಪಕ್ಷ, ಬಿ.ಎಸ್.ಪಿ.ಪಕ್ಷಗಳಿಗೆ ಮತ ಎಣಿಕೆ ಸಂದರ್ಭದಲ್ಲಿ ಹಾಜರಿರುವಂತೆ ಜಿಲ್ಲಾಧಿಕಾರಿ ಅಕ್ರಂ ಪಾಷಾ ಪತ್ರ ಬರೆದಿದ್ದಾರೆ.

ಇದನ್ನು ಓದಿದ್ದೀರಾ?

2023ರ ವಿಧಾನಸಭಾ ಚುನಾವಣೆಯಲ್ಲಿ ಹಾಲಿ ಶಾಸಕ ಕೆ ವೈ ನಂಜೇಗೌಡ 50,955 ಮತಗಳು ಮತ್ತು ಕೆ.ಎಸ್.ಮಂಜುನಾಥ್ ಗೌಡ 50,707 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ನಂಜೇಗೌಡ 248 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಇದನ್ನು ಪ್ರಶ್ನಿಸಿ ಮಂಜುನಾಥ್ ಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಫಾರ್ಮ್‌ 17ಸಿ ದಾಖಲಾತಿಯನ್ನು ಕೊಡುವಂತೆ ಕೇಳಿತ್ತು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X